ಶಾಂತಿಯುತ ಬಕ್ರೀದ್ ಆಚರಣೆಗೆ ಪೊಲೀಸ್ ಸನ್ನದ್ಧ: ಚಿಂತಾಮಣಿ ವೃತ್ತ ನಿರೀಕ್ಷಕ ಬಿ.ಎ.ವಿಜಿ ಕುಮಾರ್ ಭರವಸೆ
ಚಿಂತಾಮಣಿ ನಗರ ಮತ್ತು ಗ್ರಾಮಾಂತರ ಪ್ರದೇಶಗಳು ಶಾಂತಿ ಮತ್ತು ಸೌಹಾರ್ದತೆಗೆ ಹೆಸರಾಗಿದ್ದು, ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಹಬ್ಬವನ್ನು ಯಶಸ್ವಿಯಾಗಿ ಆಚರಿಸಲು ಸಾರ್ವಜನಿಕರ ಸಹಕಾರ ಅತ್ಯಗತ್ಯ. ಪೊಲೀಸ್ ಇಲಾಖೆಯ ವತಿಯಿಂದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಎಲ್ಲಾ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಭರವಸೆ ನೀಡಿದರು.
ನಗರ ಪೊಲೀಸ್ ಠಾಣೆಯಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ಶಾಂತಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.ಈ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸರ್ಕಲ್ ಇನ್ಸ್ಪೆಕ್ಟರ್ ಬಿ.ಎ.ವಿಜಿ ಕುಮಾರ್ ಅವರು,ಮುಂಬರುವ ಬಕ್ರೀದ್ ಹಬ್ಬವನ್ನು ಶಾಂತಿ ಹಾಗೂ ಸೌಹಾರ್ದತೆಯಿಂದ ಆಚರಿಸುವಂತೆ ಕರೆ ನೀಡಿದರು. -
ಚಿಂತಾಮಣಿ: ನಗರ ಪೊಲೀಸ್ ಠಾಣೆಯಲ್ಲಿ ಬಕ್ರೀದ್ ಹಬ್ಬ(Bakrid Festival)ದ ಪ್ರಯುಕ್ತ ಶಾಂತಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸರ್ಕಲ್ ಇನ್ಸ್ಪೆಕ್ಟರ್ ಬಿ.ಎ.ವಿಜಿ ಕುಮಾರ್ ಅವರು, ಮುಂಬರುವ ಬಕ್ರೀದ್ ಹಬ್ಬವನ್ನು ಶಾಂತಿ ಹಾಗೂ ಸೌಹಾರ್ದತೆಯಿಂದ ಆಚರಿಸುವಂತೆ ಕರೆ ನೀಡಿದರು.
ಚಿಂತಾಮಣಿ ನಗರ ಮತ್ತು ಗ್ರಾಮಾಂತರ ಪ್ರದೇಶಗಳು ಶಾಂತಿ ಮತ್ತು ಸೌಹಾರ್ದತೆಗೆ ಹೆಸರಾಗಿದ್ದು, ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಹಬ್ಬವನ್ನು ಯಶಸ್ವಿಯಾಗಿ ಆಚರಿಸಲು ಸಾರ್ವಜನಿಕರ ಸಹಕಾರ ಅತ್ಯಗತ್ಯ. ಪೊಲೀಸ್ ಇಲಾಖೆಯ ವತಿಯಿಂದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಎಲ್ಲಾ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಭರವಸೆ ನೀಡಿದರು.
ಇದನ್ನೂ ಓದಿ: Bakrid: ಬಾಗೇಪಲ್ಲಿ ತಾಲ್ಲೂಕಿನಾದ್ಯಂತ ಶ್ರದ್ಧಾ ಭಕ್ತಿಯಿಂದ ಬಕ್ರೀದ್ ಆಚರಣೆ
ಸಭೆಯಲ್ಲಿ ಮುಸ್ಲಿಂ ಸಮುದಾಯದ ಮುಖಂಡರು ಮತ್ತು ಸಾರ್ವಜನಿಕರು ಭಾಗವಹಿಸಿ,ಹಬ್ಬದ ಆಚರಣೆಯ ಸಮಯ ಮತ್ತು ಪ್ರಾರ್ಥನೆಯ ವಿವರಗಳ ಕುರಿತು ಚರ್ಚಿಸಿದರು ಹಾಗೂ ಹಬ್ಬವನ್ನು ಶಾಂತಿಯುತವಾಗಿ ಆಚರಿಸಲು ಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಮಸೀದಿಗಳ ಮುಖ್ಯಸ್ಥರಾದ ರಹಿಂ ಖಾನ್, ಇಮ್ತಿಯಾಜ್ ಪಾಷಾ, ಸಿಕೆಎಲ್ ಚಾಂದ್ ಪಾಷಾ, ಶಬ್ಬೀರ್ ಪಾಷಾ, ಜಬಿವುಲ್ಲಾ, ಟಿಪ್ಪು, ಸೈಯದ್ ಸಿಕಂದರ್, ಮುಜೀರ್ ಅಹ್ಮದ್, ಜಹೀರ್ ಪಾಷಾ, ಸಿ ಕೆ ಶಬ್ಬೀರ್, ಟಿಪ್ಪು ನಗರ ಶಫಿವುಲ್ಲಾ ಸೇರಿದಂತೆ ಎಲ್ಲಾ ಮಸೀದಿಗಳ ಮುಖ್ಯಸ್ಥರುಗಳು ಮುಖಂಡರುಗಳು ಭಾಗವಹಿಸಿದ್ದರು.