ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Sri Krishna Janmashtami in Gudibande: ಶ್ರೀ ಕೃಷ್ಣನ ಜೀವನಾದರ್ಶಗಳನ್ನು ಯುವಜನತೆ ಅಳವಡಿಸಿಕೊಳ್ಳಲಿ

ಶ್ರೀ ಕೃಷ್ಣನ ಜೀವನಾದರ್ಶಗಳು ಪ್ರತಿಯೊಬ್ಬರಿಗೂ ಮಾದರಿಯಾಗಬೇಕು. ಭಗವದ್ಗೀತೆಯಲ್ಲಿ ಅವರು ಬೋಧಿಸಿರುವ ಜೀವನ ಮೌಲ್ಯಗಳು ಸರ್ವಕಾಲಕ್ಕೂ ಪ್ರಸ್ತುತವಾಗಿದ್ದು, ಮಹಾಭಾರತದ ಮೂಲಕವೂ ಸಮಾಜಕ್ಕೆ ಮಹತ್ವದ ಸಂದೇಶಗಳನ್ನು ನೀಡಿದ್ದಾರೆ ಎಂದು ನ್ಯೂ ವಿಷನ್ ಶಾಲೆಯ ಮುಖ್ಯಸ್ಥೆ ಪರಿಮಳ ಹೇಳಿದರು.

ಭಗವದ್ಗೀತೆಯ ತತ್ವಗಳು ಜೀವನಕ್ಕೆ ದಾರಿದೀಪ: ಪರಿಮಳ

-

Profile
Ashok Nayak Sep 5, 2026 5:42 AM

ಗುಡಿಬಂಡೆ: ಶ್ರೀ ಕೃಷ್ಣನ ಜೀವನಾದರ್ಶಗಳು ಪ್ರತಿಯೊಬ್ಬರಿಗೂ ಮಾದರಿಯಾಗಬೇಕು. ಭಗವದ್ಗೀತೆಯಲ್ಲಿ ಅವರು ಬೋಧಿಸಿರುವ ಜೀವನ ಮೌಲ್ಯಗಳು ಸರ್ವಕಾಲಕ್ಕೂ ಪ್ರಸ್ತುತವಾಗಿದ್ದು, ಮಹಾಭಾರತದ ಮೂಲಕವೂ ಸಮಾಜಕ್ಕೆ ಮಹತ್ವದ ಸಂದೇಶಗಳನ್ನು ನೀಡಿದ್ದಾರೆ ಎಂದು ನ್ಯೂ ವಿಷನ್ ಶಾಲೆಯ ಮುಖ್ಯಸ್ಥೆ ಪರಿಮಳ ಹೇಳಿದರು.

ಪಟ್ಟಣದ ತಾಲೂಕು ಕಚೇರಿಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಿದ್ದ ಶ್ರೀ ಕೃಷ್ಣ ಜನ್ಮಾಷ್ಟಮಿ(

i ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದ ಅವರು, ಭಗವದ್ಗೀತೆಯ ಮೂಲಕ ಶ್ರೀ ಕೃಷ್ಣ ಮನುಷ್ಯನ ಕರ್ತವ್ಯ, ಧರ್ಮ, ನೀತಿ ಹಾಗೂ ಜೀವನದ ಸವಾಲುಗಳನ್ನು ಎದುರಿಸುವ ಕುರಿತು ಅಮೂಲ್ಯ ಸಂದೇಶ ನೀಡಿದ್ದಾರೆ. ಅವರ ವಿಚಾರಗಳು ಯಾವುದೇ ಒಂದು ಕಾಲಘಟ್ಟಕ್ಕೆ ಸೀಮಿತವಾಗದೆ ಎಲ್ಲ ಕಾಲಕ್ಕೂ ಅನ್ವಯವಾಗುತ್ತವೆ ಎಂದರು.

ಮಹಾಭಾರತದಲ್ಲಿ ಶ್ರೀ ಕೃಷ್ಣನ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಸಂಕಷ್ಟದ ಸಂದರ್ಭದಲ್ಲಿ ಧೈರ್ಯದಿಂದ ನಿಂತು ಧರ್ಮದ ಪರವಾಗಿ ಹೋರಾಡಬೇಕು ಎಂಬುದನ್ನು ತಮ್ಮ ನಡೆ-ನುಡಿಗಳ ಮೂಲಕ ತಿಳಿಸಿಕೊಟ್ಟಿದ್ದಾರೆ. ಇಂದಿನ ಪೀಳಿಗೆ ಶ್ರೀ ಕೃಷ್ಣನ ಆದರ್ಶಗಳನ್ನು ಅರಿತು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಇದನ್ನೂ ಓದಿ: SriKrishna Janmashtami: ಕೃಷ್ಣ–ರಾಧೆ ವೇಷದಲ್ಲಿ ಕಂಗೊಳಿಸಿದ ಪುಟಾಣಿಗಳು; ಬಾಲಲೀಲೆ ಕಿರು ನಾಟಕ ಪ್ರದರ್ಶನ

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಹಸೀಲ್ದಾರ್ ಸಿಗ್ಬತ್ತುಲ್ಲಾ ಮಾತನಾಡಿ, ಸಮಾಜವನ್ನು ತಿದ್ದಿ-ತೀಡಿ ಜನರಲ್ಲಿ ಉತ್ತಮ ಚಿಂತನೆ ಹಾಗೂ ಮೌಲ್ಯಗಳನ್ನು ಬೆಳೆಸಲು ಶ್ರಮಿಸಿದ ಮಹನೀಯ ರನ್ನು ಸ್ಮರಿಸುವುದು ನಮ್ಮ ಕರ್ತವ್ಯ. ಅವರ ಆಶಯಗಳನ್ನು ಮುಂದಿನ ಪೀಳಿಗೆಗೆ ತಲುಪಿಸಬೇಕು ಎಂದರು.

ಶ್ರೀ ಕೃಷ್ಣ ಜನ್ಮಾಷ್ಟಮಿಯಂತಹ ಆಚರಣೆಗಳು ಕೇವಲ ಧಾರ್ಮಿಕ ಕಾರ್ಯಕ್ರಮಗಳಿಗೆ ಸೀಮಿತ ವಾಗದೆ, ಸಾಂಸ್ಕೃತಿಕ ಪರಂಪರೆ, ನೈತಿಕ ಮೌಲ್ಯಗಳು ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ನೆನಪಿಸುವ ವೇದಿಕೆಗಳಾಗಬೇಕು. ಇಂತಹ ಕಾರ್ಯಕ್ರಮಗಳ ಮೂಲಕ ಸಮಾಜದಲ್ಲಿ ಸೌಹಾರ್ದತೆ, ಶಾಂತಿ ಹಾಗೂ ಉತ್ತಮ ಮೌಲ್ಯಗಳನ್ನು ಬೆಳೆಸಲು ಸಾಧ್ಯ ಎಂದರು.

ಕಾರ್ಯಕ್ರಮದಲ್ಲಿ ತಾಪಂ ಇಒ ನಾಗಮಣಿ, ಯಾದವ ಸಮುದಾಯದ ಗುರುಮೂರ್ತಿ ಮಾತನಾಡಿ ದರು. ಪಪಂ ಮುಖ್ಯಾಧಿಕಾರಿ ಆರತಿ, ಸಮಾಜ ಕಲ್ಯಾಣ ಇಲಾಖೆಯ ಲಕ್ಷ್ಮೀಪತಿರೆಡ್ಡಿ, ಕೃಷಿ ಇಲಾಖೆ ಯ ಕೇಶವರೆಡ್ಡಿ, ಪಶುಸಂಗೋಪನಾ ಇಲಾಖೆಯ ಸುಬ್ರಮಣಿ ಸೇರಿದಂತೆ ಸಮುದಾಯದ ಮುಖಂಡರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.