Chikkaballapur News: ಜಾನಪದ ಕಲೆ ಉಳಿಸಿ ಮುಂದಿನ ಪೀಳಿಗೆಗೆ ಪರಿಚಯಿಸಿ: ‘ಕಲಾ ನಡೆಗೆ ನಿಮ್ಮ ಬಳಿಗೆ’ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ
ಇಂದಿನ ಯುವ ಸಮೂಹ ಮೊಬೈಲ್ ಹಾಗೂ ದೂರದರ್ಶನಕ್ಕೆ ಹೆಚ್ಚು ಅವಲಂಬಿತವಾಗಿರುವ ಹಿನ್ನೆಲೆಯಲ್ಲಿ, ಜನರ ಬಳಿಯೇ ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿ ಜಾನಪದ ಕಲೆಗಳ ಬಗ್ಗೆ ಆಸಕ್ತಿ ಮೂಡಿಸುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಕಲಾಜ್ಯೋತಿ ಸಂಸ್ಥೆಯು ವೀರಗಾಸೆ ಗಂಗಾಧರ್ ಹಾಗೂ ತಂಡದ ಮೂಲಕ ನಡೆಸುತ್ತಿರುವ ಕಾರ್ಯ ಶ್ಲಾಘನೀಯ ಎಂದರು.
-
ಚಿಕ್ಕಬಳ್ಳಾಪುರ: ನಶಿಸುತ್ತಿರುವ ಜಾನಪದ ಕಲೆ ಹಾಗೂ ಸಂಸ್ಕೃತಿಯನ್ನು ಉಳಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಕೆ.ವಿ. ಮತ್ತು ಪಂಚಗಿರಿ ದತ್ತಿಯ ಅಧ್ಯಕ್ಷ ಕೆ.ವಿ. ನವೀನ್ ಕಿರಣ್ ಹೇಳಿದರು.
ಕಂದವಾರಪೇಟೆಯ ಶ್ರೀಕಾಳಿಕಾಂಬ ಕಮ್ಮಟೇಶ್ವರ ಸ್ವಾಮಿ ದೇವಾಲಯದ ಆವರಣದಲ್ಲಿ ಕಲಾಜ್ಯೋತಿ ಜಾನಪದ ಕಲಾ ಸಂಸ್ಥೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ‘ಕಲಾ ನಡೆಗೆ ನಿಮ್ಮ ಬಳಿಗೆ’ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ದರು.
ಇದನ್ನೂ ಓದಿ: Chikkaballapur News: ಖಾಸಗಿ ಕೊಳವೆಬಾವಿಗಳ ಮೂಲಕ ನೀರು ಪೂರೈಕೆ: ಡಾ.ನವೀನ್ ಭಟ್
ಇಂದಿನ ಯುವ ಸಮೂಹ ಮೊಬೈಲ್ ಹಾಗೂ ದೂರದರ್ಶನಕ್ಕೆ ಹೆಚ್ಚು ಅವಲಂಬಿತವಾಗಿರುವ ಹಿನ್ನೆಲೆಯಲ್ಲಿ, ಜನರ ಬಳಿಯೇ ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿ ಜಾನಪದ ಕಲೆಗಳ ಬಗ್ಗೆ ಆಸಕ್ತಿ ಮೂಡಿಸುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಕಲಾಜ್ಯೋತಿ ಸಂಸ್ಥೆಯು ವೀರಗಾಸೆ ಗಂಗಾಧರ್ ಹಾಗೂ ತಂಡದ ಮೂಲಕ ನಡೆಸುತ್ತಿರುವ ಕಾರ್ಯ ಶ್ಲಾಘನೀಯ ಎಂದರು.
ಕಾರ್ಯಕ್ರಮದಲ್ಲಿ ಹಿರಿಯ ಕಲಾವಿದ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವೀರಭದ್ರಯ್ಯ, ಶ್ರೀಕಾಳಿಕಾಂಬ ಕಮ್ಮಟೇಶ್ವರ ಸ್ವಾಮಿ ಸೇವಾ ಸಮಿತಿ ಪ್ರಕಾಶ್ ಬಾಬು, ನಗರಸಭೆ ಸದಸ್ಯ ಡಿ.ವಿ. ಮುನಿರಾಜು ಸೇರಿದಂತೆ ಗಣ್ಯರು ಪಾಲ್ಗೊಂಡಿದ್ದರು. ಜಾನಪದ ಕಲಾ ತಂಡಗಳಿಂದ ವಿವಿಧ ಕಲಾ ಪ್ರದರ್ಶನಗಳು ನಡೆದವು.