ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

2025ರ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆ ಆರಂಭ : ಯಲುವಹಳ್ಳಿ ಎನ್ ರಮೇಶ್

2025ರ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಜಿಲ್ಲೆಯಲ್ಲಿ 2023, 2024 ಹಾಗೂ 2025ರಲ್ಲಿ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ಉತ್ತೀರ್ಣರಾದ ಅಭ್ಯರ್ಥಿಗಳು ಫಲಿತಾಂಶ ಪ್ರಕಟವಾದ 180 ದಿನಗಳ ನಂತರವೂ ಸಾರ್ವಜನಿಕ, ಖಾಸಗಿ ಕ್ಷೇತ್ರದಲ್ಲಿ ಉದ್ಯೋಗದಲ್ಲಿ ಇರದವರು ಹಾಗೂ ಸ್ವಯಂ ಉದ್ಯೋಗದಲ್ಲಿ ಇರದವರು, ಉನ್ನತ ವ್ಯಾಸಂಗ ಮುಂದು ವರಿಸದೇ ಇರುವವರು, ಕನಿಷ್ಟ 6 ವರ್ಷ ಕರ್ನಾಟಕದ ರಹವಾಸಿ ಆಗಿರುವವರು ಸೇವಾ ಸಿಂಧು ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬಹುದು.

2025ರ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆ ಆರಂಭ

Profile Ashok Nayak Jul 19, 2025 11:56 PM

ಚಿಕ್ಕಬಳ್ಳಾಪುರ : ಯುವ ಜನತೆಯ ಉಜ್ವಲ ಭವಿಷ್ಯಕ್ಕಾಗಿ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಜಿಲ್ಲೆಯ ಅರ್ಹ ಯುವಕ ಯುವತಿಯರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಯಲುವಳ್ಳಿ ಎನ್ ರಮೇಶ್ ತಿಳಿಸಿದರು.

ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಚಿಕ್ಕಬಳ್ಳಾಪುರ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಯುವನಿಧಿಯ ಪೋಸ್ಟರ್ ಬಿಡುಗಡೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಇದನ್ನೂ ಓದಿ: Chikkaballapur News: ಜು.18ಕ್ಕೆ "ಭೋವಿ ಜನೋತ್ಸವ" ಅಂಗವಾಗಿ ಪ್ರತಿಭಾ ಪುರಸ್ಕಾರ

2025ರ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಜಿಲ್ಲೆಯಲ್ಲಿ 2023, 2024 ಹಾಗೂ 2025ರಲ್ಲಿ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ಉತ್ತೀರ್ಣರಾದ ಅಭ್ಯರ್ಥಿಗಳು ಫಲಿತಾಂಶ ಪ್ರಕಟವಾದ 180 ದಿನಗಳ ನಂತರವೂ ಸಾರ್ವಜನಿಕ, ಖಾಸಗಿ ಕ್ಷೇತ್ರದಲ್ಲಿ ಉದ್ಯೋಗ ದಲ್ಲಿ ಇರದವರು ಹಾಗೂ ಸ್ವಯಂ ಉದ್ಯೋಗದಲ್ಲಿ ಇರದವರು, ಉನ್ನತ ವ್ಯಾಸಂಗ ಮುಂದು ವರಿಸದೇ ಇರುವವರು, ಕನಿಷ್ಟ 6 ವರ್ಷ ಕರ್ನಾಟಕದ ರಹವಾಸಿ ಆಗಿರುವವರು ಸೇವಾ ಸಿಂಧು ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ 1800-599-7154 ಅಥವಾ ಜಿಲ್ಲಾ ಉದ್ಯೋಗ ವಿನಿಯಮ ಕಚೇರಿ, ಚಿಕ್ಕಬಳ್ಳಾಪುರ ದೂ.ಸಂ: ೮೮೬೧೭೩೪೮೨೪ ಗೆ ಸಂಪರ್ಕಿಸಬಹುದು ಎಂದರು.

ಈ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಜಯರಾಮ್, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ್, ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಎಲ್ಲಾ ಸದಸ್ಯರು, ಉದ್ಯೋಗ ಅಭಿವೃದ್ಧಿ ಕಾರ್ಯನಿರ್ವಾಹಕ ಶ್ರೀನಿವಾಸ್ ಹಾಗೂ ಉದ್ಯೋಗ ವಿನಿಮಯ ಕಚೇರಿ ಸಿಬ್ಬಂದಿ ಹಾಜರಿದ್ದರು.