ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

MLA Pradeep Eshwar: ಗ್ರಾಮಗಳ ಅಭಿವೃದ್ಧಿಗೆ ಹಂತ ಹಂತವಾಗಿ ಆದ್ಯತೆ: ಶಾಸಕ ಪ್ರದೀಪ್ ಈಶ್ವರ್

ಶಾಸಕರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಕ್ಷೇತ್ರದ 300ಕ್ಕೂ ಹೆಚ್ಚು ಗ್ರಾಮಗಳಿಗೆ ‘ನಮ್ಮೂರಿಗೆ ನಮ್ಮ ಶಾಸಕ’ ಕಾರ್ಯಕ್ರಮದ ಮೂಲಕ ಭೇಟಿ ನೀಡಿ, ಗ್ರಾಮಸ್ಥರಿಂದ ನೇರವಾಗಿ ಅಹವಾಲುಗಳನ್ನು ಸ್ವೀಕರಿಸಲಾಗಿದೆ. ಗ್ರಾಮಸ್ಥರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಆಲಿಸಿ, ಹಲವು ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಪ್ರಯತ್ನ ಮಾಡಲಾಗಿದೆ. ತಾಲೂಕು ಆಡಳಿತವನ್ನೇ ಗ್ರಾಮಗಳ ಅಶ್ವತ್ಥ ಕಟ್ಟೆಯ ಬಳಿಗೆ ಕೊಂಡೊಯ್ದು ಜನರ ಸಮಸ್ಯೆಗಳಿಗೆ ಸ್ಪಂದಿಸಲಾಗಿದೆ

ಗ್ರಾಮಗಳ ಅಭಿವೃದ್ಧಿಗೆ ಹಂತ ಹಂತವಾಗಿ ಆದ್ಯತೆ

-

Profile
Ashok Nayak Aug 21, 2026 4:28 PM

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ(Chikkaballapur Assembly Constituency)ದ ಗ್ರಾಮೀಣ ಪ್ರದೇಶಗಳ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದ್ದು, ಗ್ರಾಮಸ್ಥರ ಬೇಡಿಕೆಗಳಿಗೆ ಸ್ಪಂದಿಸಿ ಹಂತ ಹಂತವಾಗಿ ಅಗತ್ಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳ ಲಾಗುತ್ತಿದೆ ಎಂದು ಶಾಸಕ ಪ್ರದೀಪ್ ಈಶ್ವರ್(MLA Pradeep Eshwar) ಹೇಳಿದರು.

ತಾಲ್ಲೂಕಿನ ದಿಬ್ಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೊಳ್ಳು ಚಿನ್ನಪ್ಪನಹಳ್ಳಿ ಗ್ರಾಮದಲ್ಲಿ ಸುಮಾರು ರೂಪಾಯಿ ಒಂದು ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಿರುವ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು.

ಇದನ್ನೂ ಓದಿ: Chikkaballapur News: ಶಿಕ್ಷಕರ ಸಮಸ್ಯೆಗಳಿಗೆ ಸಂಘಟಿತವಾಗಿ ಧ್ವನಿಯಾಗುತ್ತೇವೆ: ಕೆ.ಜಿ.ಶ್ರೀನಿವಾಸ್

ಶಾಸಕರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಕ್ಷೇತ್ರದ 300ಕ್ಕೂ ಹೆಚ್ಚು ಗ್ರಾಮಗಳಿಗೆ ‘ನಮ್ಮೂರಿಗೆ ನಮ್ಮ ಶಾಸಕ’ ಕಾರ್ಯಕ್ರಮದ ಮೂಲಕ ಭೇಟಿ ನೀಡಿ, ಗ್ರಾಮಸ್ಥರಿಂದ ನೇರವಾಗಿ ಅಹವಾಲು ಗಳನ್ನು ಸ್ವೀಕರಿಸಲಾಗಿದೆ. ಗ್ರಾಮಸ್ಥರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಆಲಿಸಿ, ಹಲವು ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಪ್ರಯತ್ನ ಮಾಡಲಾಗಿದೆ. ತಾಲೂಕು ಆಡಳಿತವನ್ನೇ ಗ್ರಾಮಗಳ ಅಶ್ವತ್ಥ ಕಟ್ಟೆಯ ಬಳಿಗೆ ಕೊಂಡೊಯ್ದು ಜನರ ಸಮಸ್ಯೆಗಳಿಗೆ ಸ್ಪಂದಿಸಲಾಗಿದೆ ಎಂದರು.

ಗ್ರಾಮಸ್ಥರ ಬೇಡಿಕೆ ಹಾಗೂ ಸ್ಥಳೀಯ ಅಗತ್ಯಗಳನ್ನು ಆಧರಿಸಿ ಶಾಸಕರ ನಿಧಿಯಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಒದಗಿಸಲಾಗುತ್ತಿದೆ. ರಸ್ತೆ, ಕುಡಿಯುವ ನೀರು, ಚರಂಡಿ ಸೇರಿದಂತೆ ಮೂಲಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ. ಮನೆ ಮನೆಗೆ ಭೇಟಿ ನೀಡಿ ಸಂಕಷ್ಟದಲ್ಲಿರುವ ಕುಟುಂಬಗಳ ಸಮಸ್ಯೆ ಆಲಿಸಿ ಧೈರ್ಯ ತುಂಬುವ ಕೆಲಸವನ್ನೂ ಮಾಡಲಾಗಿದೆ ಎಂದು ಹೇಳಿದರು.

959078 PE

ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಇನ್ನಷ್ಟು ಅನುದಾನ ತರುವ ನಿಟ್ಟಿನಲ್ಲಿ ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸಲಾಗುತ್ತಿದೆ. ಯಾವುದೇ ಗ್ರಾಮವನ್ನು ಕಡೆಗಣಿಸದೆ, ಅಗತ್ಯಕ್ಕೆ ಅನುಗುಣವಾಗಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸಲು ಶಕ್ತಿ ಮೀರಿ ಪ್ರಯತ್ನಿಸುವುದಾಗಿ ಶಾಸಕ ಪ್ರದೀಪ್ ಈಶ್ವರ್ ಭರವಸೆ ನೀಡಿದರು.

ವೀರಾಂಜನೇಯ ಸ್ವಾಮಿ ದೇವಾಲಯದ ಉದ್ಘಾಟನೆಯಲ್ಲಿ ಭಾಗಿ

ಇದಕ್ಕೂ ಮುನ್ನ ಗಂಗರೇಕಾಲುವೆ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ವೀರಾಂಜನೇಯ ಸ್ವಾಮಿ ದೇವಾಲಯದ ಉದ್ಘಾಟನಾ ಹಾಗೂ ಪೂಜಾ ಕಾರ್ಯಕ್ರಮದಲ್ಲಿ ಶಾಸಕ ಪ್ರದೀಪ್ ಈಶ್ವರ್ ಭಾಗವಹಿಸಿ ವಿಶೇಷ ಪೂಜೆ ಸಲ್ಲಿಸಿ ದೇವರ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಗಂಗರೇಕಾಲುವೆ ನಾರಾಯಣಸ್ವಾಮಿ, ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಪುರದಗಡ್ಡೆ ಮುನೇಗೌಡ ಸೇರಿದಂತೆ ಸ್ಥಳೀಯ ಮುಖಂಡರು, ಗ್ರಾಮಸ್ಥರು ಹಾಗೂ ಭಕ್ತರು ಉಪಸ್ಥಿತರಿದ್ದರು.

ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು: ಗ್ರಾಮೀಣ ಪ್ರದೇಶಗಳ ರಸ್ತೆ ಸೇರಿದಂತೆ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡುವ ಮೂಲಕ ಜನರ ದೈನಂದಿನ ಸಂಚಾರಕ್ಕೆ ಅನುಕೂಲ ಕಲ್ಪಿಸುವುದು ಹಾಗೂ ಗ್ರಾಮಗಳ ಅಭಿವೃದ್ಧಿಗೆ ವೇಗ ನೀಡುವುದು ಕಾಮಗಾರಿಗಳ ಪ್ರಮುಖ ಉದ್ದೇಶವಾಗಿದೆ ಎಂದು ಸ್ಥಳೀಯ ಮುಖಂಡರು ತಿಳಿಸಿದರು.