ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Chikkaballapur News: ಭಾರತ್ ಜೋಡೋ ಯುವ ಸಂಘಗಳಿಗೆ ನೋಂದಣಿ ಆರಂಭ

16ರಿಂದ 35 ವರ್ಷದೊಳಗಿನ 100 ಯುವ ಸದಸ್ಯರನ್ನು ಒಳಗೊಂಡ ಒಂದು ಸಂಘವನ್ನು ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ರಚಿಸಲಾಗುವುದು. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೆ ಪ್ರಾತಿ ನಿಧ್ಯ ದೊರೆಯುವಂತೆ ಸಂಘಗಳನ್ನು ರೂಪಿಸಲು ಸೂಚಿಸಲಾಗಿದೆ. ಪ್ರತಿ ಸಂಘಕ್ಕೆ ರಾಜ್ಯ ಸರ್ಕಾರ ದಿಂದ ವಾರ್ಷಿಕ 10 ಲಕ್ಷ ರೂ. ಅನುದಾನ ನೀಡಲಾಗುತ್ತದೆ.

ಭಾರತ್ ಜೋಡೋ ಯುವ ಸಂಘಗಳಿಗೆ ನೋಂದಣಿ ಆರಂಭ

-

Profile
Ashok Nayak Aug 6, 2026 4:37 PM

ಚಿಕ್ಕಬಳ್ಳಾಪುರ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಭಾರತ್ ಜೋಡೋ ಯುವ ಸಂಘ ಯೋಜನೆಯಡಿ ಜಿಲ್ಲೆಯ 154 ಗ್ರಾಮ ಪಂಚಾಯಿತಿಗಳಲ್ಲಿ ಯುವ ಸಂಘಗಳನ್ನು ರಚಿಸಲು ನೋಂದಣಿ ಪ್ರಕ್ರಿಯೆ ಆರಂಭವಾಗಿದೆ.

16 ರಿಂದ 35 ವರ್ಷದೊಳಗಿನ 100 ಯುವ ಸದಸ್ಯರನ್ನು ಒಳಗೊಂಡ ಒಂದು ಸಂಘವನ್ನು ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ರಚಿಸಲಾಗುವುದು. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮ ಗಳಿಗೆ ಪ್ರಾತಿನಿಧ್ಯ ದೊರೆಯುವಂತೆ ಸಂಘಗಳನ್ನು ರೂಪಿಸಲು ಸೂಚಿಸಲಾಗಿದೆ. ಪ್ರತಿ ಸಂಘಕ್ಕೆ ರಾಜ್ಯ ಸರ್ಕಾರದಿಂದ ವಾರ್ಷಿಕ 10 ಲಕ್ಷ ರೂ. ಅನುದಾನ ನೀಡಲಾಗುತ್ತದೆ.

ಇದನ್ನೂ ಓದಿ: Geetha Bharathi Bhat: ಚುಚ್ಚು ಮಾತುಗಳ ಬಾಣಕ್ಕೆ ಗೀತಾ ಭಾರತಿ ಭಟ್ ಡೋಂಟ್ ಕೇರ್; ನಟಿಗೆ ಪತಿಯೇ ಸಾಥ್‌

ಈ ಅನುದಾನವನ್ನು ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು, ಗಣಕಯಂತ್ರ, ಅಂತರ್ಜಾಲ, ಕಚೇರಿ ಮೂಲಸೌಕರ್ಯ ಹಾಗೂ ಅನುಮೋದಿತ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಬಳಸಿಕೊಳ್ಳಬಹು ದಾಗಿದೆ.

ಯುವಕರು ಬಿಜೆವೈಎಸ್ (BJYS) ಪೋರ್ಟಲ್ ಅಥವಾ ಮೊಬೈಲ್ ಅನ್ವಯಿಕೆ, ಗ್ರಾಮ ಪಂಚಾಯಿತಿ, ಗ್ರಾಮ ಒನ್, ಕರ್ನಾಟಕ ಒನ್ ಹಾಗೂ ನಾಗರಿಕ ಸೇವಾ ಕೇಂದ್ರಗಳ ಮೂಲಕ ಆ.20ರೊಳಗೆ ನೋಂದಣಿ ಮಾಡಿಸಬಹುದು.

ನೋಂದಣಿಗೆ ಆಧಾರ್ ಕಡ್ಡಾಯವಾಗಿದ್ದು, ಅರ್ಜಿದಾರರು ಅದೇ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವಾಸಿಗಳಾಗಿರಬೇಕು. ಒಬ್ಬ ಸದಸ್ಯರು ಒಂದೇ ಸಂಘಕ್ಕೆ ಮಾತ್ರ ಸೇರ್ಪಡೆಯಾಗಲು ಅವಕಾಶವಿದೆ ಎಂದು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ವೈ. ನವೀನ್ ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.