“ಜನರಿಗೆ ನೀರೇ ಇಲ್ಲ… ಅಭಿವೃದ್ಧಿ ಎಲ್ಲಿದೆ?” ನಗರಸಭೆ ವಿರುದ್ಧ ಸಾರ್ವಜನಿಕರ ಆಕ್ರೋಶ
ನಗರದ ಕೋಟೆ ವೃತ್ತದಲ್ಲಿರುವ ನಗರಸಭೆ ಸಮುದಾಯ ಭವನದ ಆವರಣದಲ್ಲಿ ನಿರ್ಮಿಸಿದ್ದ ನೀರಿನ ಘಟಕ ಕಳೆದ ನಾಲ್ಕು ವರ್ಷಗಳಿಂದ ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸಾರ್ವಜನಿಕರಿಗೆ ಅನುಕೂಲ ವಾಗಬೇಕಿದ್ದ ನೀರಿನ ಟ್ಯಾಂಕ್ ಹಾಗೂ ಸರಬರಾಜು ವ್ಯವಸ್ಥೆ ನಿರ್ವಹಣೆ ಕೊರತೆಯಿಂದ ಸಂಪೂರ್ಣ ನಿರ್ಲಕ್ಷ್ಯಕ್ಕೊಳಗಾಗಿದೆ ಎನ್ನಲಾಗಿದೆ.
-
ಶಿಡ್ಲಘಟ್ಟ : ಬೇಸಿಗೆ ಆರಂಭವಾಗುತ್ತಿದ್ದಂತೆ ಸಾರ್ವಜನಿಕರಿಗೆ ಸಮರ್ಪಕ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಬೇಕಾದ ನಗರಸಭೆ ವಿರುದ್ಧ ಇದೀಗ ಸಾರ್ವಜನಿಕರ ಆಕ್ರೋಶ ಹೆಚ್ಚಾಗಿದೆ. ನಗರದ ಹಲವು ಪ್ರದೇಶಗಳಲ್ಲಿ ನೀರಿನ ಸಮಸ್ಯೆ ತೀವ್ರವಾಗಿರುವ ನಡುವೆಯೇ, ನಗರಸಭೆ ವ್ಯಾಪ್ತಿಯ ಎರಡು ನೀರಿನ ಘಟಕಗಳು ಬಳಕೆಯಾಗದೇ ಮೂಲೆ ಗುಂಪಾ ಗಿರುವುದು ಜನರ ಅಸಮಾಧಾನಕ್ಕೆ ಕಾರಣವಾಗಿದೆ.
ಇದನ್ನೂ ಓದಿ: Shidlaghatta News: ಕನಸಾಗಿಯೇ ಉಳಿದ ಸೀಕಲ್ ರಾಮಚಂದ್ರಗೌಡರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಭರವಸೆ
ನಗರದ ಕೋಟೆ ವೃತ್ತದಲ್ಲಿರುವ ನಗರಸಭೆ ಸಮುದಾಯ ಭವನದ ಆವರಣದಲ್ಲಿ ನಿರ್ಮಿಸಿದ್ದ ನೀರಿನ ಘಟಕ ಕಳೆದ ನಾಲ್ಕು ವರ್ಷಗಳಿಂದ ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸಾರ್ವಜನಿಕರಿಗೆ ಅನುಕೂಲ ವಾಗಬೇಕಿದ್ದ ನೀರಿನ ಟ್ಯಾಂಕ್ ಹಾಗೂ ಸರಬರಾಜು ವ್ಯವಸ್ಥೆ ನಿರ್ವಹಣೆ ಕೊರತೆಯಿಂದ ಸಂಪೂರ್ಣ ನಿರ್ಲಕ್ಷ್ಯಕ್ಕೊಳಗಾಗಿದೆ ಎನ್ನಲಾಗಿದೆ.
ಇನ್ನೊಂದೆಡೆ ಸಿದ್ದಾರ್ಥನಗರದಲ್ಲಿರುವ ಮತ್ತೊಂದು ನೀರಿನ ಘಟಕವೂ ನಿರ್ವಹಣೆ ಇಲ್ಲದೆ ಬಳಕೆಯಾಗದೇ ಉಳಿದಿದೆ. ಬೇಸಿಗೆಯಲ್ಲಿ ಕುಡಿಯುವ ನೀರಿಗಾಗಿ ಜನರು ಪರದಾಡು ತ್ತಿರುವಾಗಲೇ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ್ದ ಯೋಜನೆಗಳು ಪ್ರಯೋಜನವಿಲ್ಲದಂತಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ನಗರಸಭೆ ಮಾಜಿ ಸದಸ್ಯ ಚಾಂದ್ ಪಾಷಾ ಮಾತನಾಡಿ, “ಅಭಿವೃದ್ಧಿ ಕೇವಲ ಮಾತಿನ ಮಟ್ಟಕ್ಕೆ ಸೀಮಿತವಾಗಿದೆ. ಜನರಿಗೆ ಮೂಲಭೂತ ಸೌಲಭ್ಯ ಒದಗಿಸುವಲ್ಲಿ ನಗರಸಭೆ ವಿಫಲವಾಗಿದೆ.
ಕೂಡಲೇ ನೀರಿನ ಘಟಕಗಳನ್ನು ದುರಸ್ತಿ ಮಾಡಿ ಸಾರ್ವಜನಿಕ ಬಳಕೆಗೆ ನೀಡಬೇಕು” ಎಂದು ಆಗ್ರಹಿಸಿದರು.
ಸಮಸ್ಯೆ ಶೀಘ್ರ ಪರಿಹರಿಸಿ ನಗರದಲ್ಲಿ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸ ಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.