2047ಕ್ಕೆ ಭಾರತವನ್ನು ವಿಕಸಿತ ದೇಶವನ್ನಾಗಿಸುವುದೇ ಮೋದಿ ಸರ್ಕಾರದ ಗುರಿ: ವೇಣುಗೋಪಾಲ್
ಪ್ರಜಾಪ್ರಭುತ್ವದ ಆಶಯಗಳನ್ನು ಬಲಪಡಿಸುವಲ್ಲಿ ಮತದಾನದ ಹಕ್ಕು ಪ್ರಮುಖವಾಗಿದ್ದು, ಪ್ರತಿ ಯೊಬ್ಬ ಅರ್ಹ ನಾಗರಿಕನಿಗೂ ಮತದಾನದ ಹಕ್ಕು ದೊರೆಯುವಂತೆ ನೋಡಿಕೊಳ್ಳಬೇಕು. ಮತದಾರರ ಪಟ್ಟಿಯಲ್ಲಿರುವ ಲೋಪದೋಷಗಳನ್ನು ಪಾರದರ್ಶಕವಾಗಿ ಪರಿಶೀಲಿಸಿ ಸರಿಪಡಿಸುವ ಕಾರ್ಯಕ್ಕೆ ಕಾರ್ಯಕರ್ತರು ಆದ್ಯತೆ ನೀಡಬೇಕು ಎಂದು ಕರೆ ನೀಡಿದರು.
-
ಚಿಂತಾಮಣಿ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು 2047ರ ವೇಳೆಗೆ ಭಾರತವನ್ನು ವಿಕಸಿತ ಹಾಗೂ ಪ್ರಗತಿಪರ ರಾಷ್ಟ್ರವನ್ನಾಗಿಸುವ ಗುರಿಯೊಂದಿಗೆ ಕಾರ್ಯನಿರ್ವಹಿ ಸುತ್ತಿದೆ ಎಂದು ಬಿಜೆಪಿ(BJP)ಮುಖಂಡ ಜೆ.ಎನ್. ವೇಣುಗೋಪಾಲ್ ಹೇಳಿದರು.
ತಾಲೂಕಿನ ಬುರುಗಮಾಕಲಹಳ್ಳಿ ಗ್ರಾಮದ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಚಿಂತಾಮಣಿ ನಗರ ಹಾಗೂ ಮಂಡಲ ಘಟಕಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಬಿಎಲ್‌ಎ–2 ಕಾರ್ಯಾಗಾರ ಹಾಗೂ ನಗರ ಮತ್ತು ಮಂಡಲ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
ಪ್ರಜಾಪ್ರಭುತ್ವದ ಆಶಯಗಳನ್ನು ಬಲಪಡಿಸುವಲ್ಲಿ ಮತದಾನದ ಹಕ್ಕು ಪ್ರಮುಖವಾಗಿದ್ದು, ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ಮತದಾನದ ಹಕ್ಕು ದೊರೆಯುವಂತೆ ನೋಡಿಕೊಳ್ಳಬೇಕು. ಮತದಾರರ ಪಟ್ಟಿಯಲ್ಲಿರುವ ಲೋಪದೋಷಗಳನ್ನು ಪಾರದರ್ಶಕವಾಗಿ ಪರಿಶೀಲಿಸಿ ಸರಿಪಡಿಸುವ ಕಾರ್ಯಕ್ಕೆ ಕಾರ್ಯಕರ್ತರು ಆದ್ಯತೆ ನೀಡಬೇಕು ಎಂದು ಕರೆ ನೀಡಿದರು.
ಇದನ್ನೂ ಓದಿ: Chinthamani News: ಮಡಿವಾಳ ಸಮುದಾಯವನ್ನು ಎಸ್‌ಸಿಗೆ ಸೇರಿಸಲು ಒತ್ತಾಯ: ಸೆ.9ರಂದು ಚಿಕ್ಕಬಳ್ಳಾಪುರದಲ್ಲಿ ಬೃಹತ್ ಪ್ರತಿಭಟನೆ
ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳು ಹಾಗೂ ಜನಪರ ಯೋಜನೆಗಳು ಜಾರಿಯಾಗುತ್ತಿದ್ದು, ಅವುಗಳ ಪ್ರಯೋಜನ ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಮಾಹಿತಿ ನೀಡಬೇಕು ಎಂದರು.
ರಾಜ್ಯ ಕಾಂಗ್ರೆಸ್ ಸರ್ಕಾರ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದ್ದು, ಭ್ರಷ್ಟಾಚಾರ ಮತ್ತು ಆಡಳಿತ ವೈಫಲ್ಯದಿಂದ ಅಭಿವೃದ್ಧಿ ಕುಂಠಿತವಾಗಿದೆ ಎಂದು ಆರೋಪಿಸಿದರು. ಪಕ್ಷದ ಸಂಘಟನೆ ಬಲಪಡಿಸಲು ಮನೆ ಮನೆಗೆ ತೆರಳಿ ಮತದಾರರ ಪಟ್ಟಿಯ ಪರಿಶೀಲನೆ ನಡೆಸು ವಂತೆ ಕಾರ್ಯಕರ್ತರಿಗೆ ಸೂಚಿಸಿದರು.
ಸಭೆಯಲ್ಲಿ ಮಹೇಶ್ ಬೈ, ಪೆದ್ದೂರು ನಾಗರಾಜ್ ರೆಡ್ಡಿ, ಗೋವಿಂದರಾಜು, ರಾಜಣ್ಣ, ಮನು, ಗಾಜಲ ಶಿವ, ಆಂಜನೇಯರೆಡ್ಡಿ, ಶಿವರೆಡ್ಡಿ, ಪಾಲೇಪಲ್ಲಿ ಶಿವರೆಡ್ಡಿ, ಸುಮಿತ್ರಮ್ಮ, ಶೃತಿ, ಯುವ ಮೋರ್ಚಾ ಅಧ್ಯಕ್ಷ ಶ್ರೀನಿವಾಸ್ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.