ತಾಲೂಕಿನಾದ್ಯಂತ ಶ್ರದ್ಧಾ ಭಕ್ತಿಯಿಂದ ಮಹಾಶಿವರಾತ್ರಿ ಆಚರಣೆ: ದೇವಾಲಯಗಳಲ್ಲಿ ವಿಶೇಷ ಪೂಜೆ
ಪಟ್ಟಣದ ಜಡಲ ಬೈರವೇಶ್ವರ ದೇವಸ್ಥಾನ, ಪರಗೋಡಿನ ಪಂಚಲಿಂಗ ದೇವಾಲಯ, ಪಾತಪಾಳ್ಯ ಹಿರೇಣ್ಯೇಶ್ವರ ದೇವಾಲಯ ನಗರ್ಲ ಗ್ರಾಮದ ಬಯಲು ಆಂಜನೇಯ ದೇವಸ್ಥಾನ, ಬಾಗೇಪಲ್ಲಿ ಪಟ್ಟಣದ ಕೊಡಕೊಂಡೆ ರಸ್ತೆಯಲ್ಲಿರುವ ಶಿವನ ದೇವಾಲಯ, ಗೂಳೂರು ನಿಡುಮಾಮಿಡಿ ಮಠ ಪೀಠದಲ್ಲಿ ಶಿವನ ದೇವಾಲಯದಲ್ಲಿ ಮಹಾ ರುದ್ರಾಭಿಷೇಕ, ಹಾಲಭಿಷೇಕ, ಬಿಲ್ವಾರ್ಚನೆ, ನಿವೇದನೆ, ದೂಪದಾರತಿ, ತುಪ್ಪದಾರತಿ, ಹೂವಿನ ಅಲಂಕಾರ, ಮಹಾಮಂಗಳಾರತಿ ನಡೆಯಿತು
-
ಬಾಗೇಪಲ್ಲಿ: ತಾಲ್ಲೂಕಿನಾದ್ಯಂತ ಭಾನುವಾರ ಮಹಾಶಿವರಾತ್ರಿ ಹಬ್ಬವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಶಿವರಾತ್ರಿ ಹಬ್ಬದ ಅಂಗವಾಗಿ ಭಕ್ತರು ಮುಂಜಾನೆ ಯಿಂದಲೇ ಶಿವನ ದೇವಾಲಯಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು.
ತಾಲೂಕಿನಾದ್ಯಂತ ವಿವಿಧ ಶಿವನ ದೇವಾಲಯಗಳಲ್ಲಿ ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಶಿವನ ದೇವಾಲಯಗಳಲ್ಲಿ ಜನರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಮಾಡಿದರು.
ಪಟ್ಟಣದ ಜಡಲ ಬೈರವೇಶ್ವರ ದೇವಸ್ಥಾನ, ಪರಗೋಡಿನ ಪಂಚಲಿಂಗ ದೇವಾಲಯ, ಪಾತಪಾಳ್ಯ ಹಿರೇಣ್ಯೇಶ್ವರ ದೇವಾಲಯ ನಗರ್ಲ ಗ್ರಾಮದ ಬಯಲು ಆಂಜನೇಯ ದೇವಸ್ಥಾನ, ಬಾಗೇಪಲ್ಲಿ ಪಟ್ಟಣದ ಕೊಡಕೊಂಡೆ ರಸ್ತೆಯಲ್ಲಿರುವ ಶಿವನ ದೇವಾಲಯ, ಗೂಳೂರು ನಿಡುಮಾಮಿಡಿ ಮಠ ಪೀಠದಲ್ಲಿ ಶಿವನ ದೇವಾಲಯದಲ್ಲಿ ಮಹಾ ರುದ್ರಾಭಿಷೇಕ, ಹಾಲಭಿಷೇಕ, ಬಿಲ್ವಾರ್ಚನೆ, ನಿವೇದನೆ, ದೂಪದಾರತಿ, ತುಪ್ಪದಾರತಿ, ಹೂವಿನ ಅಲಂಕಾರ, ಮಹಾಮಂಗಳಾರತಿ ನಡೆಯಿತು.
ಇದನ್ನೂ ಓದಿ: Mahashivratri 2026: ಮಲೆ ಮಹದೇಶ್ವರ ದೇವಾಲಯಕ್ಕೆ ಸಿಎಂ ಭೇಟಿ, ತಂದೆ ಎಚ್.ಡಿ. ದೇವೇಗೌಡರ ಜತೆ ಶಿವನ ದರ್ಶನ ಪಡೆದ ಎಚ್‌ಡಿಕೆ
ಪಟ್ಟಣದ ಭೈರವೇಶ್ವರ ದೇವಾಲಯ ಹಾಗೂ ಪರಗೋಡು ಪಂಚಲಿAಗ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ ಮತ್ತು ಅಲಂಕಾರ ಮಾಡಲಾಗಿತ್ತು. ದೇವರಿಗೆ ರುದ್ರಾಭಿಷೇಕ, ಬಿಲ್ವಾರ್ಚನೆ ನಡೆಸಲಾಯಿತು. ಜಾಗರಣೆ ಅಂಗವಾಗಿ ಅಹೋರಾತ್ರಿ ಭಜನೆ ಹಮ್ಮಿಕೊಳ್ಳಲಾಗಿದೆ.
ಶಿವನ ದೇವಾಲಯಗಳಲ್ಲಿ ಭಕ್ತರು ಬೆಳಿಗ್ಗೆಯಿಂದಲೇ ಪೂಜೆ ಸಲ್ಲಿಸುತ್ತಿದ್ದರು. ಸಂಜೆ ನಂತರ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ ಭಕ್ತರು ದೇವರ ದರ್ಶನ ಪಡೆದರು.
ಸಂಜೆಯ ನಂತರ ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಪ್ರಸಾದ ವಿನಿಯೋಗ ಜರುಗಿತು. ಭಕ್ತರಿಗೆ ದರ್ಶನ ಅವಕಾಶ ಕಲ್ಪಿಸಲಾಗಿತ್ತು. ಜಾಗರಣೆ ಹಿನ್ನೆಲೆಯಲ್ಲಿ ದೇವಸ್ಥಾನ ಹಾಗೂ ವಿವಿಧೆಡೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಹ ಆಯೋಜಿಸ ಲಾಗಿತ್ತು.
ಶಿವಮಂತ್ರ ಹಾಗೂ ಶಿವನ ಕುರಿತಾದ ಭಕ್ತಿಗೀತೆ ಗಾಯನ ನಡೆಯಿತು.ಸಂಜೆಯ ನಂತರ ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಪ್ರಸಾದ ವಿನಿಯೋಗ ಜರುಗಿತು. ಭಕ್ತರಿಗೆ ದರ್ಶನ ಅವಕಾಶ ಕಲ್ಪಿಸಲಾಗಿತ್ತು. ದೇವಸ್ಥಾನ ಹಾಗೂ ವಿವಿಧೆಡೆ ಸಾಂಸ್ಕೃತಿಕ ಕಾರ್ಯಕ್ರಮ ಗಳನ್ನು ಸಹ ಆಯೋಜಿಸಲಾಗಿತ್ತು.
ಪ್ರಮುಖ ದೇವಾಲಯಗಳಲ್ಲಿ ರಾತ್ರಿ ಜಾಗರಣೆಗೆ ವ್ಯವಸ್ಥೆ ಮಾಡಲಾಗಿತ್ತು. ಜಾಗರಣೆ ಅಂಗ ವಾಗಿ ನಾಟಕೋತ್ಸವ, ಸಂಗೀತೋತ್ಸವ, ಕಾವ್ಯೋತ್ಸವ ಆಯೋಜಿಸಲಾಗಿತ್ತು. ದೀಪೋತ್ಸವ ವಿಶೇಷ ಮೆರುಗು ನೀಡಿತು. ಕತ್ತಲು ಆವರಿಸುತ್ತಿದ್ದಂತೆ ಶಿವನ ಆರಾಧನೆಯ ತಾಣಗಳು ವಿದ್ಯುತ್ ದೀಪಗಳಿಂದ ಕಂಗೊಳಿಸಿದವು. ತಳಿರು, ತೋರಣಗಳು ಮಹಾಶಿವರಾತ್ರಿ ಮೆರುಗು ಹೆಚ್ಚಿಸಿದವು.