Praja Seve: ಪ್ರಜಾ ಸೇವೆಯಲ್ಲಿ ಜನರ ಆಕ್ರೋಶ: ಅರ್ಜಿಗಳಿಗಷ್ಟೇ ಸೀಮಿತವೇ...ಪ್ರಜಾ ಸೇವೆಯಲ್ಲಿ ಸಮಸ್ಯೆಗಳಿಗೆ ಪರಿಹಾರ ಯಾವಾಗ?
ಅರ್ಜಿಗಳನ್ನು ತೆಗೆದುಕೊಳ್ಳುತ್ತಾರೆ. ಆದರೆ ಸಮಸ್ಯೆಗಳಿಗೆ ಪರಿಹಾರ ಸಿಗುತ್ತಿಲ್ಲ. ಅರ್ಜಿಗಳು ಬುಟ್ಟಿಗೆ ಹೋಗುತ್ತಿವೆ” ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸ ದಿದ್ದರೆ ಸರ್ಕಾರಿ ಕಚೇರಿಗಳಿಗೆ ಕುರಿ-ಮೇಕೆಗಳನ್ನು ತಂದು ಹಾಕಿ ಬೀಗ ಹಾಕುವ ಹೋರಾಟ ನಡೆಸಬೇಕಾಗುತ್ತದೆ
-
ಶಿಡ್ಲಘಟ್ಟ: ತಾಲ್ಲೂಕಿನ ಭಾಶೆಟ್ಟಹಳ್ಳಿಯಲ್ಲಿ ಕಳೆದ ಸೆ.12ರಂದು ನಡೆದ ಪ್ರಜಾ ಸೇವೆ ಆಂದೋಲನ(Public Service Movement)ದಲ್ಲಿ ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ, ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿದರು.
ಕುಡಿಯುವ ನೀರು, ರಸ್ತೆ, ಚರಂಡಿ ಸೇರಿದಂತೆ ಹಲವು ಮೂಲ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದ ಗ್ರಾಮಸ್ಥರು, ಸಮಸ್ಯೆಗಳಿಗೆ ಪರಿಹಾರ ಕೋರಿ ಅರ್ಜಿಗಳನ್ನು ಸಲ್ಲಿಸಿದರು. ಆದರೆ ಈ ಹಿಂದೆ ನೀಡಿರುವ ಅರ್ಜಿಗಳಿಗೂ ಸೂಕ್ತ ಪರಿಹಾರ ದೊರೆತಿಲ್ಲ. ಪ್ರಜಾ ಸೇವಾ ಕಾರ್ಯಕ್ರಮದಲ್ಲಿ ಅರ್ಜಿಗಳನ್ನು ಸ್ವೀಕರಿಸಲಾಗುತ್ತಿದೆ, ಆದರೆ ಸಮಸ್ಯೆಗಳ ಪರಿಹಾರ ಮಾತ್ರ ಕಾಣುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದರು.
ಇದನ್ನೂ ಓದಿ: Prajaseva: ಸ್ಥಳದಲ್ಲೇ ಅರ್ಜಿ ವಿಲೇವಾರಿ; ಫಲಾನುಭವಿಗಳಿಗೆ ಮಂಜೂರಾತಿ ಪತ್ರ, ಕಾರ್ಯಾದೇಶ ವಿತರಣೆ
ಅರ್ಜಿಗಳನ್ನು ತೆಗೆದುಕೊಳ್ಳುತ್ತಾರೆ. ಆದರೆ ಸಮಸ್ಯೆಗಳಿಗೆ ಪರಿಹಾರ ಸಿಗುತ್ತಿಲ್ಲ. ಅರ್ಜಿಗಳು ಬುಟ್ಟಿಗೆ ಹೋಗುತ್ತಿವೆ” ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿ ಸದಿದ್ದರೆ ಸರ್ಕಾರಿ ಕಚೇರಿಗಳಿಗೆ ಕುರಿ-ಮೇಕೆಗಳನ್ನು ತಂದು ಹಾಕಿ ಬೀಗ ಹಾಕುವ ಹೋರಾಟ ನಡೆಸ ಬೇಕಾಗುತ್ತದೆ ಎಂದು ಎಚ್ಚರಿಸಿದರು.
ಈ ಕುರಿತು ತಹಶೀಲ್ದಾರ್ ಗಗನ ಸಿಂಧು ಅವರನ್ನು ಮಾಧ್ಯಮದವರು ಪ್ರಶ್ನಿಸಿದಾಗ, “ಬುಟ್ಟಿ ಹಾಕೋಕೆ ನಮ್ಮಲ್ಲಿ ಬುಟ್ಟಿ ಇಲ್ಲ” ಎಂದು ಪ್ರತಿಕ್ರಿಯಿಸಿದರು. ಸಾರ್ವಜನಿಕರಿಂದ ಸ್ವೀಕರಿಸುವ ಅರ್ಜಿಗಳ ಮೇಲೆ ಸಾಧ್ಯವಾದಷ್ಟು ಕ್ರಮ ಕೈಗೊಂಡು ವಿಲೇವಾರಿ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಆದರೆ ಗ್ರಾಮಸ್ಥರ ಆರೋಪದಂತೆ ಸಮಸ್ಯೆಗಳು ಇನ್ನೂ ಬಗೆಹರಿಯದಿದ್ದರೆ, ಪ್ರಜಾ ಸೇವೆ ಆಂದೋಲನದ ಉದ್ದೇಶವೇನು ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿದೆ. ಸಲ್ಲಿಕೆಯಾದ ಅರ್ಜಿಗಳಿಗೆ ಶೀಘ್ರ ಪರಿಹಾರ ದೊರೆಯಬೇಕು ಎಂಬುದು ಗ್ರಾಮಸ್ಥರ ಒತ್ತಾಯವಾಗಿದೆ.