ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Dr G Parameshwar: ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣಕ್ಕೆ ಅನುದಾನ ನೀಡಲು ಮನವಿ

ಜಿಲ್ಲಾ ಕ್ರೀಡಾಂಗಣದ ಅಭಿವೃದ್ಧಿಗೆ ಈ ಹಿಂದೆ ಬಿಡುಗಡೆಯಾಗಿದ್ದ ಅನುದಾನದಲ್ಲಿ ಚಿಂತಾಮಣಿ ವಿಧಾನಸಭಾ ಕ್ಷೇತ್ರಕ್ಕೆ ಹಣ ಬಳಕೆಯಾಗಿದ್ದು, ಚಿಕ್ಕಬಳ್ಳಾಪುರಕ್ಕೆ ಕೇವಲ ರೂಪಾಯಿ 10 ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದು ಸಂಸ್ಥೆಯ ಪದಾಧಿಕಾರಿಗಳು ಸಚಿವರ ಗಮನಕ್ಕೆ ತಂದರು. ಈ ಮೊತ್ತದಿಂದ ಕ್ರೀಡಾಂಗಣದ ಸಮಗ್ರ ಅಭಿವೃದ್ಧಿಗೆ ತೊಂದರೆಯಾಗಿದ್ದು, ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣಕ್ಕೆ ಹೆಚ್ಚಿನ ಅನುದಾನದ ಅಗತ್ಯವಿದೆ ಎಂದು ತಿಳಿಸಿದರು.

ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣಕ್ಕೆ ಅನುದಾನ ನೀಡಲು ಮನವಿ

-

Profile
Ashok Nayak Sep 27, 2026 11:28 PM

ಚಿಕ್ಕಬಳ್ಳಾಪುರ: ಜಿಲ್ಲಾ ಕ್ರೀಡಾಂಗಣದಲ್ಲಿ ಸಿಂಥೆಟಿಕ್ ಅಥ್ಲೆಟಿಕ್ ಟ್ರ್ಯಾಕ್ ನಿರ್ಮಾಣಕ್ಕೆ ಅಗತ್ಯವಿರುವ ಅನುದಾನವನ್ನು ತುರ್ತಾಗಿ ಬಿಡುಗಡೆ ಮಾಡಬೇಕು ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಅಥ್ಲೆಟಿಕ್ ಸಂಸ್ಥೆಯ ಪದಾಧಿಕಾರಿಗಳು ಉಪಮುಖ್ಯಮಂತ್ರಿ ಹಾಗೂ ಕ್ರೀಡಾ ಸಚಿವ ಡಾ.ಜಿ. ಪರಮೇಶ್ವರ್(Dr G Parameshwar) ಅವರಿಗೆ ಮನವಿ ಸಲ್ಲಿಸಿದರು.

ಜಿಲ್ಲಾ ಅಥ್ಲೆಟಿಕ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮಂಚನಬಲೆ ಶ್ರೀನಿವಾಸ್ ಹಾಗೂ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಜಯಲಕ್ಷ್ಮೀಬಾಯಿ ಅವರು ಡಾ.ಜಿ.ಪರಮೇಶ್ವರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಇದನ್ನೂ ಓದಿ: G Parameshwar: ಬಾಬಾಸಾಹೇಬರ ದೂರದೃಷ್ಟಿಯ ಚಿಂತನೆಗಳು ದೇಶದ ಪ್ರಗತಿಗೆ ಬುನಾದಿ: ಡಿಸಿಎಂ ಡಾ.ಜಿ.ಪರಮೇಶ್ವರ

ಜಿಲ್ಲಾ ಕ್ರೀಡಾಂಗಣದ ಅಭಿವೃದ್ಧಿಗೆ ಈ ಹಿಂದೆ ಬಿಡುಗಡೆಯಾಗಿದ್ದ ಅನುದಾನದಲ್ಲಿ ಚಿಂತಾಮಣಿ ವಿಧಾನಸಭಾ ಕ್ಷೇತ್ರಕ್ಕೆ ಹಣ ಬಳಕೆಯಾಗಿದ್ದು, ಚಿಕ್ಕಬಳ್ಳಾಪುರಕ್ಕೆ ಕೇವಲ ರೂಪಾಯಿ 10 ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದು ಸಂಸ್ಥೆಯ ಪದಾಧಿಕಾರಿಗಳು ಸಚಿವರ ಗಮನಕ್ಕೆ ತಂದರು. ಈ ಮೊತ್ತದಿಂದ ಕ್ರೀಡಾಂಗಣದ ಸಮಗ್ರ ಅಭಿವೃದ್ಧಿಗೆ ತೊಂದರೆಯಾಗಿದ್ದು, ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣಕ್ಕೆ ಹೆಚ್ಚಿನ ಅನುದಾನದ ಅಗತ್ಯವಿದೆ ಎಂದು ತಿಳಿಸಿದರು.

ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣಕ್ಕೆ ಸುಮಾರು ರೂಪಾಯಿ 70 ಕೋಟಿ ಅಗತ್ಯವಿರುವುದರಿಂದ, ಕ್ರೀಡಾಪಟುಗಳ ತರಬೇತಿ ಹಾಗೂ ಕ್ರೀಡಾ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಅಗತ್ಯ ಅನುದಾನವನ್ನು ತುರ್ತಾಗಿ ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿದರು.

ಇದೇ ವೇಳೆ, ಚಿಕ್ಕಬಳ್ಳಾಪುರ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಲು ಹಾಗೂ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವಂತೆ ಡಾ. ಜಿ. ಪರಮೇಶ್ವರ್ ಅವರಿಗೆ ಆಹ್ವಾನ ಪತ್ರಿಕೆ ನೀಡಿ ಆಹ್ವಾನಿಸಲಾಯಿತು.