ಹಳೆಯ ಶೇ.15ರ ಮೀಸಲಾತಿಯಂತೆಯೇ 56 ಸಾವಿರ ಉದ್ಯೋಗಗಳ ನೇಮಕಾತಿ ಮಾಡಿ : ಶ್ರೀರಾಮ್ ನಾಯಕ್ ಒತ್ತಾಯ
ನಿವೃತ್ತ ನ್ಯಾ. ನಾಗಮೋಹನ್ ದಾಸ್ ವರದಿ(Retired Justice Nagamohan Das's report)ಯಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸಲು ಜಾರಿ ಮಾಡಿರುವ ಕಾಯ್ದೆಯಲ್ಲಿ ಪರಿಶಿಷ್ಟ ಜಾತಿಗಳನ್ನು 3 ಗುಂಪುಗಳಾಗಿ ವಿಂಗಡಿಸಲಾಗಿದೆ. ಬಲಗೈ ಸಮುದಾಯವನ್ನು ಬಿ ಗುಂಪಿಗೆ ಸೇರಿಸಿ ರೋಸ್ಟರ್ ಬಿಂದುವಿನಲ್ಲಿ 9ನೇ ಸ್ಥಾನಕ್ಕೆ ಇಳಿಸಲಾಗಿದೆ.
ಒಳಮೀಸಲಾತಿಗೂ ಹಿಂದೆ ಇದ್ದ ಶೇ.15ರ ಮೀಸಲಾತಿಯಂತೆಯೇ 56 ಸಾವಿರ ಉದ್ಯೋಗಳ ನೇಮಕಾತಿ ಮಾಡಿ ಎಂದು ಶ್ರೀರಾಮ್ ನಾಯಕ್ ಒತ್ತಾಯಿಸಿದರು. -
ಬಾಗೇಪಲ್ಲಿ: ಒಳಮೀಸಲಾತಿಗೆ ಸಂಬಂಧಿಸಿದಂತೆ ಇರುವ ಗೊಂದಲಗಳು, ಸಮಸ್ಯೆಗಳು ಹಾಗೂ ನ್ಯಾಯಾಲಯದ ಅಡೆತಡೆಗಳು ನಿವಾರಣೆಯಾಗುವ ತನಕ ಒಳಮೀಸಲಾತಿ ಕೈ ಬಿಟ್ಟು ಹಳೆ ಮೀಸಲಾತಿ ಜಾರಿಗೆ ತಂದು ರಾಜ್ಯ ಕಾಂಗ್ರೆಸ್ ಸರ್ಕಾರ ಬಜೆಟ್ ನಲ್ಲಿ 56 ಸಾವಿರ ಉದ್ಯೋಗಗಳನ್ನು ನೇಮಕಾತಿ ಮತ್ತು ಶಿಕ್ಷಣಕ್ಕೆ ತೊಂದರೆ ಆಗದಂತೆ ಸೂಕ್ತ ಆದೇಶ ಹೊರಡಿಸಬೇಕು ಎಂದು ಲಂಬಾಣಿ ಸಮುದಾಯದ ಜಿಲ್ಲಾಧ್ಯಕ್ಷ ಶ್ರೀರಾಮ ನಾಯಕ್ ಒತ್ತಾಯಿಸಿದರು.
ಅವರು ಬಾಗೇಪಲ್ಲಿ ಪಟ್ಟಣದ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ನಿವೃತ್ತ ನ್ಯಾ. ನಾಗಮೋಹನ್ ದಾಸ್ ವರದಿ(Retired Justice Nagamohan Das's report) ಯಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸಲು ಜಾರಿ ಮಾಡಿರುವ ಕಾಯ್ದೆಯಲ್ಲಿ ಪರಿಶಿಷ್ಟ ಜಾತಿಗಳನ್ನು 3 ಗುಂಪುಗಳಾಗಿ ವಿಂಗಡಿಸಲಾಗಿದೆ. ಬಲಗೈ ಸಮುದಾಯವನ್ನು ಬಿ ಗುಂಪಿಗೆ ಸೇರಿಸಿ ರೋಸ್ಟರ್ ಬಿಂದುವಿನಲ್ಲಿ 9ನೇ ಸ್ಥಾನಕ್ಕೆ ಇಳಿಸಲಾಗಿದೆ.
ಇದರಿಂದ ಬಲಗೈ ಸಂಬಂಧಿತ ಜಾತಿಗಳಿಗೆ ಅನ್ಯಾಯವಾಗಿದೆ. ಸರ್ಕಾರಿ ನೇಮಕಾತಿಯಲ್ಲಿ ಉದ್ಯೋಗಗಳನ್ನು ನೇಮಕ ಮಾಡಿದಾಗ ಬಲಗೈ ಸಂಬಂಧಿತ ಜಾತಿಗಳಿಗೆ ಯಾವುದೇ ಉದ್ಯೋಗ ದೊರಕುವುದಿಲ್ಲ. ಉನ್ನತ ಶಿಕ್ಷಣ ಪ್ರವೇಶಾತಿ, ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರ ಬಡ್ತಿಯಲ್ಲಿಯೂ ಅವಕಾಶ ಸಿಗುವುದಿಲ್ಲ. ಹಾಗಾಗೀ ಸರ್ಕಾರ ಇಂತಹ ಅವೈಜ್ಞಾ ನಿಕ ಪರಿಶಿಷ್ಟ ಜಾತಿಗಳ ಕಾಯ್ದೆಯನ್ನು ತಿರಸ್ಕರಿಸಬೇಕು' ಎಂದು ಆಗ್ರಹಿಸಿದರು.
ಈಗ ಜಾರಿ ಮಾಡಿರುವ ಒಳ ಮೀಸಲಾತಿಯಲ್ಲಿ ಬಲಗೈ ಸಮುದಾಯದ 101 ಜಾತಿಗಳಿಗೆ ಭಾರಿ ಅನ್ಯಾಯವಾಗಿದ್ದು, ನೇಮಕಾತಿ ಬಿಂದು ಪದ್ದತಿಯಲ್ಲಿ ಭಾರಿ ನ್ಯಾಯವಾಗಿದೆ. ಎ, ಬಿ, ಸಿ ಪ್ರವರ್ಗಗಳಿಗೆ ನಿಗಧಿ ಪಡಿಸುವ ಉದ್ಯೋಗದಲ್ಲಿ ಅನ್ಯಾಯವಾಗುತ್ತದೆ. ವಿವಿಧ ಇಲಾಖೆ ಯ ಹಾಗೂ ವಿಭಾಗದಲ್ಲಿ ಕಡಿಮೆ ಸಂಖ್ಯೆಯಲ್ಲಿ ಹುದ್ದೆಗಳು ನೇಮಕಾತಿ ನಡೆದಾಗ ಪರಿಶಿಷ್ಟ ಜಾತಿಯಲ್ಲಿಯೇ ಪ್ರವರ್ಗ ಎ ಗೆ ಹೆಚ್ಚು ಹುದ್ದೆಗಳು ಹೋಗುವ ಜೊತೆಗೆ ಇತರೇ ಬಿ ಮತ್ತು ಸಿ ವರ್ಗಗಳಿಗೆ ಅನ್ಯಾಯವಾಗುತ್ತಿದೆ. ಇದರಿಂದ ಸಾಮಾಜಿಕ ನ್ಯಾಯದ ಬದಲಾಗಿ ಪರಿಶಿಷ್ಟ ಜಾತಿ ಬಲಗೈ ಸಮುದಾಯಕ್ಕೆ ಅನ್ಯಾಯವಾಗುತ್ತದೆ. ಅಂಬೇಡ್ಕರ್ ಅವರ ಆಶಯದಂತೆ ಸಮಾನ ಅವಕಾಶಗಳು ದೊರೆಯುವುದಿಲ್ಲ ಎಂದು ಕಳವಳ ವ್ಯಕ್ತಪಡಿಸಿ ದರು.
ಲಂಬಾಣಿ (ಗೋರ್ ಬಂಜಾರ್) ಅಭಿವೃದ್ಧಿ ಸಂಘ ಪ್ರಧಾನ ಕಾರ್ಯದರ್ಶಿ ಎಸ್.ಜಿ.ಶಂಕರ್ ನಾಯಕ್ ಮಾತನಾಡಿ ಶಿಕ್ಷಣ, ಹಾಸ್ಟೆಲ್ ಹಾಗೂ ಉದ್ಯೋಗ ನೇಮಕಾತಿ ರೋಸ್ಟರ್ ಹಂಚಿಕೆ ಮಾಡಿ ಈ ಹಿಂದೆ ಸರ್ಕಾರ ಹೊರಡಿಸಿರುವ ಎಲ್ಲಾ ಆದೇಶಗಳನ್ನು ಹಿಂಪಡೆಯ ಬೇಕು,
ರಾಜ್ಯ ಸರ್ಕಾರ ಹೊಸದಾಗಿ ನೀಡುತ್ತಿರುವ ಜಾತಿ ಪ್ರಮಾಣಪತ್ರವನ್ನು ತುರ್ತಾಗಿ ನಿಲ್ಲಿಸಿ ಹಳೆ ಜಾತಿ ಪ್ರಮಾಣಪತ್ರವನ್ನು ಮುಂದುವರಿಸಬೇಕು. ಒಳ ಮೀಸಲಾತಿಗೆ ಅನ್ವಯಿಸುವ ರೋಸ್ಟರ್ ಬಿಂದುವನ್ನು ಪರಿಷ್ಕರಿಸಿ ಆಗಿರುವ ನ್ಯಾಯವನ್ನು ಸರಿಪಡಿಸಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಲಂಬಾಣಿ (ಗೋರ್ ಬಂಜಾರ್) ಅಭಿವೃದ್ಧಿ ಸಂಘದ ಅಧ್ಯಕ್ಷ ನಾರಾ ಯಣ್ ನಾಯಕ್ (ಬಾಂಬೆ), ಉಪಾಧ್ಯಕ್ಷ ಶಿವಶಂಕರ್, ಖಜಾಂಚಿ ಸುರೇಶ್ ನಾಯಕ್, ಮಂಜುನಾಥ್ ನಾಯಕ್,ಬಾಲು ನಾಯಕ್,ನಾಗೇ ನಾಯಕ್,ಶ್ರೀನಿವಾಸ್ ನಾಯಕ್, ರಮೇಶ್ ನಾಯಕ್, ಆರ್.ನಾರಾಯಣ್ ನಾಯಕ್, ರಾಮಾಂಜಿ ನಾಯಕ್, ನರಸಿಂಹ ನಾಯಕ್, ಬಾಬು ನಾಯಕ್ ಹಾಗೂ ಲಂಬಾಣಿ ಸಮುದಾಯದವರು ಹಾಜರಿದ್ದರು.