Gauribidanur News: ಕನಿಷ್ಠ ವೇತನ ಜಾರಿಗೆ ಆಗ್ರಹಿಸಿ ಆ.13ರಂದು ಬೃಹತ್ ಪ್ರತಿಭಟನೆ
ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರ ರಿಗೆ ಸರ್ಕಾರ ನಿಗದಿಪಡಿಸಿರುವ ಕನಿಷ್ಠ ವೇತನದ ಆದೇಶವನ್ನು ತಕ್ಷಣ ಜಾರಿ ಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ಇಲಾಖೆಗಳ ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ನಾರಾಯಣಗೌಡ ಆಗ್ರಹಿಸಿದರು.
-
ಗೌರಿಬಿದನೂರು: ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ಸರ್ಕಾರ ನಿಗದಿಪಡಿಸಿರುವ ಕನಿಷ್ಠ ವೇತನದ ಆದೇಶವನ್ನು ತಕ್ಷಣ ಜಾರಿ ಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ಇಲಾಖೆಗಳ ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ನಾರಾಯಣಗೌಡ ಆಗ್ರಹಿಸಿದರು.
ನಗರಸಭೆ ಕಚೇರಿ ಮುಂಭಾಗ ಮಾತನಾಡಿದ ಅವರು, ಮೇ.22ರಂದು ಸರ್ಕಾರ ಕನಿಷ್ಠ ವೇತನ ನಿಗದಿಪಡಿಸಿ ಆದೇಶ ಹೊರಡಿಸಿದ್ದರೂ ಮೂರು ತಿಂಗಳು ಕಳೆದರೂ ಜಾರಿಯಾಗಿಲ್ಲ. ಖಾಸಗಿ ಏಜೆನ್ಸಿಗಳು ಹಾಗೂ ಗುತ್ತಿಗೆದಾರರು ನೌಕರರ ವೇತನ ತಡೆ ಹಿಡಿಯದೆ ಸರ್ಕಾರದ ಆದೇಶದಂತೆ ಪಾವತಿಸಬೇಕು ಎಂದರು.
ಇದನ್ನೂ ಓದಿ: Gauribidanur News: ತೀರ್ಥ ಶಾಲೆಯಲ್ಲಿ ಹರ್ ಘರ್ ತಿರಂಗಾ ಅಭಿಯಾನ
ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆ.13ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಆಗ್ರಹ ಸಮಾವೇಶ ಹಾಗೂ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳ ಹೊರಗುತ್ತಿಗೆ ನೌಕರರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಸಂಘದ ಜಿಲ್ಲಾಧ್ಯಕ್ಷ ಸುರೇಶ್ ಬಾಬು, ರಾಜ್ಯ ಸಂಚಾಲಕ ರಾಜೇಂದ್ರ ಮಾತನಾಡಿ, ಡಿ-ಗ್ರೂಪ್ ನೌಕರರಿಂದ ಹಿಡಿದು ದತ್ತಾಂಶ ನಿರ್ವಾಹಕರು, ದಾದಿಯರು ಸೇರಿದಂತೆ ಎಲ್ಲ ಹೊರಗುತ್ತಿಗೆ ನೌಕರ ರಿಗೆ ಕನಿಷ್ಠ ವೇತನ ಜಾರಿಗೊಳಿಸಬೇಕು. ಇಲ್ಲದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.