ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Chikkaballapur News: ಪತ್ರಿಕೋದ್ಯಮದ ಹಿರಿಯ ಸಾಧಕ ಭವಾನಿ ಲಕ್ಷ್ಮೀನಾರಾಯಣ್‌ಗೆ ಪಿ.ಆರ್.ರಾಮಯ್ಯ ಸ್ಮಾರಕ ದತ್ತಿ ಪ್ರಶಸ್ತಿ

ಕನ್ನಡ ಚಿತ್ರರಂಗದ ಅನೇಕ ದಿಗ್ಗಜ ನಟ-ನಟಿಯರ ಅಪರೂಪದ ಭಾವಚಿತ್ರಗಳನ್ನು ಸೆರೆಹಿಡಿದಿರುವ ಅವರು, ವರನಟ ಡಾ. ರಾಜ್‌ಕುಮಾರ್ ಅವರ ಕುಟುಂಬದೊಂದಿಗೂ ಆತ್ಮೀಯ ಒಡನಾಟ ಹೊಂದಿದ್ದರು. ಜಿಲ್ಲೆಯ ಪತ್ರಿಕೋದ್ಯಮ ಹಾಗೂ ಸಿನಿಮಾ ಕ್ಷೇತ್ರಕ್ಕೆ ಸಲ್ಲಿಸಿರುವ ಅವರ ಅಮೂಲ್ಯ ಸೇವೆಯನ್ನು ಗುರುತಿಸಿ ಕೆಯುಡಬ್ಲ್ಯೂಜೆ ದತ್ತಿ ಪ್ರಶಸ್ತಿಗೆ ಆಯ್ಕೆ ಮಾಡಿರುವುದು ಹೆಮ್ಮೆಯ ಸಂಗತಿ

ದತ್ತಿ ಪ್ರಶಸ್ತಿಗೆ ಆಯ್ಕೆಯಾದ ಹಿರಿಯ ಪತ್ರಕರ್ತರಿಗೆ ಸನ್ಮಾನ

-

Profile
Ashok Nayak Jul 24, 2026 10:47 PM

ಚಿಕ್ಕಬಳ್ಳಾಪುರ: ಜಿಲ್ಲೆಯ ಹಿರಿಯ ಪತ್ರಕರ್ತ ಹಾಗೂ ಛಾಯಾಗ್ರಾಹಕ ಭವಾನಿ ಲಕ್ಷ್ಮೀನಾರಾ ಯಣ್ ಅವರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಪ್ರಕಟಿಸಿರುವ 2026ನೇ ಸಾಲಿನ ಪಿ.ಆರ್.ರಾಮಯ್ಯ ಸ್ಮಾರಕ ದತ್ತಿ ಪ್ರಶಸ್ತಿಗೆ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಶುಕ್ರವಾರ ಅವರನ್ನು ಸನ್ಮಾನಿಸಿ ಅಭಿನಂದಿಸಿತು.

ನಗರದ ಬಿ.ಬಿ. ರಸ್ತೆಯಲ್ಲಿರುವ ಅವರ ನಿವಾಸಕ್ಕೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಹಾಗೂ ಹಿರಿಯ ಪತ್ರಕರ್ತರು ಭೇಟಿ ನೀಡಿ, ಮೈಸೂರು ಪೇಟೆ, ಶಾಲು ಹಾಗೂ ಹಾರ ಹಾಕಿ ಭವಾನಿ ಲಕ್ಷ್ಮೀನಾರಾಯಣ್ ಅವರನ್ನು ಗೌರವಿಸಿದರು. ಇದೇ ವೇಳೆ, ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಅಧಿಕೃತ ಆಹ್ವಾನವನ್ನೂ ನೀಡಿದರು.

ಇದನ್ನೂ ಓದಿ: Chikkaballapur News: ಚಿಕ್ಕಬಳ್ಳಾಪುರದಲ್ಲಿ ಕೃಷಿ ಇಲಾಖೆ ದಾಳಿ; 200 ಲೀಟರ್‌ಗೂ ಅಧಿಕ ರಾಸಾಯನಿಕ, ನಕಲಿ ಲೇಬಲ್‌ಗಳು ವಶ

ಈ ಸಂದರ್ಭದಲ್ಲಿ ಮಾತನಾಡಿದ ಹಿರಿಯ ಪತ್ರಕರ್ತರಾದ ಎಚ್.ವಿ.ಸೋಮಶೇಖರ್ ಮತ್ತು ಟಿ.ಎಸ್.ನಾಗೇಂದ್ರ ಬಾಬು, ಭವಾನಿ ಲಕ್ಷ್ಮೀನಾರಾಯಣ್ ಅವರು ಪತ್ರಿಕೋದ್ಯಮದ ಜೊತೆಗೆ ಛಾಯಾಗ್ರಹಣ ಕ್ಷೇತ್ರದಲ್ಲೂ ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿದ್ದಾರೆ.

ಕನ್ನಡ ಚಿತ್ರರಂಗದ ಅನೇಕ ದಿಗ್ಗಜ ನಟ-ನಟಿಯರ ಅಪರೂಪದ ಭಾವಚಿತ್ರಗಳನ್ನು ಸೆರೆ ಹಿಡಿದಿರುವ ಅವರು, ವರನಟ ಡಾ. ರಾಜ್‌ಕುಮಾರ್ ಅವರ ಕುಟುಂಬದೊಂದಿಗೂ ಆತ್ಮೀಯ ಒಡನಾಟ ಹೊಂದಿದ್ದರು. ಜಿಲ್ಲೆಯ ಪತ್ರಿಕೋದ್ಯಮ ಹಾಗೂ ಸಿನಿಮಾ ಕ್ಷೇತ್ರಕ್ಕೆ ಸಲ್ಲಿಸಿರುವ ಅವರ ಅಮೂಲ್ಯ ಸೇವೆಯನ್ನು ಗುರುತಿಸಿ ಕೆಯುಡಬ್ಲ್ಯೂಜೆ ದತ್ತಿ ಪ್ರಶಸ್ತಿಗೆ ಆಯ್ಕೆ ಮಾಡಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಭವಾನಿ ಲಕ್ಷ್ಮೀನಾರಾಯಣ್, "ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಈ ಬಾರಿ ನನ್ನನ್ನು ಪಿ.ಆರ್. ರಾಮಯ್ಯ ಸ್ಮಾರಕ ದತ್ತಿ ಪ್ರಶಸ್ತಿಗೆ ಆಯ್ಕೆ ಮಾಡಿರು ವುದು ತುಂಬ ಸಂತೋಷದ ಸಂಗತಿ. ಜಿಲ್ಲಾ ಹಾಗೂ ರಾಜ್ಯ ಸಂಘಕ್ಕೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುತ್ತೇನೆ" ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ವಿ.ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಕಾಗತಿ ನಾಗರಾಜಪ್ಪ, ಉಪಾಧ್ಯಕ್ಷ ಮುಬಶೀರ್ ಅಹಮ್ಮದ್, ಕಾರ್ಯದರ್ಶಿ ಎಂ. ಆನಂದ್, ಕಾರ್ಯಕಾರಿ ಮಂಡಳಿ ಸದಸ್ಯರಾದ ಕೆ.ಪಿ.ನವಮೋಹನ್, ಕೆ.ಕುಮಾರಸ್ವಾಮಿ, ಎನ್. ಚಂದ್ರೇಗೌಡ, ಡಿ. ದೇವರಾಜ್, ಹಿರಿಯ ಪತ್ರಕರ್ತ ಸಿ.ವಿ. ಲಕ್ಷ್ಮಣರಾಜು, ಭವಾನಿ ಲಕ್ಷ್ಮೀ ನಾರಾಯಣ್ ಅವರ ಕುಟುಂಬದ ಸದಸ್ಯರು ಹಾಗೂ ಪತ್ರಕರ್ತರು ಉಪಸ್ಥಿತರಿದ್ದರು.