ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gudibande News: ಜನಪದ ಸಂಸ್ಕೃತಿ ಹಾಗೂ ಕಲೆಗಳ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ : ರಂಗಭೂಮಿ ಹಿರಿಯ ಕಲಾವಿದ ಪ್ರಭಾಕರ್ ರಾವ್

ಇತ್ತೀಚಿನ ದಿನಗಳಲ್ಲಿ ಯುವಜನತೆ ಪಾಶ್ಚಾತ್ಯ ಸಂಸ್ಕೃತಿಯತ್ತ ಹೆಚ್ಚು ಆಕರ್ಷಿತರಾಗುತ್ತಿರುವ ಹಿನ್ನೆಲೆ ಯಲ್ಲಿ ನಮ್ಮ ದೇಶೀಯ ಕಲೆ, ಸಂಸ್ಕೃತಿ, ಕ್ರೀಡೆ ಹಾಗೂ ಸಂಪ್ರದಾಯಗಳನ್ನು ಉಳಿಸಿ ಬೆಳೆಸುವ ಅಗತ್ಯ ವಿದೆ ಎಂದು ಅವರು ಅಭಿಪ್ರಾಯಪಟ್ಟರು. ಕಲೆಗಳು ಕೇವಲ ಮನರಂಜನೆಗೆ ಸೀಮಿತವಾಗದೇ, ಸಮಾಜ ದಲ್ಲಿ ಸಾಮರಸ್ಯ, ಸೌಹಾರ್ದತೆ ಹಾಗೂ ಮಾನಸಿಕ ನೆಮ್ಮದಿಯನ್ನು ಬೆಳೆಸುವ ಶಕ್ತಿಯನ್ನು ಹೊಂದಿವೆ

ಜನಪದ ಸಂಸ್ಕೃತಿ ಹಾಗೂ ಕಲೆಗಳ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾ

ಸಾಂಸ್ಕೃತಿಕ ಹಾಗೂ ಜಾನಪದ ಕಲೆಗಳು ಜನರ ಬದುಕಿನ ಅವಿಭಾಜ್ಯ ಅಂಗವಾಗಿದ್ದು, ಅವುಗಳ ಸಂರಕ್ಷಣೆ ಮತ್ತು ಬೆಳವಣಿಗೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ರಂಗಭೂಮಿ ಹಿರಿಯ ಕಲಾವಿದ ಪ್ರಭಾಕರ್ ರಾವ್ ಹೇಳಿದರು. -

Profile
Ashok Nayak Jul 8, 2026 7:08 PM

ಗುಡಿಬಂಡೆ: ಸಾಂಸ್ಕೃತಿಕ ಹಾಗೂ ಜಾನಪದ ಕಲೆಗಳು ಜನರ ಬದುಕಿನ ಅವಿಭಾಜ್ಯ ಅಂಗವಾಗಿದ್ದು, ಅವುಗಳ ಸಂರಕ್ಷಣೆ ಮತ್ತು ಬೆಳವಣಿಗೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ರಂಗಭೂಮಿ ಹಿರಿಯ ಕಲಾವಿದ ಪ್ರಭಾಕರ್ ರಾವ್ ಹೇಳಿದರು.

ತಾಲೂಕಿನ ಎಲ್ಲೋಡು ಗ್ರಾಮದ ಶ್ರೀ ಲಕ್ಷ್ಮೀ ಆದಿನಾರಾಯಣ ಸ್ವಾಮಿ ಬೆಟ್ಟದ ತಪೋವನದಲ್ಲಿ ರುವ ಕಲ್ಯಾಣ ಮಂಟಪದಲ್ಲಿ ಶ್ರೀ ಸ್ವಾಮಿ ವಿವೇಕಾನಂದ ಕಲಾಬಳಗ ಹಾಗೂ ಕಲಾಕೇಂದ್ರದ ಆಶ್ರಯದಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಸಹಯೋಗದೊಂದಿಗೆ ಆಯೋಜಿಸಿದ್ದ 'ಸಾಂಸ್ಕೃತಿಕ ಸಂಭ್ರಮ' ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಯುವಜನತೆ ಪಾಶ್ಚಾತ್ಯ ಸಂಸ್ಕೃತಿಯತ್ತ ಹೆಚ್ಚು ಆಕರ್ಷಿತರಾಗುತ್ತಿರುವ ಹಿನ್ನೆಲೆಯಲ್ಲಿ ನಮ್ಮ ದೇಶೀಯ ಕಲೆ, ಸಂಸ್ಕೃತಿ, ಕ್ರೀಡೆ ಹಾಗೂ ಸಂಪ್ರದಾಯಗಳನ್ನು ಉಳಿಸಿ ಬೆಳೆಸುವ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು. ಕಲೆಗಳು ಕೇವಲ ಮನರಂಜನೆಗೆ ಸೀಮಿತವಾಗದೇ, ಸಮಾಜದಲ್ಲಿ ಸಾಮರಸ್ಯ, ಸೌಹಾರ್ದತೆ ಹಾಗೂ ಮಾನಸಿಕ ನೆಮ್ಮದಿಯನ್ನು ಬೆಳೆಸುವ ಶಕ್ತಿಯನ್ನು ಹೊಂದಿವೆ ಎಂದರು.

ಇದನ್ನೂ ಓದಿ: Gudibande News: ಗುಡಿಬಂಡೆಯಲ್ಲಿ ಅರ್ಥಪೂರ್ಣವಾಗಿ ಬಾಬು ಜಗಜೀವನ್ ರಾಂ ರವರ ಪುಣ್ಯಸ್ಮರಣೆ

ಹಿರಿಯ ಕಲಾವಿದರ ಅನುಭವವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಕೆಲಸವನ್ನು ಸರ್ಕಾರ ಹಾಗೂ ವಿವಿಧ ಸಂಘ-ಸAಸ್ಥೆಗಳು ಕೈಗೊಳ್ಳಬೇಕು. ಗ್ರಾಮೀಣ ಪ್ರದೇಶಗಳಲ್ಲಿರುವ ಸಾಂಪ್ರದಾಯಿಕ ಕಲಾಪ್ರಕಾರಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕೆಂದು ಒತ್ತಾಯಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಚಿಕ್ಕಬಳ್ಳಾಪುರ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಿ.ಎಂ. ರವಿಕುಮಾರ್, ಕಲೆಗಳನ್ನು ಉಳಿಸಿ ಬೆಳೆಸಿದಾಗ ಮಾತ್ರ ನಮ್ಮ ಸಂಸ್ಕೃತಿ ಜೀವಂತವಾಗಿರುತ್ತದೆ. ಗ್ರಾಮೀಣ ಕಲಾಪ್ರಕಾರಗಳ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ ವಾಗಿದ್ದು, ಇಂತಹ ಕಾರ್ಯಕ್ರಮಗಳು ಕಲಾವಿದರಿಗೆ ಉತ್ತೇಜನ ನೀಡುತ್ತವೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಭರತನಾಟ್ಯ, ಮಹಿಳಾ ಡೊಳ್ಳು ಕುಣಿತ, ಮಹಿಳಾ ವೀರಗಾಸೆ, ತತ್ವಪದ ಗಾಯನ, ಸುಗಮ ಸಂಗೀತ, ಏಕಪಾತ್ರಾಭಿನಯ, ರಂಗಪ್ರದರ್ಶನ, ನಾದಸ್ವರ ಕಚೇರಿ ಹಾಗೂ ಶಾಸ್ತ್ರೀಯ ಸಂಗೀತ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರೇಕ್ಷಕರ ಮನಗೆದ್ದವು.

ಕಾರ್ಯಕ್ರಮದಲ್ಲಿ ನಿವೃತ್ತ ನೌಕರರು, ವಿವಿಧ ಕ್ಷೇತ್ರಗಳ ಕಲಾವಿದರು, ಸಾರ್ವಜನಿಕರು ಹಾಗೂ ಕಲಾಭಿಮಾನಿಗಳು ಭಾಗವಹಿಸಿ ಸಾಂಸ್ಕೃತಿಕ ಸಂಭ್ರಮಕ್ಕೆ ಮೆರುಗು ತಂದರು.