ಸುರಕ್ಷಿತ ಬಚ್ಪನ್’ ಅಭಿಯಾನದಡಿ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ
ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗಟ್ಟುವಿಕೆ, ಮಕ್ಕಳ ಹಕ್ಕುಗಳ ರಕ್ಷಣೆ ಹಾಗೂ ಪೋಕ್ಸೊ ಕಾಯ್ದೆಯ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ನಗರದ ಪಿ.ಪಿ.ಎಚ್.ಎಸ್. ಶಾಲೆಯಲ್ಲಿ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ಆಯೋಜಿಸಲಾಗಿತ್ತು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ವಕೀಲರ ಸಂಘ, ಮಕ್ಕಳ ಕಲ್ಯಾಣ ಸಮಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ‘ಸುರಕ್ಷಿತ ಬಚ್ಪನ್’ ಅಭಿಯಾನದಡಿ ಕಾರ್ಯಕ್ರಮ ನಡೆಯಿತು.
-
ಚಿಕ್ಕಬಳ್ಳಾಪುರ: ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗಟ್ಟುವಿಕೆ, ಮಕ್ಕಳ ಹಕ್ಕುಗಳ ರಕ್ಷಣೆ ಹಾಗೂ ಪೋಕ್ಸೊ ಕಾಯ್ದೆಯ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ನಗರದ ಪಿ.ಪಿ.ಎಚ್.ಎಸ್. ಶಾಲೆಯಲ್ಲಿ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ಆಯೋಜಿಸ ಲಾಗಿತ್ತು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ವಕೀಲರ ಸಂಘ, ಮಕ್ಕಳ ಕಲ್ಯಾಣ ಸಮಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ‘ಸುರಕ್ಷಿತ ಬಚ್ಪನ್’ ಅಭಿಯಾನದಡಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಟಿ.ಪಿ. ರಾಮಲಿಂಗೇಗೌಡ ಅವರು, ಮಕ್ಕಳ ಸುರಕ್ಷತೆ ಮತ್ತು ಹಕ್ಕುಗಳ ರಕ್ಷಣೆಯ ಮಹತ್ವದ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗಟ್ಟುವಲ್ಲಿ ಕಾನೂನು ಅರಿವು ಪ್ರಮುಖವಾಗಿದ್ದು, ಮಕ್ಕಳು ತಮ್ಮ ಸುರಕ್ಷತೆಯ ಬಗ್ಗೆ ತಿಳಿದುಕೊಳ್ಳುವುದು ಹಾಗೂ ಯಾವುದೇ ಅಹಿತಕರ ಘಟನೆಗಳು ಸಂಭವಿಸಿದಾಗ ಸೂಕ್ತ ನೆರವು ಪಡೆಯುವ ಮಾರ್ಗಗಳನ್ನು ಅರಿತುಕೊಳ್ಳುವುದು ಅಗತ್ಯವಾಗಿದೆ.
ಕಾರ್ಯಕ್ರಮದಲ್ಲಿ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸಿದ್ದಣ್ಣ ಬಿ. ಹಂದ್ರಾಳ್, ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶಿಲ್ಪಾ ಬಿ., ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಪರಿವೀಕ್ಷಣಾಧಿಕಾರಿ ರಾಮೇಗೌಡ ಡಿ.ಕೆ. ಹಾಗೂ ಸಹಾಯಕ ಕಾನೂನು ಅಭಿಯೋಜಕ ನರಸಿಂಹಮೂರ್ತಿ ಉಪಸ್ಥಿತ ರಿದ್ದರು.
ಪಿ.ಪಿ.ಎಚ್.ಎಸ್. ಶಾಲೆಯ ಮುಖ್ಯ ಶಿಕ್ಷಕ ಎಂ. ನಾರಾಯಣಸ್ವಾಮಿ, ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.