ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ರಾಜ್ಯದಲ್ಲಿ 5 ಕೋಟಿ ಗಿಡ ನೆಡುವ ಚಾಲನಾ ಕಾರ್ಯಕ್ರಮದ ಅಂಗವಾಗಿ ಜೂ.13ಕ್ಕೆ ಚಾಲನೆ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿಯೂ ಈ ಕಾರ್ಯಕ್ರಮದ ಅಂಗವಾಗಿ 5 ಲಕ್ಷ ಗಿಡಗಳನ್ನು ನೆಡುವ ಕಾರ್ಯ ಕ್ರಮಕ್ಕೆ ಚಾಲನೆ ನೀಡಲಾಗಿದ್ದು, ಈ ವರ್ಷದಲ್ಲಿ 5 ಲಕ್ಷ ಗಿಡಗಳನ್ನು ನೆಡಲಾಗುವುದು. ಸ್ಥಳೀಯ ಸಾರ್ವಜನಿಕರು ಈ ಎಲ್ಲ ಗಿಡಗಳನ್ನು ಉಳಿಸಿ ಬೆಳೆಸಿಕೊಳ್ಳುವ ಮೂಲಕ ಸಾಮಾಜಿಕ ಜವಾಬ್ದಾರಿ ಯನ್ನು ಮೆರೆಯಬೇಕು ಎಂದು ಮನವಿ ಮಾಡಿದರು.

ಹೈಕೋರ್ಟ್ ಮು.ನ್ಯಾ ವಿಭು ಬಖ್ರು ರಿಂದ ಮುದ್ದೇನಹಳ್ಳಿಯಲ್ಲಿ ಚಾಲನೆ

-

Profile
Ashok Nayak Jun 9, 2026 10:59 PM

ಚಿಕ್ಕಬಳ್ಳಾಪುರ: ವಿಶ್ವ ಪರಿಸರ ದಿನಾಚರಣೆ (World Environment Day)ಅಂಗವಾಗಿ ಇದೇ ಜೂ.13ರಂದು ಹಮ್ಮಿಕೊಂಡಿರುವ “5 ಕೋಟಿ ಗಿಡ ನೆಡುವ ಚಾಲನಾ ಕಾರ್ಯಕ್ರಮ”ಕ್ಕೆ ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರು ತಾಲ್ಲೂಕಿನ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದಲ್ಲಿ ಚಾಲನೆ ನೀಡಲಿ ದ್ದಾರೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಟಿ.ಪಿ.ರಾಮಲಿಂಗೇಗೌಡ(District Chief and Sessions Judge T.P. Rama lingegowda) ತಿಳಿಸಿದರು.

ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ರಾಜ್ಯ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾಡಳಿತ, ಪ್ರಶಾಂತಿ ಬಾಲ ಮಂದಿರ, ದರೆ ಫೌಂಡೇಶನ್ ಇವರ ಸಹಯೋಗ ದಲ್ಲಿ “ರಾಜ್ಯದಲ್ಲಿ 5 ಕೋಟಿ ಸಸಿ ನೆಡುವ ಕಾರ್ಯಕ್ರಮ”ದ ಕುರಿತಾಗಿ ಮಂಗಳವಾರ ಸುದ್ದಿಗಾರ ರನ್ನು ಉದ್ದೇಶಿಸಿ ಮಾತನಾಡಿದರು.

“ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ” ಎಂಬ ಧ್ಯೇಯದೊಂದಿಗೆ ರಾಜ್ಯದಲ್ಲಿ 5 ಕೋಟಿ ಗಿಡ ಗಳನ್ನು ನೆಟ್ಟು ಬೆಳೆಸುವ ಮಹತ್ವಾಕಾಂಕ್ಷಿ ಕಾರ್ಯಕ್ರಮಕ್ಕೆ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಮುಂದಾಗಿರುವುದು ಹರ್ಷದಾಯಕವಾದ ವಿಚಾರವಾಗಿದ್ದು, ಈ ಕಾರ್ಯಕ್ರಮವನ್ನು ವಿದ್ಯುಕ್ತ ವಾಗಿ ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಚಾಲನೆ ದೊರಕುತ್ತಿರುವುದು ಸಂತಸದ ವಿಷಯವಾಗಿದೆ ಎಂದರು.

ಇದನ್ನೂ ಓದಿ: Chikkaballapur News: ಸಾಮಾಜಿಕ ಸಂಬಂಧಗಳಿಂದಲೇ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ : ಡಾ.ಲೋಕನಾಥ್

ಈ ಕಾರ್ಯಕ್ರಮಕ್ಕೆ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹೆಚ್.ಶಶಿಧರ್ ಶೆಟ್ಟಿ, ಹೈಕೋರ್ಟ್ ನ್ಯಾಯಮೂರ್ತಿಗಳು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ನ್ಯಾಯಾಲಯಗಳ ಆಡಳಿತಾತ್ಮಕ ನ್ಯಾಯಮೂರ್ತಿಗಳಾದ ಹಂಚಾಟೆ ಸಂಜೀವ ಕುಮಾರ್ ಅವರು ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿಯೂ ಈ ಕಾರ್ಯಕ್ರಮದ ಅಂಗವಾಗಿ 5 ಲಕ್ಷ ಗಿಡಗಳನ್ನು ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದ್ದು, ಈ ವರ್ಷದಲ್ಲಿ 5 ಲಕ್ಷ ಗಿಡಗಳನ್ನು ನೆಡಲಾಗುವುದು. ಸ್ಥಳೀಯ ಸಾರ್ವಜನಿಕರು ಈ ಎಲ್ಲ ಗಿಡಗಳನ್ನು ಉಳಿಸಿ ಬೆಳೆಸಿಕೊಳ್ಳುವ ಮೂಲಕ ಸಾಮಾಜಿಕ ಜವಾಬ್ದಾರಿಯನ್ನು ಮೆರೆಯಬೇಕು ಎಂದು ಮನವಿ ಮಾಡಿದರು.

ಮಂಚೇನಹಳ್ಳಿ ಮತ್ತು ಚೇಳೂರಿನಲ್ಲಿ ಕೋರ್ಟ್ ಕಲಾಪ
ಜಿಲ್ಲೆಯಲ್ಲಿ ನೂತನವಾಗಿ ರಚನೆ ಆಗಿರುವ ಮಂಚೇನಹಳ್ಳಿ ಹಾಗೂ ಚೇಳೂರು ತಾಲ್ಲೂಕು ಕೇಂದ್ರ ಗಳಲ್ಲಿ ಮುಂದಿನ ವಾರದಿಂದ ವಾರಕ್ಕೆ ಎರಡು ದಿನ ಕೋರ್ಟ್ ಕಲಾಪಗಳು ಬಾಡಿಗೆ ಕಟ್ಟಡಗಳಲ್ಲಿ ನಡೆಯಲಿವೆ. ಈ ತಾಲ್ಲೂಕು ಕೇಂದ್ರಗಳಲ್ಲಿ ನ್ಯಾಯಾಲಯದ ಕಟ್ಟಡಗಳನ್ನು ನಿರ್ಮಿಸಲು ಜಾಗ ಗಳನ್ನು ಗುರ್ತಿಸುವ ಕಾರ್ಯ ಪ್ರಗತಿಯಲ್ಲಿದ್ದು, ನ್ಯಾಯಾಲಯಗಳ ಸ್ಥಾಪನೆಗೆ ಅಗತ್ಯ ಪೂರ್ವ ಸಿದ್ಧತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದರು.

ಚಿಂತಾಮಣಿ ಮತ್ತು ಗುಡಿಬಂಡೆ ತಾಲ್ಲೂಕು ಕೇಂದ್ರಗಳಲ್ಲಿರುವ ನ್ಯಾಯಾಲಯಗಳಲ್ಲಿ ನ್ಯಾಯಾ ಧೀಶರ ನೇಮಕಾತಿಯ ಕೊರತೆಯಿಂದ ನ್ಯಾಯಾಲಯದ ಕಲಾಪಗಳಿಗೆ ತೊಡಕಾಗಿತ್ತು. ಈ ಎರಡು ಕೋರ್ಟ್ ಗಳಿಗೆ ನೂತನವಾಗಿ ನ್ಯಾಯಾಧೀಶರು ನೇಮಕವಾಗಿದ್ದು, ಬರುವ 15ನೇ ತಾರೀಕಿನಿಂದ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳುತ್ತಿದ್ದಾರೆ. ಒಟ್ಟಾರೆ ಜಿಲ್ಲೆಯಲ್ಲಿರುವ ಬಾಕಿ ಪ್ರಕರಣಗಳನ್ನು ತ್ವರಿತವಾಗಿ ಹಾಗೂ ಸಮರ್ಪಕ ಇತ್ಯರ್ಥಕ್ಕೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.

ಜುಲೈ 11ಕ್ಕೆ ಬೃಹತ್ ಲೋಕಾ ಅದಾಲತ್
2026ನೇ ಸಾಲಿನ ಎರಡನೇ ಬೃಹತ್ ಲೋಕಾ ಅದಾಲತ್ ಕಾರ್ಯಕ್ರಮವನ್ನು ಜುಲೈ 11ರಂದು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಹಮ್ಮಿಕೊಂಡಿದ್ದು ಜಿಲ್ಲೆಯ ಸಾರ್ವಜನಿಕರು ಅದಾಲತ್ನಲ್ಲಿ ಭಾಗವಹಿಸಿ ತಮ್ಮ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳುವ ಮೂಲಕ ಸದುಪಯೋಗಪಡಿಸಿ ಕೊಳ್ಳಲು ಮನವಿ ಮಾಡಿದರು.

ಕಳೆದ ಮಾರ್ಚ್ ವರೆಗೆ 112310 ಪ್ರಕರಣಗಳನ್ನು ಅದಾಲತ್ ನಲ್ಲಿ ರಾಜಿ ಸಂಧಾನದ ಮೂಲಕ ಇತ್ಯರ್ಥ ಮಾಡಲಾಗಿದೆ.

ಮುಂದಿನ ಅದಾಲತ್ ನಲ್ಲಿ ರಾಜಿ ಸಂದಾನವಾಗುವ ಸು.16 ಸಾವಿರ ಪ್ರಕರಣಗಳನ್ನು ಈಗಾಗಲೇ ಗುರ್ತಿಸಲಾಗಿದೆ. ಸಂಬಂಧಪಟ್ಟ ಕಕ್ಷಿದಾರರು ಹಾಗೂ ಜಿಲ್ಲೆಯ ಸಾರ್ವಜನಿಕರು ಜುಲೈ 11 ರಂದು ಜಿಲ್ಲೆಯಲ್ಲಿ ನಡೆಯುವ ಅದಾಲತ್ ನಲ್ಲಿ ಭಾಗವಹಿಸಿ ತಮ್ಮ ಪ್ರಕರಣಗಳನ್ನು ಇತ್ಯರ್ಥ ಮಾಡಿ ಕೊಳ್ಳುವ ಮೂಲಕ ನೆಮ್ಮದಿಯುತ ಬದುಕನ್ನು ಕಟ್ಟಿಕೊಳ್ಳಬೇಕೆಂದು ನ್ಯಾಯಾಧೀಶರು ಮನವಿ ಮಾಡಿದರು.  

ಈ ವೇಳೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಶಿಲ್ಪ ಇದ್ದರು.