Chikkaballapur News: ಮೇ 12 ರಂದು ಶ್ರೀ ಭಗವಾನ್ ಬುದ್ಧ ಜಯಂತಿ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಚಿಕ್ಕಬಳ್ಳಾಪುರ ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಭಗವಾನ್ ಬುದ್ಧ ಜಯಂತಿಯನ್ನು ಮೇ 12 ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದ ಉದ್ಘಾಟನೆ ಯನ್ನು ಉನ್ನತ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ. ಸುಧಾಕರ್ ಅವರು ನೆರವೇರಿಸಲಿದ್ದಾರೆ


ಚಿಕ್ಕಬಳ್ಳಾಪುರ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಚಿಕ್ಕಬಳ್ಳಾಪುರ ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಭಗವಾನ್ ಬುದ್ಧ ಜಯಂತಿಯನ್ನು ಮೇ 12 ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜಿಸ ಲಾಗಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಉನ್ನತ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ. ಸುಧಾಕರ್ ಅವರು ನೆರವೇರಿಸಲಿದ್ದಾರೆ. ಉಪಸ್ಥಿತಿಯನ್ನು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ್ ಎಸ್ ತಂಗಡಗಿ ರವರು ವಹಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಪಿ.ಇ ಪ್ರದೀಪ್ ಈಶ್ವರ್ ಅವರು ವಹಿಸಲಿದ್ದಾರೆ.
ಇದನ್ನೂ ಓದಿ: Chikkaballapur News: ಜಂಗಮಕೋಟೆ ಕೈಗಾರಿಕಾ ಪ್ರದೇಶಕ್ಕೆ ಕಂಠಕವಾದ ಸಂಘಟನೆಗಳ ಜಟಾಪಟಿ
ಮುಖ್ಯ ಅತಿಥಿಗಳಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ. ಕೆ.ಸುಧಾಕರ್, ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಎಂ. ಮಲ್ಲೇಶ್ ಬಾಬು, ಶಾಸಕರಾದ ಎಸ್.ಎನ್. ಸುಬ್ಬಾರೆಡ್ಡಿ, ಬಿ.ಎನ್. ರವಿಕುಮಾರ್, ಕೆ.ಹೆಚ್. ಪುಟ್ಟಸ್ವಾಮಿಗೌಡ, ಚಿದಾನಂದ ಎಂ. ಗೌಡ, ಎಂ.ಎಲ್. ಅನಿಲ್ ಕುಮಾರ್, ಡಿ.ಟಿ. ಶ್ರೀನಿವಾಸ್, ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎನ್. ಕೇಶವರೆಡ್ಡಿ, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷ ಗೊಲ್ಲಹಳ್ಳಿ ಶಿವ ಪ್ರಸಾದ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಯಲುವಹಳ್ಳಿ ಎನ್. ರಮೇಶ್, ನಗರ ಸಭೆ ಅಧ್ಯಕ್ಷ ಎ. ಗಜೇಂದ್ರ ಭಾಗವಹಿಸಲಿದ್ದಾರೆ.
ಅತಿಥಿಗಳಾಗಿ ಸರ್ಕಾರದ ಕಾರ್ಯದರ್ಶಿಗಳು, ಮೂಲಭೂತ ಸೌಲಭ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಪಂಚಾಯಿತಿ ಆಡಳಿತಾಧಿಕಾರಿಗಳಾದ ಡಾ. ಎನ್.ಮಂಜುಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ. ಎಂ.ವಿ.ವೆಂಕಟೇಶ್ ರವರು ಭಾಗವಹಿಸ ಲಿದ್ದಾರೆ.
ಬೆಂಗಳೂರಿನ ನೇತ್ರ ವಿಜ್ಞಾನ ವಿಭಾಗ, ಬಿ.ಎಂ.ಸಿ, ಧಮ್ಮಚಾಲ, ನಾಗಸೇನ ಬುದ್ಧ ವಿಹಾರ ಪ್ರೊಫೇ ಸರ್ ಮತ್ತು ಹೆಚ್.ಒ.ಡಿ. ಡಾ. ಹೆಚ್.ಆರ್. ಸುರೇಂದ್ರ ರವರು ಉಪನ್ಯಾಸ ನೀಡಲಿದ್ದಾರೆ.
ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಸರ್ಕಾರಿ ನೌಕರರ ಸಂಘ ಹಾಗೂ ಇತರೆ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಸಮಸ್ತ ನಾಗರೀಕರು ಭಾಗವಹಿಸಲಿದ್ದಾರೆ.