ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

MLA Ravikumar: ಜಯಂತಿಯನ್ನು ರಾಜಕೀಯಕ್ಕಿಂತ ಮೇಲಾಗಿ ಆಚರಿಸೋಣ: ಶಾಸಕ ರವಿಕುಮಾರ್

ಅಂಬೇಡ್ಕರ್ ಜಯಂತಿ ಅಂಗವಾಗಿ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಬಡ ಹಾಗೂ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದ್ದೇವೆ. ಸಮಾಜದ ಹಿಂದುಳಿದ ವರ್ಗಗಳ ಮಕ್ಕಳಿಗೆ ಉತ್ತೇಜನ ನೀಡುವುದು ಈ ಕಾರ್ಯಕ್ರಮಗಳ ಮುಖ್ಯ ಉದ್ದೇಶವಾಗಿದೆ

ಜಯಂತಿಯನ್ನು ರಾಜಕೀಯಕ್ಕಿಂತ ಮೇಲಾಗಿ ಆಚರಿಸೋಣ

-

Ashok Nayak
Ashok Nayak Mar 20, 2026 11:04 PM

ಶಿಡ್ಲಘಟ್ಟ: ಚುನಾವಣೆ ಸಮಯದಲ್ಲಿ ರಾಜಕೀಯ ಮಾಡಬಹುದು, ಆದರೆ ಮಹಾನ್ ನಾಯಕ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಪಕ್ಷಾತೀತವಾಗಿ ಆಚರಿಸ ಬೇಕು ಎಂದು ಶಾಸಕ ಬಿ.ಎನ್. ರವಿಕುಮಾರ್(MLA B.N. Ravikumar) ಕರೆ ನೀಡಿದರು.

ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಅಂಬೇಡ್ಕರ್ ಜಯಂತಿ ಹಾಗೂ ಬಾಬು ರಾಮ್‌ಜಿ ಜಯಂತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಯಾವುದೇ ಪಕ್ಷದ ಕಾರ್ಯಕ್ರಮವಾಗಿದ್ದರೂ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಾರೆ. ಆದರೆ ಬಾಬಾಸಾಹೇಬ್ ಅಂಬೇಡ್ಕರ್ ಅವರ ಜಯಂತಿಗೆ ಅಷ್ಟಾಗಿ ಜನರು ಸೇರದೇ ಇರುವುದು ಬೇಸರದ ಸಂಗತಿಯಾಗಿದೆ ಎಂದು ಹೇಳಿದರು.

ಅಂಬೇಡ್ಕರ್ ಜಯಂತಿ ಅಂಗವಾಗಿ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಬಡ ಹಾಗೂ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸು ವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದ್ದೇವೆ. ಸಮಾಜದ ಹಿಂದುಳಿದ ವರ್ಗಗಳ ಮಕ್ಕಳಿಗೆ ಉತ್ತೇಜನ ನೀಡುವುದು ಈ ಕಾರ್ಯಕ್ರಮಗಳ ಮುಖ್ಯ ಉದ್ದೇಶವಾಗಿದೆ ಎಂದರು.

ಇದನ್ನೂ ಓದಿ: Chikkaballapur News: ಸೇವಾ ಮನೋಭಾವದಲ್ಲಿ ಮೆರೆಯಿಸಿದ ಸಚಿವ ಡಾ.ಎಂ.ಸಿ.ಸುಧಾಕರ್ ಜನ್ಮದಿನಾಚರಣೆ

ಕಳೆದ ವರ್ಷ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಊಟಕ್ಕೆ ಜನಸಂದಣಿ ಹೆಚ್ಚಾಗಿ ಆಹಾ ರದ ಕೊರತೆ ಉಂಟಾಗಿತ್ತು. ಆದರೆ ಅಂಬೇಡ್ಕರ್ ಜಯಂತಿಯಂತಹ ಮಹತ್ವದ ಕಾರ್ಯ ಕ್ರಮಕ್ಕೆ ಅಷ್ಟೊಂದು ಜನ ಸೇರದೇ ಇರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಗಗನ ಸಿಂಧು ಮಾತನಾಡಿ, ಮಹಾನ್ ನಾಯಕರ ಜಯಂತಿ ಗಳನ್ನು ಸಮಾಜದ ಐಕ್ಯತೆಗೆ ಆಚರಿಸಬೇಕು. ಅಂಬೇಡ್ಕರ್ ಜಯಂತಿ ಹಾಗೂ ಬಾಬು ರಾಮ್‌ಜಿ ಜಯಂತಿಯನ್ನು ಒಟ್ಟಾಗಿ ಆಚರಿಸುವುದು ಉತ್ತಮ ಬೆಳವಣಿಗೆ ಆಗುತ್ತದೆ ಎಂದು ಹೇಳಿದರು. ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕರೆ ನೀಡಿದರು.

ಸಭೆಯಲ್ಲಿ ನಗರಸಭೆ ಪೌರಾಯುಕ್ತೆ ಅಮೃತಾ ಜಿ, ಕ್ಷೇತ್ರ ಶಿಕ್ಷಣಾಧಿಕಾರಿ ನರೇಂದ್ರ ಕುಮಾರ್, ಡಾ. ವೆಂಕಟೇಶ್ ಮೂರ್ತಿ, ಪಿ.ಎಸ್.ಐ ವೇಣುಗೋಪಾಲ, ವಕೀಲರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ, ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಮೇಲೂರು ಮಂಜುನಾಥ್, ಸಮಾಜ ಕಲ್ಯಾಣ ಇಲಾಖೆ ಜಗದೀಶ್, ದಲಿತ ಮುಖಂಡರಾದ ನರಸಿಂಮೂರ್ತಿ, ವೆಂಕಟೇಶ್ (ವೆಂಕಿ), ಚಲಪತಿ, ನಾಗ ನರಸಿಂಹ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ದಲಿತ ಸಂಘಟನೆಗಳ ಮುಖಂಡರು ಹಾಗೂ ಸಮಾಜದ ಗಣ್ಯರು ಉಪಸ್ಥಿತರಿದ್ದರು.