Chikkaballapur News: ನಮ್ಮದು ನುಡಿದಂತೆ ನಡೆದ ಸರಕಾರ: ಜಿಲ್ಲೆಯಲ್ಲಿ 7845 ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ : ಯಲುವಳ್ಳಿ ಎನ್.ರಮೇಶ್
ವಿದ್ಯಾರ್ಥಿ (ಪುರುಷ)ಗಳ ಶಿಕ್ಷಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಉಚಿತ ಬಸ್ ಪಾಸ್ ಯೋಜನೆ ಯನ್ನೂ ಸರ್ಕಾರ ಇತ್ತೀಚಿಗೆ ಜಾರಿಗೆ ತಂದಿದೆ.ಗAಡು ಮಕ್ಕಳ ಶಿಕ್ಷಣ ಪ್ರಗತಿಗಾಗಿ ಜಿಲ್ಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ 7845 ವಿದ್ಯಾರ್ಥಿಗಳಿಗೆ ಇದುವರೆಗೆ ಉಚಿತ ಬಸ್ ಪಾಸ್ ಗಳನ್ನು ಕಳೆದ 15 ದಿನಗಳಲ್ಲಿ ವಿತರಿಸಲಾಗಿದೆ ಎಂದು ತಿಳಿಸಿದರು.
ನಮ್ಮದು ನುಡಿದಂತೆ ನಡೆವ ಸರಕಾರವಾಗಿದ್ದು ಜಿಲ್ಲೆಯಲ್ಲಿ ಕಳೆದ 15 ದಿನಗಳಿಂದ 7845 ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಮಾಡಲಾಗಿದೆ ಎಂದು ಜಿಲ್ಲಾ ಗ್ಯಾರೆಂಟಿ ಯೋಜನೆ ಪ್ರಾಧಿಕಾರದ ಅಧ್ಯಕ್ಷ ಯಲುವಳ್ಳಿ ಎನ್. ರಮೇಶ್ ತಿಳಿಸಿದರು. -
ಚಿಕ್ಕಬಳ್ಳಾಪುರ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಪರಿಣಾಮವಾಗಿ ಶಿಕ್ಷಣ, ಮಹಿಳಾ ಸಬಲೀಕರಣ ಹಾಗೂ ಸಾಮಾಜಿಕ ಭದ್ರತೆ ಕ್ಷೇತ್ರಗಳಲ್ಲಿ ಮಹತ್ವದ ಬದಲಾವಣೆಗಳು ಕಂಡು ಬಂದಿದ್ದು,ನಮ್ಮದು ನುಡಿದಂತೆ ನಡೆವ ಸರಕಾರವಾಗಿದ್ದು ಜಿಲ್ಲೆಯಲ್ಲಿ 7845 ವಿದ್ಯಾರ್ಥಿ ಗಳಿಗೆ ಉಚಿತ ಬಸ್ ಪಾಸ್ ವಿತರಣೆ ಮಾಡಲಾಗಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಯಲುವಳ್ಳಿ ಎನ್.ರಮೇಶ್ ತಿಳಿಸಿದರು.
ಚಿಕ್ಕಬಳ್ಳಾಪುರ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಬುಧವಾರ ನಗರದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜಿಲ್ಲೆಯ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಸಮಾಜದ ಎಲ್ಲ ವರ್ಗಗಳ ಅಭಿವೃದ್ಧಿಯನ್ನು ಗುರಿಯಾಗಿಸಿಕೊಂಡಿದ್ದು, ಮಹಿಳೆಯರು, ರೈತರು, ಯುವಕರು, ವಿದ್ಯಾರ್ಥಿಗಳು ಹಾಗೂ ಬಡ ಕುಟುಂಬಗಳ ಜೀವನಮಟ್ಟ ಸುಧಾರಣೆಗೆ ಮಹತ್ವದ ಕೊಡುಗೆ ನೀಡುತ್ತಿವೆ.
ಇದನ್ನೂ ಓದಿ: Chikkaballapur News: 1800 ಶಾಲೆ-ಕಾಲೇಜುಗಳಿಗೆ ವಿಸ್ತರಣೆ; 35 ಸಾವಿರಕ್ಕೂ ಹೆಚ್ಚು ಸಸಿ ನೆಡುವ ಗುರಿ
ಈಗಾಗಲೇ ಶಕ್ತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಗೃಹಜ್ಯೋತಿ ಮತ್ತು ಯುವನಿಧಿ ಯೋಜನೆಗಳು ಲಕ್ಷಾಂತರ ಕುಟುಂಬಗಳಿಗೆ ನೇರ ಪ್ರಯೋಜನ ತಲುಪಿಸುತ್ತಿವೆ. ವಿದ್ಯಾರ್ಥಿ (ಪುರುಷ)ಗಳ ಶಿಕ್ಷಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಉಚಿತ ಬಸ್ ಪಾಸ್ ಯೋಜನೆಯನ್ನೂ ಸರ್ಕಾರ ಇತ್ತೀಚಿಗೆ ಜಾರಿಗೆ ತಂದಿದೆ.ಗAಡು ಮಕ್ಕಳ ಶಿಕ್ಷಣ ಪ್ರಗತಿಗಾಗಿ ಜಿಲ್ಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ 7845 ವಿದ್ಯಾರ್ಥಿಗಳಿಗೆ ಇದುವರೆಗೆ ಉಚಿತ ಬಸ್ ಪಾಸ್ ಗಳನ್ನು ಕಳೆದ 15 ದಿನಗಳಲ್ಲಿ ವಿತರಿಸಲಾಗಿದೆ ಎಂದು ತಿಳಿಸಿದರು.
ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ದೊರೆತಿದ್ದು, ಶಿಕ್ಷಣ, ಉದ್ಯೋಗ, ಆರೋಗ್ಯ ಹಾಗೂ ಸ್ವಯಂ ಉದ್ಯೋಗ ಚಟುವಟಿಕೆಗಳಿಗೆ ಹೆಚ್ಚಿನ ಅವಕಾಶಗಳು ಸೃಷ್ಟಿಯಾಗಿವೆ. ಮಹಿಳಾ ವಿದ್ಯಾರ್ಥಿನಿಯರು ಸಹ ಈ ಯೋಜನೆಯಿಂದ ಹೆಚ್ಚಿನ ಪ್ರಯೋಜನ ಪಡೆದು ಶಾಲೆ ಮತ್ತು ಕಾಲೇಜುಗಳಿಗೆ ಸುಲಭವಾಗಿ ಸಂಚಾರ ಮಾಡುತ್ತಿದ್ದಾರೆ. ಇದೇ ಮಾದರಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಗಂಡು ಮಕ್ಕಳಿಗೂ ಉಚಿತ ಬಸ್ ಪಾಸ್ ನೀಡುವ ಮೂಲಕ ಅವರ ಶೈಕ್ಷಣಿಕ ವೆಚ್ಚವನ್ನು ಕಡಿಮೆ ಮಾಡಿ ಶಿಕ್ಷಣ ಮುಂದುವರಿಸಲು ಸರ್ಕಾರ ನೆರವಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಈಗಾಗಲೇ 7845 ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಲಾಗಿದ್ದು, ಇನ್ನೂ ಸುಮಾರು 7 ಸಾವಿರ ವಿದ್ಯಾರ್ಥಿಗಳು ಈ ಸೌಲಭ್ಯ ಪಡೆಯುವ ನಿರೀಕ್ಷೆಯಿದೆ. ಒಟ್ಟಾರೆ ಜಿಲ್ಲೆಯ ಲ್ಲಿಯೇ 13 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸುವ ಗುರಿಯನ್ನು ನಿಗದಿಪಡಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಮೂಲ ಉದ್ದೇಶ ಜನರ ಜೀವನ ನಿರ್ವಹಣೆಯ ವೆಚ್ಚವನ್ನು ಕಡಿಮೆ ಮಾಡುವುದು, ಕುಟುಂಬಗಳ ಆರ್ಥಿಕ ಸ್ಥಿರತೆಯನ್ನು ಹೆಚ್ಚಿಸುವುದು ಹಾಗೂ ಶಿಕ್ಷಣ ಮತ್ತು ಉದ್ಯೋಗಕ್ಕೆ ಉತ್ತೇಜನ ನೀಡುವುದಾಗಿದೆ. ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದರಿಂದ ದೂರದ ಗ್ರಾಮಗಳಿಂದ ಶಾಲೆ ಮತ್ತು ಕಾಲೇಜುಗಳಿಗೆ ಸಂಚರಿಸುವ ವಿದ್ಯಾರ್ಥಿ ಗಳ ಮೇಲಿನ ಆರ್ಥಿಕ ಹೊರೆ ಕಡಿಮೆಯಾಗಲಿದ್ದು, ಶಿಕ್ಷಣದಿಂದ ಯಾವುದೇ ವಿದ್ಯಾರ್ಥಿ ವಂಚಿತ ರಾಗದಂತೆ ನೋಡಿಕೊಳ್ಳುವಲ್ಲಿ ಈ ಯೋಜನೆ ಮಹತ್ವದ ಪಾತ್ರ ವಹಿಸಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಉಪಾಧ್ಯಕ್ಷರುಗಳಾದ ಎಸ್.ಎನ್ ಸುಬ್ಬಾರೆಡ್ಡಿ, ರಾಮಕೃಷ್ಣಪ್ಪ ಸದಸ್ಯರಾದ ಕೆ.ಎನ್ ಜಯರಾಮ್, ನಿರ್ಮಲಾ ಗಂಗಾಧರ್, ಮಧುಸೂಧನ್, ಮುನಿನಾರಾಯಣಪ್ಪ, ವೇಣುಗೋಪಾಲ್, ರಂಗರಾಜು, ಹೆಚ್.ಎಂ. ಮುನಿಯಪ್ಪ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಂತ್ರಣಾಧಿಕಾರಿ ಸಿದ್ದಲಿಂಗೇಶ್, ವಿವಿಧ ಇಲಾಖೆಗಳ ಅಧಿಕಾರಿಗಳು, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.