Gauribidanur News: ಛಾಯಾಗ್ರಾಹಕರು ಸಮಾಜದ ಕಣ್ಣುಗಳಾಗಿ ಕೆಲಸ ಮಾಡುತ್ತಿದ್ದಾರೆ: ಕೆಪಿಎ ರಾಜ್ಯಾಧ್ಯಕ್ಷ ಎಚ್.ಎಸ್.ನಾಗೇಶ್
ಕೆಪಿಎ ಜಿಲ್ಲಾ ನಿರ್ದೇಶಕ ರಾಮಚಂದ್ರಪ್ಪ ಮಾತನಾಡಿ, ತಂತ್ರಜ್ಞಾನ ಬೆಳವಣಿಗೆಯೊಂದಿಗೆ ಛಾಯಾ ಗ್ರಹಣ ಕ್ಷೇತ್ರವೂ ಹೊಸ ಆಯಾಮಗಳನ್ನು ಪಡೆದುಕೊಳ್ಳುತ್ತಿದೆ. ಆದ್ದರಿಂದ ಛಾಯಾ ಗ್ರಾಹಕರು ನಿರಂತರವಾಗಿ ತಮ್ಮ ಕೌಶಲ್ಯವನ್ನು ಅಭಿವೃದ್ಧಿಪಡಿಸಿಕೊಳ್ಳಬೇಕು, ಸಂಘಟನಾ ಸಭೆಗಳು ಸಂಘದ ಬಲವರ್ಧನೆಗೆ ಸಹಕಾರಿಯಾಗುತ್ತವೆ. ಸದಸ್ಯರ ಹಿತಾಸಕ್ತಿ, ವೃತ್ತಿಪರ ಸಮಸ್ಯೆಗಳ ಪರಿಹಾರ ಹಾಗೂ ಪರಸ್ಪರ ಸಹಕಾರಕ್ಕಾಗಿ ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು.
-
ಗೌರಿಬಿದನೂರು: ಛಾಯಾಗ್ರಹಣ ಕ್ಷೇತ್ರ(Photography field)ವು ಸಮಾಜದ ಘಟನೆಗಳು, ಸಂಸ್ಕೃತಿ, ಪರಂಪರೆ ಮತ್ತು ಇತಿಹಾಸವನ್ನು ದಾಖಲಿಸುವ ಮಹತ್ತರ ಜವಾಬ್ದಾರಿಯನ್ನು ಹೊಂದಿ ದೆ. ಛಾಯಾಗ್ರಾಹಕರು ತಮ್ಮ ಕ್ಯಾಮೆರಾ ಮೂಲಕ ಸಮಾಜದ ಕಣ್ಣುಗಳಾಗಿ ಕಾರ್ಯ ನಿರ್ವಹಿಸು ತ್ತಿದ್ದಾರೆ. ಅವರ ಪರಿಶ್ರಮ ಮತ್ತು ಸೇವೆಯನ್ನು ಗುರುತಿಸಿ ಅವರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಕೆಪಿಎ ರಾಜ್ಯಾಧ್ಯಕ್ಷ ಎಚ್.ಎಸ್.ನಾಗೇಶ್ ಹೇಳಿದರು.
ನಗರದ ನದಿದಡದ ಶ್ರೀ ಪ್ರಸನ್ನಾಂಜನೇಯ ಸ್ವಾಮಿ ಕಲ್ಯಾಣ ಮಂಟಪದಲ್ಲಿ ತಾಲೂಕು ಛಾಯಾ ಚಿತ್ರ ಗ್ರಾಹಕರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಮತ್ತು ವೃತ್ತಿಪರ ಛಾಯಾಗ್ರಹಕರಿಗೆ ಕಾರ್ಮಿಕರ ಕಾರ್ಡ್ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸುವುದರಿಂದ ಇತರೆ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಪ್ರೇರಣೆ ದೊರೆಯುತ್ತದೆ ಎಂದರು.
ಇದನ್ನೂ ಓದಿ: Gauribidanur News: ಅಪಾಯದ ಮನೆಗಳಲ್ಲಿ ವಾಸವಿರುವವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ತಹಶೀಲ್ದಾರ್ ಕರೆ
ಸೌಲಭ್ಯಗಳು: ಸರಕಾರದ ಕಾರ್ಮಿಕ ಇಲಾಖೆಯ ವತಿಯಿಂದ ಸಿಗುವ ಸೌಲಭ್ಯಗಳನ್ನು ವೃತ್ತಿಪರ ಛಾಯಾಗ್ರಹಕರು ಪಡೆದುಕೊಳ್ಳಬೇಕು, ಜೊತೆಗೆ ನಮ್ಮ ರಾಜ್ಯ ಸಂಘದ ವತಿಯಿಂದ ಕೆಪಿಎ ಆಸರೆ ಯೋಜನೆಯನ್ನು ಜಾರಿಗೊಳಿಸಲಾಗಿದ್ದು, ಪ್ರತಿಯೊಬ್ಬ ಛಾಯಾಗ್ರಹಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.
ಕೆಪಿಎ ಜಿಲ್ಲಾ ನಿರ್ದೇಶಕ ರಾಮಚಂದ್ರಪ್ಪ ಮಾತನಾಡಿ, ತಂತ್ರಜ್ಞಾನ ಬೆಳವಣಿಗೆಯೊಂದಿಗೆ ಛಾಯಾಗ್ರಹಣ ಕ್ಷೇತ್ರವೂ ಹೊಸ ಆಯಾಮಗಳನ್ನು ಪಡೆದುಕೊಳ್ಳುತ್ತಿದೆ. ಆದ್ದರಿಂದ ಛಾಯಾ ಗ್ರಾಹಕರು ನಿರಂತರವಾಗಿ ತಮ್ಮ ಕೌಶಲ್ಯವನ್ನು ಅಭಿವೃದ್ಧಿಪಡಿಸಿಕೊಳ್ಳಬೇಕು, ಸಂಘಟನಾ ಸಭೆಗಳು ಸಂಘದ ಬಲವರ್ಧನೆಗೆ ಸಹಕಾರಿಯಾಗುತ್ತವೆ. ಸದಸ್ಯರ ಹಿತಾಸಕ್ತಿ, ವೃತ್ತಿಪರ ಸಮಸ್ಯೆಗಳ ಪರಿಹಾರ ಹಾಗೂ ಪರಸ್ಪರ ಸಹಕಾರಕ್ಕಾಗಿ ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು. ಛಾಯಾಗ್ರಾಹಕರ ಕಲ್ಯಾಣ ಮತ್ತು ವೃತ್ತಿಯ ಅಭಿವೃದ್ಧಿಗೆ ಸಂಘವು ಇನ್ನಷ್ಟು ಶ್ರಮಿಸಬೇಕು ಎಂದು ತಿಳಿಸಿದರು.
ಕಾರ್ಮಿಕ ಇಲಾಖೆಯ ಸಹಾಯಕ ನಿರ್ದೇಶಕ ಎಸ್.ಹರೀಶ್ ಕುಮಾರ್ ಮಾತನಾಡಿ, ಕಾರ್ಮಿಕ ಇಲಾಖೆಯಲ್ಲಿ ಛಾಯಾಗ್ರಹಕ ವೃತ್ತಿಪರರು ನೋಂದಣೆ ಮಾಡಿಕೊಂಡು ಇಲಾಖೆಯಿಂದ ಸಿಗುವ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.
ತಾಲೂಕು ಛಾಯಾಚಿತ್ರ ಗ್ರಾಹಕರ ಸಂಘದ ಅಧ್ಯಕ್ಷ ಅವುಲನ್ನ ಮಾತನಾಡಿ, ಛಾಯಾಗ್ರಹಣವು ಕೇವಲ ವೃತ್ತಿಯಲ್ಲ, ಅದು ಸಮಾಜದ ಇತಿಹಾಸವನ್ನು ದಾಖಲಿಸುವ ಮಹತ್ವದ ಕಲೆಯಾಗಿದೆ, ಛಾಯಾಗ್ರಾಹಕರು ಸಂಘದ ವತಿಯಿಂದ ಛಾಯಾಗ್ರಾಹಕರ ಹಿತಾಸಕ್ತಿಗಾಗಿ ವಿವಿಧ ತರಬೇತಿ ಕಾರ್ಯಕ್ರಮಗಳು, ಕಾರ್ಯಾಗಾರಗಳು ಹಾಗೂ ಕಲ್ಯಾಣ ಯೋಜನೆಗಳನ್ನು ಹಮ್ಮಿಕೊಳ್ಳ ಲಾಗುತ್ತಿದೆ. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಎಸ್ಸೆಸ್ಸಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಪಡೆದ ಛಾಯಾಗ್ರಹಕರ ಮಕ್ಕಳನ್ನು ಪ್ರತಿಭಾ ಪುರಸ್ಕಾರ ಮಾಡಲಾಯಿತು.
ವೇದಿಕೆಯಲ್ಲಿ ಕೆಪಿಎ ಖಜಾಂಚಿ ಲಕ್ಷ್ಮಣ್, ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷ ಎನ್.ಶ್ರೀನಿವಾಸ್, ಉಪಾಧ್ಯಕ್ಷ ನಂಜುಂಡಬಾಬು, ತಾಲೂಕು ಅಧ್ಯಕ್ಷ ಸೀತರಾಮರೆಡ್ಡಿ, ಪ್ರಧಾನ ಕಾರ್ಯದರ್ಶಿ ಎಂ.ಎಸ್.ವಿ. ಬಾಬು, ಖಜಾಂಚಿ ನಾಗರಾಜು, ಮಿಲ್ಟ್ರಿ ಮಂಜು, ಚಿಂತಾಮಣಿ ತಾಲೂಕು ಅಧ್ಯಕ್ಷ ಶಿವಕುಮಾರ್, ಗೌರಿಬಿದನೂರು ಸಂಘದ ಗೌರವಾಧ್ಯಕ್ಷ ಫಣಿಲ್ ಕುಮಾರ್, ಪ್ರಧಾನ ಕಾರ್ಯದರ್ಶಿ ಎನ್.ಉಮಾ ಶಂಕರ್, ಉಪಾಧ್ಯಕ್ಷ ಸುರೇಶ್ನಾಯಕ್, ಹೆಚ್.ಸಿ.ರವಿ, ಖಜಾಂಚಿ ರವಿಚಂದ್ರ ಸೇರಿದಂತೆ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.