ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Lord Mahavir Jayanti: ಮಾ.31ಕ್ಕೆ ಭಗವಾನ್ ಮಹಾವೀರ್ ಜಯಂತಿ

ಕಾರ್ಯಕ್ರಮದ ಉದ್ಘಾಟನೆಯನ್ನು ಉನ್ನತ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್(Dr M C Sudhakar) ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಉಪಸ್ಥಿತಿಯನ್ನು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ಎಸ್ ತಂಗಡಗಿ (Shivaraj S Thangadgi) ನೆರವೇರಿಸಲಿದ್ದಾರೆ. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ಇ.ಪ್ರದೀಪ್ ಈಶ್ವರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

Lord Mahavir Jayanti: ಮಾ.31ಕ್ಕೆ ಭಗವಾನ್ ಮಹಾವೀರ್ ಜಯಂತಿ

-

Ashok Nayak
Ashok Nayak Mar 27, 2026 11:00 PM

ಚಿಕ್ಕಬಳ್ಳಾಪುರ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶ್ರೀ ಭಗವಾನ್ ಮಹಾವೀರ್ ಜಯಂತಿಯನ್ನು ಮಾ.31ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ 2ನೇ ಮಹಡಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಉನ್ನತ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ. ಸುಧಾಕರ್(Dr M C Sudhakar) ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಉಪಸ್ಥಿತಿಯನ್ನು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ಎಸ್ ತಂಗಡಗಿ (Shivaraj S Thangadgi) ನೆರವೇರಿಸ ಲಿದ್ದಾರೆ. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ಇ.ಪ್ರದೀಪ್ ಈಶ್ವರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಇದನ್ನೂ ಓದಿ: Chikkaballapur News: ಏಪ್ರಿಲ್ 1 ಕ್ಕೆ ಜನಗಣತಿ ಕಾರ್ಯಕ್ಕೆ ಚಾಲನೆ: ಜಿಲ್ಲಾಧಿಕಾರಿ ಜಿ.ಪ್ರಭು

ಮುಖ್ಯ ಅತಿಥಿಗಳಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ. ಕೆ.ಸುಧಾಕರ್(Dr. K. Sudhakar), ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಎಂ.ಮಲ್ಲೇಶ್ ಬಾಬು(M. Mallesh Babu), ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎನ್. ಸಂಪಂಗಿ, ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ನಿಯಮಿತದ ಅಧ್ಯಕ್ಷ ಡಾ.ಬಿ.ಸಿ. ಮುದ್ದುಗಂಗಾಧರ್, ಕರ್ನಾಟಕ ರಾಜ್ಯ ಬೀಜ ನಿಗಮದ ಅಧ್ಯಕ್ಷ ಆಂಜಿನಪ್ಪ, ಕರ್ನಾಟಕ ರಾಜ್ಯ ಸಹಕಾರ ಕೈಮಗ್ಗ ನೇಕಾರರ ಮಹಾಮಂಡಳಿ ನಿಗಮದ ಅಧ್ಯಕ್ಷ ಬಿ.ಜಿ. ಗಣೇಶ್ ಶಾಸಕರುಗಳಾದ ಎಸ್.ಎನ್.ಸುಬ್ಬಾ ರೆಡ್ಡಿ, ಬಿ.ಎನ್. ರವಿಕುಮಾರ್, ಕೆ.ಹೆಚ್. ಪುಟ್ಟಸ್ವಾಮಿಗೌಡ, ವಿಧಾನ ಪರಿಷತ್ತು ಶಾಸಕರಾದ ಚಿದಾನಂದ ಎಂ. ಗೌಡ, ಎಂ.ಎಲ್.ಅನಿಲ್ ಕುಮಾರ್, ಡಿ.ಟಿ. ಶ್ರೀನಿವಾಸ, ಡಾ. ಹೆಚ್.ನರಸಿಂಹಯ್ಯ ವಿಜ್ಞಾನ ಶೈಕ್ಷಣಿಕ ಸಾಂಸ್ಕೃತಿಕ ಮತ್ತು ಪ್ರವಾಸೋದ್ಯಮ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎನ್.ಹೆಚ್ ಶಿವಶಂಕರರೆಡ್ಡಿ, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್, ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎನ್. ಕೇಶವರೆಡ್ಡಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎನ್. ರಮೇಶ್ ಭಾಗವಹಿಸಲಿದ್ದಾರೆ.

ಅತಿಥಿಗಳಾಗಿ ಸರ್ಕಾರದ ಕಾರ್ಯದರ್ಶಿಗಳು, ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಮತ್ತು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಡಾ. ಎನ್. ಮಂಜುಳ, ವಿಶೇಷ ಆಹ್ವಾನಿತರಾಗಿ ಶ್ರೀ ಮಹಾವೀರ ಜೈನ್ ಸಂಘದ ಅಧ್ಯಕ್ಷ ದಳಪತ್ ರಾಜ್, ಉಪಾಧ್ಯಕ್ಷ ಕಾಂತಿಲಾಲ್ ಜಿ ರವರು ಭಾಗವಹಿಸಲಿದ್ದಾರೆ.

ಉಪನ್ಯಾಸವನ್ನು ಭಾರತೀಯ ಜೀವ ವಿಮಾ ನಿಗಮದ ಸಹವರ್ತಿ ಎಸ್.ಎನ್.ಅಮೃತ್ ಕುಮಾರ್ ನೀಡಲಿದ್ದಾರೆ. ಶ್ರೀ ಮಹಾವೀರ ಜೈನ್ ಸಮುದಾಯದ ಮುಖಂಡರು, ಮತ್ತು ಎಲ್ಲಾ ಸಮುದಾಯ ಗಳ, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು ಮತ್ತು ಸಮಸ್ತ ನಾಗರಿಕರು ಭಾಗವಹಿಸುವರು.