ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Chikkaballapur News: ಟಿಕೆಟ್‌ಗಾಗಿ ಅಲ್ಲ, ಜನಸೇವೆಯೇ ನನ್ನ ಸಂಕಲ್ಪ: ಸಂದೀಪ್ ಬಿ. ರೆಡ್ಡಿ

ಪಕ್ಷದಲ್ಲಿ ಅನೇಕ ಹಿರಿಯ ನಾಯಕರು ಇದ್ದಾರೆ. ಕೆಲವೊಮ್ಮೆ ಹೆಸರು ಪ್ರಸ್ತಾಪವಾಗದಿದ್ದರೂ ಅದನ್ನು ದೊಡ್ಡ ವಿಷಯವಾಗಿ ಪರಿಗಣಿಸುವುದಿಲ್ಲ. ಸೂಕ್ತ ಸಮಯ ಬಂದಾಗ ಪಕ್ಷದ ವರಿಷ್ಠರು ಯಾರಿಗೆ ಅವಕಾಶ ನೀಡಬೇಕೆಂದು ತೀರ್ಮಾನಿಸುತ್ತಾರೆ. ಅದನ್ನು ಎಲ್ಲರೂ ಗೌರವಿಸಬೇಕು ಎಂದು ಹೇಳಿದರು.

ಟಿಕೆಟ್‌ಗಾಗಿ ಅಲ್ಲ, ಜನಸೇವೆಯೇ ನನ್ನ ಸಂಕಲ್ಪ: ಸಂದೀಪ್ ಬಿ. ರೆಡ್ಡಿ

ಸಂದೀಪ್ ಬಿ ರೆಡ್ಡಿ -

Profile
Ashok Nayak Aug 1, 2026 10:15 PM

ಚಿಕ್ಕಬಳ್ಳಾಪುರ: ಪಕ್ಷದಲ್ಲಿ ನಾಯಕತ್ವ ಮತ್ತು ಟಿಕೆಟ್ ಕುರಿತು ನಡೆಯುತ್ತಿರುವ ಚರ್ಚೆಗಳ ಬಗ್ಗೆ ಯಾವುದೇ ಅಸಮಾಧಾನ ಇಲ್ಲ. ಜನಸೇವೆ ಮಾಡುವುದು ನನ್ನ ಮುಖ್ಯ ಉದ್ದೇಶವಾಗಿದ್ದು, ಹುದ್ದೆ ಅಥವಾ ಟಿಕೆಟ್‌ಗಾಗಿ ರಾಜಕೀಯ ಮಾಡುತ್ತಿಲ್ಲ ಎಂದು ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷರು ಹಾಗೂ ಭಗತ್ ಸಿಂಗ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸಂದೀಪ್ ಬಿ.ರೆಡ್ಡಿ ಹೇಳಿದರು.

ತಾಲೂಕಿನ ಚಿಕ್ಕಕಾಡಿಗೇನಹಳ್ಳಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ ಅನೇಕ ಹಿರಿಯ ನಾಯಕರು ಇದ್ದಾರೆ. ಕೆಲವೊಮ್ಮೆ ಹೆಸರು ಪ್ರಸ್ತಾಪವಾಗದಿದ್ದರೂ ಅದನ್ನು ದೊಡ್ಡ ವಿಷಯವಾಗಿ ಪರಿಗಣಿಸುವುದಿಲ್ಲ. ಸೂಕ್ತ ಸಮಯ ಬಂದಾಗ ಪಕ್ಷದ ವರಿಷ್ಠರು ಯಾರಿಗೆ ಅವಕಾಶ ನೀಡಬೇಕೆಂದು ತೀರ್ಮಾನಿಸುತ್ತಾರೆ. ಅದನ್ನು ಎಲ್ಲರೂ ಗೌರವಿಸಬೇಕು ಎಂದು ಹೇಳಿದರು.

ಇದನ್ನೂ ಓದಿ: Chikkaballapur News: ಗ್ರಾಮೀಣರ ಆರೋಗ್ಯವೇ ಮೊದಲ ಆದ್ಯತೆ, ರಾಜಕಾರಣಕ್ಕೆ ಎರಡನೇ ಸ್ಥಾನ

"ನಾನು ಶಾಸಕನಾಗಬೇಕು ಅಥವಾ ಟಿಕೆಟ್ ಪಡೆಯಲೇಬೇಕು ಎಂಬ ಉದ್ದೇಶದಿಂದ ರಾಜಕೀಯ ಮಾಡುತ್ತಿಲ್ಲ. ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಸಮಾಜಸೇವೆಯಲ್ಲಿ ತೊಡಗಿರುವುದೇ ನನ್ನ ಸಂಕಲ್ಪ. ಹುದ್ದೆಗಳು ಮತ್ತು ಅವಕಾಶಗಳು ಸಮಯ ಬಂದಾಗ ತಾನಾಗಿಯೇ ಬರುತ್ತವೆ. ಜನರ ವಿಶ್ವಾಸ ಗಳಿಸುವುದೇ ನನಗೆ ಮುಖ್ಯ" ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷದ ಆಂತರಿಕ ಬೆಳವಣಿಗೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸಚಿವ ಸಂಪುಟ ವಿಸ್ತರಣೆ ಹಾಗೂ ಇತರ ರಾಜಕೀಯ ನಿರ್ಧಾರಗಳು ಕಾಂಗ್ರೆಸ್ ಪಕ್ಷದ ಆಂತರಿಕ ವಿಷಯಗಳಾಗಿದ್ದು, ಅದರ ಬಗ್ಗೆ ಪ್ರತಿಕ್ರಿಯೆ ನೀಡಲು ಇಷ್ಟಪಡುವುದಿಲ್ಲ ಎಂದರು.

ಆದರೆ ರಾಜ್ಯ ಸರ್ಕಾರದ ಕಾರ್ಯವೈಖರಿಯನ್ನು ಟೀಕಿಸಿದ ಅವರು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್(Chief Minister D.K. Shivakumar) ಅವರಿಗೆ ಸಂಪೂರ್ಣ ಸ್ವಾತಂತ್ರ‍್ಯ ದೊರೆತಿಲ್ಲ ಎಂಬ ಭಾವನೆ ಮೂಡುತ್ತಿದೆ. ಕಾಂಗ್ರೆಸ್ ಹೈಕಮಾಂಡ್ ನಿರಂತರ ಹಸ್ತಕ್ಷೇಪ ಮಾಡುತ್ತಿರುವುದು ಆಡಳಿತದ ಮೇಲೆ ಪರಿಣಾಮ ಬೀರುತ್ತಿದೆ ಎಂದು ಆರೋಪಿಸಿದರು.

2028ರ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ ಜನರು ಸರ್ಕಾರದ ಸಾಧನೆ ಹಾಗೂ ಆಡಳಿತವನ್ನು ಆಧರಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಅವರು, ಬಿಜೆಪಿ ಜನಪರ ಕಾರ್ಯಗಳ ಮೂಲಕ ಜನರ ವಿಶ್ವಾಸವನ್ನು ಮತ್ತಷ್ಟು ಬಲಪಡಿಸಲಿದೆ ಎಂದು ಹೇಳಿದರು.