ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Chikkaballapur News: ವಿದ್ಯಾರ್ಥಿಗಳಿಗೆ ವಿವಿಧ ಕಾನೂನುಗಳ ಕುರಿತು ಅರಿವು ಮೂಡಿಸಿದ ಕಾನೂನು ಅಭಿರಕ್ಷಕರು

ಯಾರಾದರೂ ಮಕ್ಕಳೊಂದಿಗೆ ಅನುಚಿತವಾಗಿ ವರ್ತಿಸಿದರೆ, ಬೆದರಿಕೆ ಹಾಕಿದರೆ ಅಥವಾ ಯಾವುದೇ ರೀತಿಯ ಲೈಂಗಿಕ ಕಿರುಕುಳ ನೀಡಿದರೆ ಅದನ್ನು ಮರೆಮಾಚದೆ ಪೋಷಕರು, ಶಿಕ್ಷಕರು, ಶಾಲಾ ಮುಖ್ಯೋಪಾಧ್ಯಾಯರು, ಮಕ್ಕಳ ಸಹಾಯವಾಣಿ 1098 ಅಥವಾ ಪೊಲೀಸ್ ಇಲಾಖೆಗೆ ತಕ್ಷಣ ಮಾಹಿತಿ ನೀಡಬೇಕು

ವಿದ್ಯಾರ್ಥಿಗಳಿಗೆ ವಿವಿಧ ಕಾನೂನುಗಳ ಕುರಿತು ಅರಿವು

-

Profile
Ashok Nayak Jul 10, 2026 7:47 PM

ಚಿಕ್ಕಬಳ್ಳಾಪುರ: ನಗರದ ಸೆಂಟ್ ಜೋಸೆಫ್ ಪ್ರೌಢಶಾಲೆಯಲ್ಲಿ ನಡೆದ ಕಾನೂನು ಜಾಗೃತಿ ಕಾರ್ಯಕ್ರಮದಲ್ಲಿ ಕಾನೂನು ಅಭಿರಕ್ಷಕರಾದ ಶ್ರೀನಾಥ್, ವಿಜಯ್‌ಕುಮಾರ್ ಹಾಗೂ ವೆಂಕಟೇಶಪ್ಪ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆ, ಮಕ್ಕಳ ಹಕ್ಕುಗಳು, ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗೂ ವರದಕ್ಷಿಣೆ ನಿಷೇಧ ಕಾಯ್ದೆಗಳ ಕುರಿತು ಸರಳ ಮತ್ತು ಸುಲಭವಾಗಿ ಅರ್ಥವಾಗುವ ರೀತಿಯಲ್ಲಿ ಮಾಹಿತಿ ನೀಡಿದರು.

ಕಾನೂನು ಅಭಿರಕ್ಷಕರಾದ ಶ್ರೀನಾಥ್, ಮಾತನಾಡಿ ಪೋಕ್ಸೋ (POCSO) ಕಾಯ್ದೆಯು 18 ವರ್ಷ ಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಲೈಂಗಿಕ ದೌರ್ಜನ್ಯ, ಕಿರುಕುಳ ಹಾಗೂ ಶೋಷಣೆಯಿಂದ ರಕ್ಷಿಸಲು ಜಾರಿಗೊಳಿಸಿರುವ ವಿಶೇಷ ಕಾನೂನು ಎಂದು ತಿಳಿಸಿದರು.

ಯಾರಾದರೂ ಮಕ್ಕಳೊಂದಿಗೆ ಅನುಚಿತವಾಗಿ ವರ್ತಿಸಿದರೆ, ಬೆದರಿಕೆ ಹಾಕಿದರೆ ಅಥವಾ ಯಾವುದೇ ರೀತಿಯ ಲೈಂಗಿಕ ಕಿರುಕುಳ ನೀಡಿದರೆ ಅದನ್ನು ಮರೆಮಾಚದೆ ಪೋಷಕರು, ಶಿಕ್ಷಕರು, ಶಾಲಾ ಮುಖ್ಯೋಪಾಧ್ಯಾಯರು, ಮಕ್ಕಳ ಸಹಾಯವಾಣಿ 1098 ಅಥವಾ ಪೊಲೀಸ್ ಇಲಾಖೆಗೆ ತಕ್ಷಣ ಮಾಹಿತಿ ನೀಡಬೇಕು ಎಂದು ಸಲಹೆ ನೀಡಿದರು.

ಇದನ್ನೂ ಓದಿ: Chikkaballapur News: ರೈತರ ಭೂಮಿ ವಿವಾದ: ಜು.13ಕ್ಕೆ ತಹಶೀಲ್ದಾರ್ ಕಚೇರಿ ಎದುರು ಬೃಹತ್ ಪ್ರತಿಭಟನೆ: ಕೆ.ಸಿ.ರಾಜಾಕಾಂತ್

ವೆಂಕಟೇಶಪ್ಪ ಮಾತನಾಡಿ ಮಕ್ಕಳ ಹಕ್ಕುಗಳ ಕುರಿತು ಮಾತನಾಡಿದ ಅವರು, ಪ್ರತಿಯೊಬ್ಬ ಮಗುವಿಗೂ ಶಿಕ್ಷಣ ಪಡೆಯುವ ಹಕ್ಕು, ಸುರಕ್ಷಿತ ವಾತಾವರಣದಲ್ಲಿ ಬದುಕುವ ಹಕ್ಕು, ಆರೋಗ್ಯ ಸೇವೆ ಪಡೆಯುವ ಹಕ್ಕು, ಸಮಾನತೆ ಹಾಗೂ ಗೌರವದಿಂದ ಬದುಕುವ ಹಕ್ಕು ಇದೆ. ಯಾವುದೇ ಕಾರಣಕ್ಕೂ ಮಕ್ಕಳನ್ನು ದುಡಿಮೆಗೆ ತಳ್ಳುವುದು, ದೈಹಿಕ ಅಥವಾ ಮಾನಸಿಕ ಹಿಂಸೆ ನೀಡುವುದು ಕಾನೂನುಬಾಹಿರ ಎಂದು ತಿಳಿಸಿದರು.

ವಿಜಯಕುಮಾರ್ ಮಾತನಾಡಿ, ಬಾಲ್ಯ ವಿವಾಹ ನಿಷೇಧ ಕಾಯ್ದೆಯ ಬಗ್ಗೆ ವಿವರಿಸಿದ ಅವರು, ಹೆಣ್ಣು ಮಕ್ಕಳಿಗೆ 18 ವರ್ಷ ಮತ್ತು ಗಂಡು ಮಕ್ಕಳಿಗೆ 21 ವರ್ಷ ತುಂಬುವ ಮೊದಲು ಮದುವೆ ಮಾಡುವುದು ಕಾನೂನುಬಾಹಿರವಾಗಿದೆ. ಬಾಲ್ಯ ವಿವಾಹವು ಶಿಕ್ಷಣ, ಆರೋಗ್ಯ ಮತ್ತು ಭವಿಷ್ಯದ ಮೇಲೆ ಗಂಭೀರ ಪರಿಣಾಮ ಬೀರುವುದರಿಂದ ಇಂತಹ ಪ್ರಕರಣಗಳು ಕಂಡುಬಂದರೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ಹೇಳಿದರು.

ವರದಕ್ಷಿಣೆ ನಿಷೇಧ ಕಾಯ್ದೆಯ ಕುರಿತು ಮಾತನಾಡಿ, ಮದುವೆಯ ಸಮಯದಲ್ಲಿ ಹಣ, ಚಿನ್ನ, ವಾಹನ ಅಥವಾ ಇತರೆ ವಸ್ತುಗಳನ್ನು ಬೇಡುವುದು, ನೀಡುವುದು ಅಥವಾ ಪಡೆಯುವುದು ಕಾನೂನುಬಾಹಿರವಾಗಿದೆ. ವರದಕ್ಷಿಣೆ ಪದ್ಧತಿ ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಕಾರಣ ವಾಗುವುದರಿಂದ ಸಮಾಜದಿಂದ ಈ ಅನಿಷ್ಟ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕಿದೆ ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಕಾನೂನುಗಳ ಬಗ್ಗೆ ಕುತೂಹಲದಿಂದ ಪ್ರಶ್ನೆಗಳನ್ನು ಕೇಳಿ ಮಾಹಿತಿ ಪಡೆದರು. ಸಿಸ್ಟರ್ ಅಮುದಾ, ಮಕ್ಕಳ ಘಟಕದ ರಾಮೇಗೌಡ, ಗಾಯತ್ರಿ, ಪೊಲೀಸ್ ಇಲಾಖೆಯ ಸದಾನಂದ ಹಾಗೂ ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.