ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Chikkaballapur News: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಹಾ ಶಿವರಾತ್ರಿಯ ಸಂಭ್ರಮ: ಇಶಾ ಮತ್ತು ಶಿವನ ದೇವಾಲಯಗಳಿಗೆ ಹರಿದು ಬಂದ ಭಕ್ತ ಸಾಗರ

ಮುಂಜಾನೆಯಿಂದಲೇ ಹರ ದೇವಾಲಯಗಳತ್ತ ಭಕ್ತರ ದಂಡು ಹರಿದು ಬರುವ ಹಿನ್ನೆಲೆಯಲ್ಲಿ, ಮೂಲ ದೇವರಿಗೆ ವಿಶೇಷ ಅಲಂಕಾರ, ಪೂಜೆ, ಅಭಿಷೇಕ, ನೈವೇದ್ಯಗಳನ್ನು ಅರ್ಪಿಸುವ ಜೊತೆಗೆ ವಿಶೇಷ ಧಾರ್ಮಿಕ ಪೂಜಾ ಕೈಂಕರ್ಯಗಳನ್ನು ಪುರೋಹಿತ ವರ್ಗ, ದೇವಾಲಯಗಳ ಆಡಳಿತ ಮಂಡಳಿ ನೆರವೇರಿಸಿದರು.

ವಾಹನದಟ್ಟಣೆ ಕಿರಿಕಿರಿ ನಿಭಾಯಿಸಲು ಪೊಲೀಸ್ ಇಲಾಖೆ ಸುಸ್ತೋ ಸುಸ್ತು

-

Ashok Nayak
Ashok Nayak Feb 16, 2026 12:28 AM

ಚಿಕ್ಕಬಳ್ಳಾಪುರ: ದೇಶದ್ಯಾಂತ ಮಹಾಶಿವರಾತ್ರಿ ಸಂಭ್ರಮ ಜೋರಾಗಿರುವಂತೆ ಚಿಕ್ಕಬಳ್ಳಾ ಪುರ ಜಿಲ್ಲೆಯಲ್ಲಿ ಕೂಡ ಮಹಾಶಿವರಾತ್ರಿ ಸಂಭ್ರಮ ಮನೆ ಮಾಡಿತ್ತು. ಹಳ್ಳಿ ಪಟ್ಟಣ ನಗರವೆನ್ನದೆ ಎಲ್ಲೆಡೆ ಶಿವದೇವಾಲಯಗಳಲ್ಲಿ ವಿಶೇಷ ಪೂಜೆ ಆಯೋಜಿಸಲಾಗಿತ್ತು.ನಂದಿ ಮತ್ತು ಇಶಾ ಕೇಂದ್ರಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಹರಿದು ಬಂದ ಕಾರಣ ಹೆದ್ದಾರಿ ಯಲ್ಲಿ ವಾಹನಗಳ ದಟ್ಟಣೆ ಹೆಚ್ಚಾಗಿದ್ದು ನಿಭಾಯಿಸಲು ಪೊಲೀಸರು ಹರಸಾಹಸ ಪಟ್ಟರು.

ಹೌದು. ಮುಂಜಾನೆಯಿಂದಲೇ ಹರ ದೇವಾಲಯಗಳತ್ತ ಭಕ್ತರ ದಂಡು ಹರಿದು ಬರುವ ಹಿನ್ನೆಲೆಯಲ್ಲಿ,ಮೂಲ ದೇವರಿಗೆ ವಿಶೇಷ ಅಲಂಕಾರ, ಪೂಜೆ, ಅಭಿಷೇಕ, ನೈವೇದ್ಯಗಳನ್ನು ಅರ್ಪಿಸುವ ಜೊತೆಗೆ ವಿಶೇಷ ಧಾರ್ಮಿಕ ಪೂಜಾ ಕೈಂಕರ್ಯಗಳನ್ನು ಪುರೋಹಿತ ವರ್ಗ, ದೇವಾಲಯಗಳ ಆಡಳಿತ ಮಂಡಳಿ ನೆರವೇರಿಸಿದರು.

ಹಬ್ಬದ ಪ್ರಯುಕ್ತ ಚಿಕ್ಕಬಳ್ಳಾಪುರ, ನಂದಿ, ಬಾಗೇಪಲ್ಲಿ, ಗುಡಿಬಂಡೆ, ಚಿಂತಾಮಣಿ, ಗೌರಿಬಿದನೂರು, ಕೈವಾರ, ಇಶಾ ಕೇಂದ್ರ ಸೇರಿದಂತೆ ಜಿಲ್ಲೆಯ ಇತರೆ ತಾಲೂಕುಗಳಲ್ಲೂ ಶಿವ-ಪಾರ್ವತಿ, ಈಶ್ವರ ಹಾಗೂ ಇನ್ನಿತರ ದೇವಾಲಯಗಳನ್ನು ಹೂ, ತಳಿರು ತೋರಣ ಗಳಿಂದ ಸಿಂಗರಿಸಲಾಗಿತ್ತು. ದೇವಾಲಗಳ ಆವರಣದಲ್ಲಿ ಹಾಗೂ ಸುತ್ತಮುತ್ತ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು.

ಇದನ್ನೂ ಓದಿ: Chikkaballapur News: ಜಿಲ್ಲಾ ಉಸ್ತುವಾರಿ ಸಚಿವರಿಂದ ಸೋಮವಾರ ರಾಗಿ ಖರೀದಿಗೆ ಚಾಲನೆ: ಜಿಲ್ಲಾಧಿಕಾರಿ ಜಿ ಪ್ರಭು

ದಕ್ಷಿಣ ಕಾಶಿ ಎಂದೇ ಪ್ರಖ್ಯಾತಿ ಪಡೆದಿರುವ ತಾಲೂಕಿನ ಶ್ರೀ ಭೋಗನಂದೀಶ್ವರ ಸ್ವಾಮಿ ದೇವಾಲಯದಲ್ಲಿ ನಂದೀಶ್ವರನಿಗೆ ವಿಶೇಷ ಪೂಜೆಗಳು ನಡೆದವು. ಭೋಗನಂದೀಶ್ವರನಿಗೆ ಏಕವಾರ ಅಭಿಷೇಕ, ಕ್ಷೀರಾಭಿಷೇಕ, ತುಪ್ಪಾಭಿಷೇಕ, ಗಂಧಾಬಿಷೇಕ, ಪುಷ್ಪಾಭಿಷೇಕ ನಡೆಯಿತು. ಹಾಗೆಯೇ ದೇವಾಲಯದ ಆವರಣದಲ್ಲಿ ಮಹಿಳೆಯರು ದೀಪಗಳನ್ನು ಬೆಳಗಿ ಹರಕೆ ತೀರಿಸಿಕೊಂಡರು.

ಬೆಂಗಳೂರು, ದೊಡ್ಡಬಳ್ಳಾಪುರ, ಕೋಲಾರ ಸೇರಿದಂತೆ ಜಿಲ್ಲೆ ಹಾಗೂ ಪಕ್ಕದ ಆಂಧ್ರ ಪ್ರದೇಶ, ತೆಲಂಗಾಣ, ತಮಿಳುನಾಡಿನಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ಅಲ್ಲದೆ, ಸಾಲಾಗಿ ನಿಂತು ಭೋಗನಂದೀಶ್ವರನ ದರ್ಶನವನ್ನು ಕೂಡ ಪಡೆದರು.

ಹಣವಿರುವವರು ವಿಶೇಷ ದರ್ಶನದ ೨೫೦ ರೂಗಳ ಟಿಕೆಟ್ ಪಡೆದು ದರ್ಶನ ಪಡೆದರು. ಹಬ್ಬದ ಹಿನ್ನೆಲೆಯಲ್ಲಿ ಪುರೋಹಿತವರ್ಗ ದೇವಾಲಯದ ಬೃಹತ್ ಕಲ್ಯಾಣಿಯಲ್ಲಿಯಲ್ಲಿ ವಿಶೇಷ ಪೂಜಾ ಕೈಂಕರ್ಯವನ್ನು ನೆರೆವೇರಿಸಿದರು. ಸಾವಿರಾರು ಸಂಖ್ಯೆಯಲ್ಲಿ ಭಕ್ತರು ದೇವಾಲಯಕ್ಕೆ ಹರಿದುಬರುವ ಕಾರಣ, ಜನಸಂದಣಿ ನಿಭಾಯಿಸಲು ಪೊಲೀಸ್ ಜತೆಗೆ ಹೋಂಗಾರ್ಡ್ಗಳನ್ನು ನಿಯೋಜಿಸಲಾಗಿತ್ತು.

15cbpm5h ok

ಹಬ್ಬದ ಹಿನ್ನೆಲೆ ವಾಹನಗಳ ದಟ್ಟಣೆ ಹೆಚ್ಚಾಗಿದ್ದರಿಂದ ನಂದಿಯಿಂದ ಚಿಕ್ಕಬಳ್ಳಾಪುರ ರಸ್ತೆಯ ಅರ್ಧ ಕಿಲೋ ಮೀಟರ್ ದೂರದಲ್ಲಿ ಹಾಗೂ ಹೆದ್ದಾರಿ ಕಡೆ ಅರ್ಧ ಕಿ. ಮೀ. ದೂರದಲ್ಲಿ ಪ್ರತ್ಯೇಕ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿತ್ತು.

ದೇವಾಲಯದಲ್ಲಿ ವಿವಿಧ ಕಲಾ ತಂಡಗಳಿAದ ಭಜನೆ, ಸಂಗೀತ ಹಾಗೂ ಇನ್ನಿತರ ಸಾಂಸ್ಕೃ ತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ನಂದಿ ದೇವಾಲಯದ ಆಡಳಿತ ಮಂಡಳಿಯಿAದ ಪ್ರಸಾದ ವಿನಿಯೋಗವೂ ನಡೆಯಿತು.

ಜೋಡಿ ಬ್ರಹ್ಮ ರಥೋತ್ಸವಕ್ಕೆ ಸಿದ್ದತೆ: ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ಇತಿಹಾಸ ಪ್ರಸಿದ್ಧ ನಂದಿ ಗ್ರಾಮದ ಭೋಗನಂದೀಶ್ವರ ದೇವಾಲಯದಲ್ಲಿ ಶಿವರಾತ್ರಿ ಜಾಗರಣೆಯ ಮರುದಿನ ಶಿವಪಾರ್ವತಿ ಹಾಗೂ ಗಣೇಶ ಮೂರ್ತಿಗಳ ಜೋಡಿ ರಥೋತ್ಸವ ನಡೆಯುವುದು ವಾಡಿಕೆ. ಜೋಡಿ ರಥೋತ್ಸವಕ್ಕೆ ಜಿಲ್ಲಾಡಳಿತ ಸಂಪೂರ್ಣ ಸಿದ್ದತೆಗಳನ್ನು ಮಾಡಿಕೊಂಡಿದ್ದು ಜೋಡಿ ರಥೋತ್ಸವ ಕಣ್ತುಂಬಿಕೊಳ್ಳಲು ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಚಿಕ್ಕಬಳ್ಳಾಪುರ ನಗರ ಎಂ.ಜಿ. ರಸ್ತೆಯ ಶ್ರೀ ಮರಳು ಸಿದ್ಧೇಶ್ವರಸ್ವಾಮಿ ದೇವಾಲಯದಲ್ಲಿ ಶಿವರಾತ್ರಿ ಹಬ್ಬ ಆಚರಣೆ ವಿಜೃಂಭಣೆಯಿಂದ ನಡೆಯಿತು. ದೇವಾಲಯ ಸೇವಾ ಸಮಿತಿ ಹಾಗೂ ಭಕ್ತಾಗಳಿಂದ ಪ್ರತಿ ವರ್ಷದಂತೆ ಈ ಬಾರಿಯೂ ಹಮ್ಮಿಕೊಂಡಿದ್ದ ಉತ್ಸವದಲ್ಲಿ ಬೆಳಗ್ಗೆಯಿಂದ ಸಂಜೆವರೆಗೆ ವಿಶೇಷ ಪೂಜೆ, ಅಭಿಷೇಕ, ಗಣಪತಿ ಪೂಜೆ, ಮಹಾಗಣಪತಿ ಪುರಸರ ನವಗ್ರಹ ಹೋಮ, ಸುದರ್ಶನ ಹೋಮ, ಮಹಾಪೂರ್ಣಾಹುತಿ ಅಲಂಕಾರ ಮಹಾ ಮಂಗಳಾರತಿ ಸೇರಿದಂತೆ ಇನ್ನಿತರ ಧಾರ್ಮಿಕ ಪೂಜಾ ಕೈಂಕರ್ಯಗಳು ಶ್ರದ್ಧಾಭಕ್ತಿ ಯಿಂದ ನೆರವೇರಿಸಲಾಯಿತು. ಮಹಿಳೆಯರು, ಮಕ್ಕಳು, ಕುಟುಂಬ ಸಮೇತರಾಗಿ ಸಾವಿರಾರು ಭಕ್ತರು ಉತ್ಸವದಲ್ಲಿ ಪಾಲ್ಗೊಂಡಿದ್ದರು.

ನಗರದ ಚಂದ್ರ ಮೌಳೇಶ್ವರ(ಶಿವ)ದೇವಾಲಯ, ಕಂದವಾರದ ಎದುರು ಲಿಂಗೇಶ್ವರ(ರಾಮ ಮತ್ತು ಭೀಮ ಲಿಂಗೇಶ್ವರ)ಗಳಲ್ಲಿಯೂ ಸಹ ಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ, ಹೋಮ ಗಳನ್ನು ಏರ್ಪಡಿಸಲಾಗಿದ್ದು ಭಕ್ತರು ಶ್ರದ್ಧಾಭಕ್ತಿಯಿಂದ ಪೂಜೆ ಸಲ್ಲಿಸಿದರು.

ಆದಿಯೋಗಿ ದರ್ಶನಕ್ಕೆ ಆಗಮಿಸಿದ್ದ ಭಕ್ತರ ದಂಡು: ತಾಲೂಕಿನ ಅಗಲಗುರ್ಕಿ ಸಮೀಪದ ಇಶಾ ಕೇಂದ್ರದ ಆದಿಯೋಗಿ ದರ್ಶನ ಪಡೆಯಲು ಲಕ್ಷಾಂತರ ಜನರು ಆಗಮಿಸಿದ್ದರು. ಯೋಗ ಲಿಂಗೇಶ್ವರ ದೇವರಿಗೆ ದೀಪ ಬೆಳಗಿಸುವ ಮತ್ತು ಜಲಾಭಿಷೇಕ ಮಾಡಲು ಭಕ್ತಾಧಿಕಗಳಿಗೆ ಅವಕಾಶ ಕಲ್ಪಿಸಲಾಗಿತ್ತು. ಇಶಾ ಕೇಂದ್ರಕ್ಕೆ ತಲುಪಲು ವಾಹನ ಗಳ ದಟ್ಟಣೆ ಹೆಚ್ಚಾಗಿತ್ತು. ಹಾಗೆಯೇ ಪ್ರಜಾಪಿತ ಬ್ರಹ್ಮಕುಮಾರಿ ಆಶ್ರಮದ ವತಿಯಿಂದ ಶಿವರಾತ್ರಿ ಹಬ್ಬದ ಅಂಗವಾಗಿ ನಗರದ ಮರಳು ಸಿದ್ದೇಶ್ವರ ದೇವಾಲಯದ ಆವರಣದಲ್ಲಿ ಸಾರ್ವಜನಿಕರಿಗೆ ದರ್ಶನಕ್ಕಾಗಿ ಶಿವಲಿಂಗ ಮೂರ್ತಿಗಳ ಸ್ಥಾಪಿಸಲಾಗಿತ್ತು.

*
ಚಿಕ್ಕಬಳ್ಳಾಪುರ ಜಿಲ್ಲೆಯ ಐಜಿಪಿ ಲಾಬೂರಾಂ ತಮ್ಮ ಕುಟುಂಬ ಸಮೇತ ದಕ್ಷಿಣ ಕಾಶಿ ನಂದಿಗ್ರಾಮಕ್ಕೆ ಬಂದು ಶ್ರೀಭೋಗನಂದೀಶ್ವರನ ದರ್ಶನ ಪಡೆದು ಪುನೀತರಾದರು. ಕಾನೂನು ಸುವ್ಯವಸ್ಥೆಯ ನಡುವೆಯೂ ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಕುಟುಂಬಕ್ಕೆ ಸಮಯ ನೀಡಿ ದೇವರ ದರ್ಶನ ಪಡೆದಿದ್ದು ವಿಶೇಷವಾಗಿತ್ತು. ಇದೇ ರೀತಿ ಇಶಾ ಧ್ಯಾನ ಕೇಂದ್ರಕ್ಕೂ ಭೇಟಿ ನೀಡಿ ನಾಗಮಂಟಪ,ತ್ರಿಶೂಲ, ಬಸವ,ಹಾಗೂ ಧ್ಯಾನಸ್ಥ ಕಾಲ ಬೈರವೇಶ್ವರನ ದರ್ಶನ ಪಡೆದರು.