ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Karnataka Urdu Literary Council: ಉರ್ದು ಶಾಲೆಗಳ ಉಳಿವಿಗೆ ಪೋಷಕರ ಸಹಕಾರ ಅತ್ಯಗತ್ಯ: ಮೊಹಮ್ಮದ್ ನಾಸೀರ್

ಉರ್ದು ಶಾಲೆಗಳಲ್ಲಿ ವ್ಯಾಸಂಗ ಮಾಡುವ ಮಕ್ಕಳಿಗೆ ಎಲ್ಲಾ ರೀತಿಯ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಹಾಗೂ ಸೇವೆ ಸಲ್ಲಿಸಲು ತಾವು ಸದಾ ಸಿದ್ಧನಿರುವುದಾಗಿ ಅವರು ಭರವಸೆ ನೀಡಿದರು. ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವ ಮೂಲಕ ಪೋಷಕರು ಸರ್ಕಾರ ನೀಡುವ ಹಲವಾರು ಉಚಿತ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು

ಉರ್ದು ಶಾಲೆಗಳ ಉಳಿವಿಗೆ ಪೋಷಕರ ಸಹಕಾರ ಅತ್ಯಗತ್ಯ

ಪಟ್ಟಣದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ಹಾಗೂ ಶೈಕ್ಷಣಿಕ ಸಾಮಗ್ರಿಗಳನ್ನು ವಿತರಣೆ ಮಾಡಲಾಯಿತು. -

Profile
Ashok Nayak Jun 20, 2026 8:23 PM

ಗುಡಿಬಂಡೆ: ಇತ್ತೀಚಿನ ದಿನಗಳಲ್ಲಿ ಉರ್ದು ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಗಣನೀಯ ವಾಗಿ ಕಡಿಮೆಯಾಗುತ್ತಿದ್ದು, ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿವೆ. ಈ ಶಾಲೆಗಳನ್ನು ಉಳಿಸಿ ಕೊಳ್ಳಲು ಪೋಷಕರು ತಮ್ಮ ಮಕ್ಕಳನ್ನು ಕಡ್ಡಾಯವಾಗಿ ಉರ್ದು ಶಾಲೆಗಳಿಗೆ ದಾಖಲಿಸಬೇಕು ಎಂದು ಕರ್ನಾಟಕ ಉರ್ದು ಸಾಹಿತ್ಯ ಪರಿಷತ್ತಿ(Karnataka Urdu Literary Council)ನ ರಾಜ್ಯಾಧ್ಯಕ್ಷ ಮೊಹಮ್ಮದ್ ನಾಸೀರ್ ಮನವಿ ಮಾಡಿದರು.

ಪಟ್ಟಣದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ಹಾಗೂ ಶೈಕ್ಷಣಿಕ ಸಾಮಗ್ರಿಗಳನ್ನು ವಿತರಿಸಿ ಮಾತನಾಡಿದರು.

ಇದನ್ನೂ ಓದಿ: Gudibande News: ಮೊಬೈಲ್ ವ್ಯಸನದಿಂದ ದೂರವಿರಿ, ಕ್ರೀಡಾಸಕ್ತಿ ಬೆಳೆಸಿಕೊಳ್ಳಿ: ನವೀನ್ ಕಿರಣ್ ಕರೆ

ಉರ್ದು ಶಾಲೆಗಳಲ್ಲಿ ವ್ಯಾಸಂಗ ಮಾಡುವ ಮಕ್ಕಳಿಗೆ ಎಲ್ಲಾ ರೀತಿಯ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಹಾಗೂ ಸೇವೆ ಸಲ್ಲಿಸಲು ತಾವು ಸದಾ ಸಿದ್ಧನಿರುವುದಾಗಿ ಅವರು ಭರವಸೆ ನೀಡಿದರು. ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವ ಮೂಲಕ ಪೋಷಕರು ಸರ್ಕಾರ ನೀಡುವ ಹಲವಾರು ಉಚಿತ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಅವರು ಕಿವಿಮಾತು ಹೇಳಿದರು.

ಪೋಷಕರು ಖಾಸಗಿ ಶಾಲೆಗಳತ್ತ ಹೆಚ್ಚು ಮುಖ ಮಾಡುತ್ತಿರುವುದು ಬೇಸರದ ಸಂಗತಿಯಾಗಿದ್ದು, ಈಗಾಗಲೇ ಮುಚ್ಚಿರುವ ಉರ್ದು ಶಾಲೆಗಳನ್ನು ಪುನರಾರಂಭಿಸಲು ಪ್ರಾಮಾಣಿಕ ಪ್ರಯತ್ನ ನಡೆಸ ಲಾಗುತ್ತಿದೆ. ಉರ್ದು ಶಾಲೆಗಳ ಉಳಿವಿಗೆ ಎಲ್ಲಾ ಪೋಷಕರ ಸಹಕಾರ ಬಹಳ ಮುಖ್ಯ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಉರ್ದು ಸಾಹಿತ್ಯ ಪರಿಷತ್ತಿನ ವತಿಯಿಂದ ಶಾಲಾ ಮಕ್ಕಳಿಗೆ ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಉರ್ದು ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು, ಶಾಲಾ ಸಿಬ್ಬಂದಿಗಳಾದ ಕೌಸರ್ ಸುಲ್ತಾನ, ಶಾಫಿಯಾ ಕೌಸರ್, ರೇಷ್ಮಾ ಭಾನು, ಎಸ್.ಡಿ.ಎಂ.ಸಿ. ಸದಸ್ಯರು ಸೇರಿದಂತೆ ಗಣ್ಯರು ಹಾಗೂ ಪೋಷಕರು ಉಪಸ್ಥಿತರಿದ್ದರು.