ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Road Accident: ಗೌರಿಬಿದನೂರಿನಲ್ಲಿ ಸ್ಕೂಟಿ-ಲಾರಿ ಡಿಕ್ಕಿಯಾಗಿ 5 ತಿಂಗಳ ಗರ್ಭಿಣಿ, ಪತಿ ದುರ್ಮರಣ

Gauribidanur News: ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ದಂಪತಿ, ಸಂಬಂಧಿಕರೊಬ್ಬರ ಕಾರ್ಯಕ್ರಮ ಮುಗಿಸಿಕೊಂಡು ಸ್ಕೂಟಿಯಲ್ಲಿ ವಾಪಸ್ ಮನೆಗೆ ಬರುತ್ತಿದ್ದ ವೇಳೆ ಸ್ಕೂಟಿಗೆ ಲಾರಿ ಡಿಕ್ಕಿ ಹೊಡೆದಿದೆ. ಇದರಿಂದ ಐದು ತಿಂಗಳ ಗರ್ಭಿಣಿ ಮತ್ತು ಆಕೆಯ ಪತಿ ಮೃತಪಟ್ಟಿದ್ದಾರೆ.

ಸ್ಕೂಟಿ-ಲಾರಿ ಡಿಕ್ಕಿಯಾಗಿ 5 ತಿಂಗಳ ಗರ್ಭಿಣಿ, ಪತಿ ದುರ್ಮರಣ

Prabhakara R Prabhakara R Jul 23, 2025 5:18 PM

ಚಿಕ್ಕಬಳ್ಳಾಪುರ: ಸ್ಕೂಟಿ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐದು ತಿಂಗಳ ಗರ್ಭಿಣಿ ಮತ್ತು ಆಕೆಯ ಪತಿ ಮೃತಪಟ್ಟಿರುವುದು ಗೌರಿಬಿದನೂರಿನಲ್ಲಿ ನಡೆದಿದೆ. ನೂರಿ (35) ಮತ್ತು ಯಾಸಿನ್ ಖಾನ್ (45) ಮೃತ ದಂಪತಿ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಕುಡುಮಲಕುಂಟೆಯಲ್ಲಿ ಮಂಗಳವಾರ ರಾತ್ರಿ ಅಪಘಾತ ನಡೆದಿದೆ. ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಬಂದ ಗೌರಿಬಿದನೂರು ಗ್ರಾಮಾಂತರ ಠಾಣಾ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ದಂಪತಿ ಸಂಬಂಧಿಕರೊಬ್ಬರ ಕಾರ್ಯಕ್ರಮ ಮುಗಿಸಿಕೊಂಡು ಸ್ಕೂಟಿಯಲ್ಲಿ ವಾಪಸ್ ಮನೆಗೆ ಬರುತ್ತಿದ್ದರು. ಈ ವೇಳೆ ಇವರ ಸ್ಕೂಟಿಗೆ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿ ರಭಸಕ್ಕೆ ಯಾಸಿನ್ ಖಾನ್ ಸ್ಥಳದಲ್ಲಿ ಮೃತಪಟ್ಟರೆ, ತೀವ್ರವಾಗಿ ಗಾಯಗೊಂಡಿದ್ದ ಪತಿಯನ್ನು ಬೆಂಗಳೂರಿನ ವಿಕ್ಟೋರಿಯೊ ಆಸ್ಪತ್ರೆಗೆ ಶಿಫ್ಟ್​ ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಮೃತ ನೂರಿ ಮದುವೆಯಾಗಿ 15 ವರ್ಷದ ಬಳಿಕ ಗರ್ಭಿಣಿಯಾಗಿದ್ದಳು. ತಂದೆ -ತಾಯಿ ಆಗುವ ಖುಷಿಯಲ್ಲಿ ದಂಪತಿ ಇದ್ದರು. ಆದರೆ, ಜವರಾಯನ ಅಟ್ಟಹಾಸಕ್ಕೆ ಹೊಟ್ಟೆಯಲ್ಲಿದ್ದ ಮಗು ಸೇರಿ ದಂಪತಿ ಮೃತಪಟ್ಟಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನೂ ಓದಿ | Murder Case: ಅನೈತಿಕ ಸಂಬಂಧದಿಂದ ಕೊಲೆ, ಕಾಂಗ್ರೆಸ್‌ ಶಾಸಕರ ಚಾಲಕನ ಬಂಧನ

ಬೈದು ಬುದ್ಧಿವಾದ ಹೇಳಿದ್ದಕ್ಕೆ ಅಣ್ಣನ ಮಗನನ್ನೇ ಕೊಂದ ಪಾಪಿ ತಮ್ಮ!

ಬಾಗಲಕೋಟೆ: ಅಣ್ಣ ಬೈದು ಬುದ್ಧಿವಾದ ಹೇಳಿದ್ದಕ್ಕೆ 3 ವರ್ಷದ ಮಗುವಿಗೆ ಜಾಕು ಇರಿದು ಸ್ವಂತ ಚಿಕ್ಕಪ್ಪನೇ ಕೊಂದಿರುವುದು (Murder Case) ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಬೆನಕನವಾಡಿ ಗ್ರಾಮದಲ್ಲಿ ನಡೆದಿದೆ. ಮಧುಕುಮಾರ್‌ ಕೊಲೆಯಾದ ಬಾಲಕ. ಭೀಮಪ್ಪ ಕೊಲೆ ಆರೋಪಿಯಾಗಿದ್ದಾನೆ. ಅಂಗನವಾಡಿಗೆ ಹೋಗಿದ್ದ ಬಾಲಕನನ್ನು ಚಿಕ್ಕಪ್ಪ ಭೀಮಪ್ಪ ನೇರವಾಗಿ ಮನೆಗೆ ಕರೆದುಕೊಂಡು ಹೋಗಿ, ಹರಿತ ಆಯುಧದಿಂದ ಕುತ್ತಿಗೆ ಕೊಯ್ದು ಕೊಲೆ ಮಾಡಿದ್ದಾನೆ.

ಬೆನಕನವಾಡಿ ಗ್ರಾಮದ ಮಾರುತಿ ವಾಲಿಕಾರ ಎಂಬುವರ 3 ವರ್ಷದ ಮಗ ಮಧುಕುಮಾರ್‌ನ ಪ್ರಾಣವನ್ನು ಚಿಕ್ಕಪ್ಪ ಭೀಮಪ್ಪ ತೆಗೆದಿದ್ದಾನೆ. ಮಂಗಳವಾರ ಬೆಳಗ್ಗೆ ಮಗುವಿನ ತಂದೆ-ತಾಯಿ ಹೊಲದ ಕೆಲಸಕ್ಕೆ ಹೋಗಿದ್ದರು. ಅಂಗನವಾಡಿಯಲ್ಲಿ ಸ್ನೇಹಿತರೊಂದಿಗೆ ಆಟವಾಡುತ್ತಿದ್ದಾಗ ಬಾಲಕನನ್ನು, ಪಾಪಿ ಭೀಮಪ್ಪ ಕರೆದುಕೊಂಡು ಹೋಗಿ, ಕತ್ತು ಕೊಯ್ದು ಕೊಲೆ ಮಾಡಿದ್ದಾನೆ. ‌ಮುದ್ದಾದ ಮಗು‌ ಕಳೆದುಕೊಂಡ‌ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

ಈ ಸುದ್ದಿಯನ್ನೂ ಓದಿ | Lucknow Murder: 10 ವರ್ಷಗಳ ಹಿಂದೆ ತಾಯಿಯನ್ನು ಅವಮಾನಿಸಿದ್ದ ವ್ಯಕ್ತಿಯ ಕೊಲೆ; ಆರೋಪಿಗಳು ಸಿಕ್ಕಿಬಿದ್ದಿದೇ ರೋಚಕ..!

ಬಾಲಕ ಮಧುಕುಮಾರ ತಂದೆ ಮಾರುತಿಗೆ ಆರೋಪಿ ಭೀಮಪ್ಪ ಡೊಡ್ಡಪ್ಪನ ಮಗನಾಗಿದ್ದಾನೆ. ಅಮೀನಗಢ ಪೊಲೀಸರು ಆರೋಪಿ ಭೀಮಪ್ಪನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದು, ಈ ವೇಳೆ ಸಿಟ್ಟು ಬಂತು ಕೊಲೆ ಮಾಡಿದೆ ಎಂದು ಮಾತ್ರ ಹೇಳಿದ್ದಾನೆ. ಆದರೆ ಕಳೆದ ವರ್ಷ ಭೀಮಪ್ಪ ತನ್ನ ಪತ್ನಿ ಜತೆ ಜಗಳವಾಡಿ, ಕಲ್ಲಿನಿಂದ ಹಲ್ಲೆ ಮಾಡಿದ್ದ ಎನ್ನಲಾಗಿದೆ. ಆಗ ಬಾಲಕ ಮಧುಕುಮಾರನ ತಂದೆ ಮಾರುತಿ ಭೀಮಪ್ಪನಿಗೆ ಬೈದು ಬುದ್ಧಿ ಹೇಳಿದ್ದನಂತೆ. ಅದೇ ಸೇಡಿನಿಂದ ಹೀಗ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.