ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

K H Puttaswamy Gowda: ಜನರ ಸಮಸ್ಯೆಗಳಿಗೆ ಕಾಲಮಿತಿಯಲ್ಲಿ ಪರಿಹಾರ ನೀಡಿ: ಶಾಸಕ ಪುಟ್ಟಸ್ವಾಮಿಗೌಡ

ನೂಡಲ್ ಅಧಿಕಾರಿ ಶಿವಲಿಂಗಯ್ಯ ಮಾತನಾಡಿ, ಸರ್ಕಾರದ ಯೋಜನೆಗಳ ಅನುಷ್ಠಾನದ ಜತೆಗೆ ಸಾರ್ವಜನಿಕರ ಸಮಸ್ಯೆಗಳನ್ನು ಸ್ಥಳದಲ್ಲೇ ವಿಲೇವಾರಿ ಮಾಡುವುದು ಪ್ರಜಾಸೇವಾ ಆಂದೋಲನದ ಪ್ರಮುಖ ಉದ್ದೇಶವಾಗಿದೆ. ಅಧಿಕಾರಿಗಳು ಬದ್ಧತೆಯಿಂದ ಕಾರ್ಯನಿರ್ವಹಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕು ಎಂದರು

ಗ್ರಾಮಗಳಿಗೆ ತೆರಳಿ ಕುಂದುಕೊರತೆ ಆಲಿಸಲು ಅಧಿಕಾರಿಗಳಿಗೆ ಸೂಚನೆ

-

Profile
Ashok Nayak Sep 12, 2026 8:45 PM

ಗೌರಿಬಿದನೂರು: ಸರ್ಕಾರ ಜನರ ಬಳಿಗೆ ತೆರಳಿ ಅವರ ಕುಂದುಕೊರತೆಗಳನ್ನು ಆಲಿಸಿ ಸ್ಥಳದಲ್ಲೇ ಪರಿಹರಿಸುವ ಉದ್ದೇಶದಿಂದ ಪ್ರಜಾಸೇವಾ ಆಂದೋಲನ ಹಮ್ಮಿಕೊಂಡಿದ್ದು, ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳನ್ನು ನಿಗದಿತ ಕಾಲಮಿತಿಯಲ್ಲಿ ಬಗೆಹರಿಸಲು ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ(MLA K H Puttaswamy Gowda) ಹೇಳಿದರು.

ತಾಲೂಕಿನ ಡಿ.ಪಾಳ್ಯ ಗ್ರಾಮದ ಕೆಪಿಎಸ್ ಶಾಲೆ ಆವರಣದಲ್ಲಿ ಶನಿವಾರ ನಡೆದ ಪ್ರಜಾಸೇವಾ ಆಂದೋಲನದಲ್ಲಿ ಮಾತನಾಡಿದ ಅವರು, ಮೇಲಧಿಕಾರಿಗಳಿಂದ ಹಿಡಿದು ವಿವಿಧ ಹಂತದ ಸಿಬ್ಬಂದಿವರೆಗೆ ಎಲ್ಲರೂ ಗ್ರಾಮಗಳಿಗೆ ತೆರಳಿ ಜನರ ಸಮಸ್ಯೆಗಳನ್ನು ಆಲಿಸಬೇಕು. ಅಧಿಕಾರಿಗಳು ತಮ್ಮ ಸಿಬ್ಬಂದಿಗೆ ನಿಷ್ಠೆಯಿಂದ ಕೆಲಸ ಮಾಡುವಂತೆ ಸೂಚಿಸಿ, ಸಾರ್ವಜನಿಕರಿಗೆ ತ್ವರಿತವಾಗಿ ಸೇವೆ ದೊರೆಯುವಂತೆ ಮುತುವರ್ಜಿ ವಹಿಸಬೇಕು ಎಂದರು.

ಇದನ್ನೂ ಓದಿ: K H Puttaswamy Gowda: ತಾಲೂಕಿನ ಸರ್ವತೋಮುಖ ಅಭಿವೃದ್ಧಿಗೆ ಆದ್ಯತೆ; ಶೀಘ್ರದಲ್ಲೇ ಮತ್ತೆ 100 ಕೋಟಿ ರೂಪಾಯಿ ಅನುದಾನ

ನೂಡಲ್ ಅಧಿಕಾರಿ ಶಿವಲಿಂಗಯ್ಯ ಮಾತನಾಡಿ, ಸರ್ಕಾರದ ಯೋಜನೆಗಳ ಅನುಷ್ಠಾನದ ಜತೆಗೆ ಸಾರ್ವಜನಿಕರ ಸಮಸ್ಯೆಗಳನ್ನು ಸ್ಥಳದಲ್ಲೇ ವಿಲೇವಾರಿ ಮಾಡುವುದು ಪ್ರಜಾಸೇವಾ ಆಂದೋಲನದ ಪ್ರಮುಖ ಉದ್ದೇಶವಾಗಿದೆ. ಅಧಿಕಾರಿಗಳು ಬದ್ಧತೆಯಿಂದ ಕಾರ್ಯನಿರ್ವಹಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಅರವಿಂದ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಜಿ.ಕೆ. ಹೊನ್ನಯ್ಯ, ನಗರಸಭೆ ಪೌರಾಯುಕ್ತ ರಮೇಶ್, ವೃತ್ತ ನಿರೀಕ್ಷಕ ಅಂಜನ್ ಕುಮಾರ್, ಸಮನ್ವಯ ಅಧಿಕಾರಿ ಗಂಗರೆಡ್ಡಿ, ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷ ರಂಗರಾಜು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.