ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Chikkaballapur News: ಹಿರಿಯರ ಅನುಭವ ಹೊಸ ಪೀಳಿಗೆಗೆ ದಾರಿದೀಪವಾಗಲಿ: ನ್ಯಾಯಾಧೀಶ ಟಿ.ಪಿ.ರಾಮಲಿಂಗೇಗೌಡ

ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ 2026-27ನೇ ಸಾಲಿನ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಹಿರಿಯರನ್ನು ನಿರ್ಲಕ್ಷಿಸುವುದು ನಾಗರಿಕ ಸಮಾಜದ ಲಕ್ಷಣವಲ್ಲ

-

Profile
Ashok Nayak Oct 1, 2026 11:06 PM

ಚಿಕ್ಕಬಳ್ಳಾಪುರ: ಕುಟುಂಬವಾಗಲಿ, ಸಮಾಜವಾಗಲಿ ಹಿರಿಯ ನಾಗರಿಕರನ್ನು ನಿರ್ಲಕ್ಷಿಸುವುದು ಅಥವಾ ಅಗೌರವದಿಂದ ನಡೆಸಿಕೊಳ್ಳುವುದು ನಾಗರಿಕ ಸಮಾಜದ ಲಕ್ಷಣವಲ್ಲ. ಹಿರಿಯರ ಅನುಭವ ಹಾಗೂ ಮಾರ್ಗದರ್ಶನವನ್ನು ಹೊಸ ಪೀಳಿಗೆ ಬದುಕು ಕಟ್ಟಿಕೊಳ್ಳಲು ಬಳಸಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಟಿ.ಪಿ.ರಾಮಲಿಂಗೇಗೌಡ ಹೇಳಿದರು.

ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ 2026-27ನೇ ಸಾಲಿನ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇದನ್ನೂ ಓದಿ: Chikkaballapur News: ನವೀನ್ ಕಿರಣ್ ಹುಟ್ಟುಹಬ್ಬ; ಬೀದಿಬದಿ ವ್ಯಾಪಾರಿಗಳಿಗೆ ಹಣ್ಣು, ಬ್ರೆಡ್ ವಿತರಣೆ

‘ಹಳೆ ಬೇರು, ಹೊಸ ಚಿಗುರು’ ಎಂಬಂತೆ ಹಿರಿಯರು ಕುಟುಂಬ ಹಾಗೂ ಸಮಾಜದ ಅನುಭವದ ಬೇರುಗಳಿದ್ದಂತೆ. ಅವರ ಜೀವನಾನುಭವ ಹೊಸ ಪೀಳಿಗೆಗೆ ಮಾರ್ಗದರ್ಶನ ನೀಡುವ ಅಮೂಲ್ಯ ಸಂಪತ್ತು. ಕುಟುಂಬದಲ್ಲಿರುವ ಅಜ್ಜ-ಅಜ್ಜಿಯರು ಮಕ್ಕಳಿಗೆ ಸ್ನೇಹಿತರಾಗಿ, ಮೊಮ್ಮಕ್ಕಳಿಗೆ ಉತ್ತಮ ಗೆಳೆಯರಾಗಿ, ಜೀವನದ ಮೌಲ್ಯಗಳನ್ನು ತಿಳಿಸಿಕೊಡುತ್ತಾರೆ. ಹೀಗಾಗಿ ಹಿರಿಯರು ಕುಟುಂಬಕ್ಕೆ ಹೊರೆಯಲ್ಲ; ಅವರು ಅನುಭವಗಳ ಕಣಜ ಎಂದು ಹೇಳಿದರು.

ಆಧುನಿಕ ಜೀವನಶೈಲಿಯಿಂದ ಅವಿಭಕ್ತ ಕುಟುಂಬಗಳು ವಿಭಕ್ತ ಕುಟುಂಬಗಳಾಗಿ ಒಡೆಯುತ್ತಿರು ವುದು ನೋವಿನ ಸಂಗತಿ. ಹಿಂದೆ ದೊಡ್ಡ ಕುಟುಂಬಗಳಲ್ಲಿಯೂ ತಂದೆ-ತಾಯಿಗಳು ಮಕ್ಕಳನ್ನು ಪ್ರೀತಿ ಮತ್ತು ಜವಾಬ್ದಾರಿಯಿಂದ ಬೆಳೆಸುತ್ತಿದ್ದರು. ಆದರೆ ಇಂದು ಉದ್ಯೋಗ ಹಾಗೂ ಸ್ವಾವಲಂಬನೆ ಬಂದ ನಂತರ ಹೆತ್ತವರನ್ನೇ ಕಡೆಗಣಿಸುವ ಪರಿಸ್ಥಿತಿ ಕಂಡುಬರುತ್ತಿದೆ. ಸಮಾಜದಲ್ಲಿ ವೃದ್ಧಾಶ್ರಮ ಗಳ ಸಂಖ್ಯೆ ಹೆಚ್ಚುತ್ತಿರುವುದು ಅಭಿವೃದ್ಧಿಯ ಸೂಚಕವಲ್ಲ ಎಂದರು.

1252902 chi

ತಂದೆ-ತಾಯಿಗಳು ತಮ್ಮ ಮಕ್ಕಳ ವಿದ್ಯಾಭ್ಯಾಸ ಸೇರಿದಂತೆ ಅವರ ಭವಿಷ್ಯಕ್ಕಾಗಿ ತಮ್ಮ ಅನೇಕ ಆಶೋತ್ತರಗಳನ್ನು ತ್ಯಾಗ ಮಾಡಿರುತ್ತಾರೆ. ಮಕ್ಕಳು ಬೆಳೆದು ಉದ್ಯೋಗ ಪಡೆದು ಸ್ವಾವಲಂಬಿಗಳಾದ ಬಳಿಕ ಹೆತ್ತವರನ್ನು ನಿರ್ಲಕ್ಷಿಸುವುದು ಅವರಿಗೆ ಶೋಭೆ ತರುವುದಿಲ್ಲ. ಹೆತ್ತವರನ್ನು ಪ್ರೀತಿ, ವಿಶ್ವಾಸ ಹಾಗೂ ಗೌರವದಿಂದ ನೋಡಿಕೊಳ್ಳುವುದು ಮಕ್ಕಳ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

ದೇಶ ಹಾಗೂ ಸಮಾಜ ಇಂದು ಅಭಿವೃದ್ಧಿಯತ್ತ ಸಾಗಲು ಹಿಂದಿನ ತಲೆಮಾರಿನ ಹಿರಿಯರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಸಲ್ಲಿಸಿದ ಕೊಡುಗೆ ಮತ್ತು ಶ್ರಮವೂ ಪ್ರಮುಖ ಕಾರಣವಾಗಿದೆ. ಅವರ ತ್ಯಾಗ ವನ್ನು ಸ್ಮರಿಸಿ ಕೃತಜ್ಞತೆ ಸಲ್ಲಿಸುವುದರ ಜೊತೆಗೆ, ಅವರ ಅನುಭವವನ್ನು ಮುಂದಿನ ಪೀಳಿಗೆಯ ಅಭಿವೃದ್ಧಿಗೆ ಬಳಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದ ಅಂಗವಾಗಿ ನಡೆದ ವಿವಿಧ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ಹಿರಿಯ ನಾಗರಿಕರಿಗೆ ಪ್ರಮಾಣಪತ್ರ ಹಾಗೂ ಬಹುಮಾನಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ತಹಸೀಲ್ದಾರ್ ರಶ್ಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವೆಂಕಟೇಶರೆಡ್ಡಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ಜ್ಯೋತಿ ಲಕ್ಷ್ಮಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಅಭಿಲಾಷ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.