ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Shidlaghatta News: ಜನರ ವಿಶ್ವಾಸವೇ ನನ್ನ ರಾಜಕೀಯ ಶಕ್ತಿ: ಪುಟ್ಟು ಆಂಜಿನಪ್ಪ

ಶಿಡ್ಲಘಟ್ಟ ಕ್ಷೇತ್ರವನ್ನು ನಾಲ್ಕು ದಶಕಗಳ ಕಾಲ ಪ್ರತಿನಿಧಿಸಿ ಸಚಿವರಾಗಿ ಹಾಗೂ ಶಾಸಕರಾಗಿ ಜನಸೇವೆ ಸಲ್ಲಿಸಿರುವ ವಿ. ಮುನಿಯಪ್ಪ ಅವರ ಸೇವೆಯನ್ನು ಸ್ಮರಿಸಿದರು. ಪ್ರಸ್ತುತ ಚಿಕಿತ್ಸೆ ಪಡೆಯುತ್ತಿರುವ ಅವರು ಶೀಘ್ರ ಗುಣಮುಖರಾಗಿ ಮತ್ತೆ ಜನರ ನಡುವೆ ಬರಲಿ. ಅವರ ಅನುಭವ ಹಾಗೂ ಮಾರ್ಗದರ್ಶನ ಪಕ್ಷಕ್ಕೂ ಕ್ಷೇತ್ರದ ಅಭಿವೃದ್ಧಿಗೂ ಅಗತ್ಯವಾಗಿದೆ

ಜನರ ವಿಶ್ವಾಸವೇ ನನ್ನ ರಾಜಕೀಯ ಶಕ್ತಿ: ಪುಟ್ಟು ಆಂಜಿನಪ್ಪ

ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸಂದರ್ಭದಲ್ಲಿಯೂ ಕ್ಷೇತ್ರದ ಜನತೆ ತಮ್ಮ ಮೇಲೆ ಅಪಾರ ವಿಶ್ವಾಸವಿಟ್ಟು ೫೨ ಸಾವಿರಕ್ಕೂ ಹೆಚ್ಚು ಮತಗಳನ್ನು ನೀಡಿರುವುದು ಜೀವನದ ದೊಡ್ಡ ಶಕ್ತಿಯಾಗಿದೆ ಎಂದು ಕಾಂಗ್ರೆಸ್ ಮುಖಂಡ ಪುಟ್ಟು ಆಂಜಿನಪ್ಪ ಹೇಳಿದರು. -

Profile
Ashok Nayak May 17, 2026 9:25 PM

ಶಿಡ್ಲಘಟ್ಟ: ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸಂದರ್ಭದಲ್ಲಿಯೂ ಕ್ಷೇತ್ರದ ಜನತೆ ತಮ್ಮ ಮೇಲೆ ಅಪಾರ ವಿಶ್ವಾಸವಿಟ್ಟು 52 ಸಾವಿರಕ್ಕೂ ಹೆಚ್ಚು ಮತಗಳನ್ನು ನೀಡಿರುವುದು ಜೀವನದ ದೊಡ್ಡ ಶಕ್ತಿಯಾಗಿದೆ ಎಂದು ಕಾಂಗ್ರೆಸ್ ಮುಖಂಡ ಪುಟ್ಟು ಆಂಜಿನಪ್ಪ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ 15 ವರ್ಷಗಳಿಂದ ಕ್ಷೇತ್ರದ ಜನರ ಕಷ್ಟ-ಸುಖ ಗಳಲ್ಲಿ ಭಾಗಿಯಾಗುತ್ತಾ ಜನಸೇವೆ ಮಾಡುತ್ತಿದ್ದೇನೆ. ಮುಂದಿನ ದಿನಗಳಲ್ಲಿ ಸದೃಢ ಹಾಗೂ ಅಭಿವೃದ್ಧಿ ಹೊಂದಿದ ಶಿಡ್ಲಘಟ್ಟ ನಿರ್ಮಾಣಕ್ಕೆ ಯುವಕರು ಹಾಗೂ ಸಾರ್ವಜನಿಕರು ಕೈಜೋಡಿಸ ಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಕ್ಷೇತ್ರದ ಅಭಿವೃದ್ಧಿ, ಮೂಲಸೌಕರ್ಯ ಹಾಗೂ ಜನಸಮಸ್ಯೆಗಳ ಪರಿಹಾರ ಕುರಿತಂತೆ ಹಿರಿಯ ನಾಯಕರೊಂದಿಗೆ ನಿರಂತರ ಚರ್ಚೆ ನಡೆಸಲಾಗುತ್ತಿದೆ. ಸರ್ಕಾರದ ಸೌಲಭ್ಯಗಳನ್ನು ಪ್ರತಿಯೊಬ್ಬ ಅರ್ಹರಿಗೂ ತಲುಪಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ: Shidlaghatta News: ಜಾತಿ ಬೇಧ ಮರೆತು ಸಮಾಜ ಒಗ್ಗಟ್ಟಾಗಬೇಕು : ಶ್ರೀರಾಮ ಆಚರಣ ಸಮಿತಿ ಅಧ್ಯಕ್ಷ ಬಿ.ವೆಂಕಟೇಶ್

ರಾಜ್ಯದ ಉಪಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರಿಗೆ ಜನ್ಮದಿನದ ಶುಭಾಶಯಗಳನ್ನು ತಿಳಿಸಿದ ಅವರು, ಅವರ ರಾಜಕೀಯ ಜೀವನ ಇನ್ನಷ್ಟು ಉಜ್ವಲ ವಾಗಲಿ ಎಂದು ಹಾರೈಸಿದರು.

ಅದೇ ವೇಳೆ, ಶಿಡ್ಲಘಟ್ಟ ಕ್ಷೇತ್ರವನ್ನು ನಾಲ್ಕು ದಶಕಗಳ ಕಾಲ ಪ್ರತಿನಿಧಿಸಿ ಸಚಿವರಾಗಿ ಹಾಗೂ ಶಾಸಕರಾಗಿ ಜನಸೇವೆ ಸಲ್ಲಿಸಿರುವ ವಿ. ಮುನಿಯಪ್ಪ ಅವರ ಸೇವೆಯನ್ನು ಸ್ಮರಿಸಿದರು. ಪ್ರಸ್ತುತ ಚಿಕಿತ್ಸೆ ಪಡೆಯುತ್ತಿರುವ ಅವರು ಶೀಘ್ರ ಗುಣಮುಖರಾಗಿ ಮತ್ತೆ ಜನರ ನಡುವೆ ಬರಲಿ. ಅವರ ಅನುಭವ ಹಾಗೂ ಮಾರ್ಗದರ್ಶನ ಪಕ್ಷಕ್ಕೂ ಕ್ಷೇತ್ರದ ಅಭಿವೃದ್ಧಿಗೂ ಅಗತ್ಯವಾಗಿದೆ ಎಂದು ಹೇಳಿದರು.

“ಜನರ ನಡುವೆ ನಿಂತು ಪ್ರಾಮಾಣಿಕ ರಾಜಕಾರಣದ ಮೂಲಕ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧನಾಗಿದ್ದೇನೆ” ಎಂದು ಪುಟ್ಟು ಆಂಜಿನಪ್ಪ ತಿಳಿಸಿದರು.

ಈ ಸಂದರ್ಭದಲ್ಲಿ ವರದರಾಜು, ಬಡವನಹಳ್ಳಿ ಮೂರ್ತಿ, ವೆಂಕಟೇಶ್, ರಾಮಾಂಜನೇಯ ಸೇರಿ ದಂತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.