ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Rescue of a dog: 80 ಅಡಿ ಆಳದ ಬಾವಿಗೆ ಬಿದ್ದ ನಾಯಿಯ ರಕ್ಷಣೆ: ಅಗ್ನಿಶಾಮಕ ಸಿಬ್ಬಂದಿಯ ಸಾಹಸ

ತಾಲೂಕಿನ ಕೊಂಡೇನಹಳ್ಳಿ ಗ್ರಾಮದಲ್ಲಿ ಸುಮಾರು 80 ಅಡಿ ಆಳದ ಬಾವಿಗೆ ಬಿದ್ದಿದ್ದ ನಾಯಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಸತತ ಮೂರು ಗಂಟೆಗಳ ಕಾರ್ಯಾಚರಣೆ ನಡೆಸಿ ಜೀವಂತವಾಗಿ ರಕ್ಷಿಸಿದ್ದಾರೆ. ಗ್ರಾಮದ ಮಂಜುನಾಥ್ ಅವರಿಗೆ ಸೇರಿದ ಜಮೀನಿನ ಪಕ್ಕದಲ್ಲಿದ್ದ ನೀರಿಲ್ಲದ, ಮೆಟ್ಟಿಲು ಗಳಿಲ್ಲದ ಬಾವಿಗೆ ನಾಯಿ ಆಕಸ್ಮಿಕವಾಗಿ ಬಿದ್ದಿತ್ತು. ಮೇಲಕ್ಕೆ ಬರಲಾಗದೆ ಒದ್ದಾಡುತ್ತಿದ್ದ ನಾಯಿಯ ರಕ್ಷಣೆಗೆ ಗ್ರಾಮಸ್ಥರು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದರು.

80 ಅಡಿ ಆಳದ ಬಾವಿಗೆ ಬಿದ್ದ ನಾಯಿಯ ರಕ್ಷಣೆ

-

Profile
Ashok Nayak Oct 25, 2026 8:21 PM

ಚಿಕ್ಕಬಳ್ಳಾಪುರ: ತಾಲೂಕಿನ ಕೊಂಡೇನಹಳ್ಳಿ ಗ್ರಾಮದಲ್ಲಿ ಸುಮಾರು 80 ಅಡಿ ಆಳದ ಬಾವಿಗೆ ಬಿದ್ದಿದ್ದ ನಾಯಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಸತತ ಮೂರು ಗಂಟೆಗಳ ಕಾರ್ಯಾಚರಣೆ ನಡೆಸಿ ಜೀವಂತವಾಗಿ ರಕ್ಷಿಸಿದ್ದಾರೆ.

ಗ್ರಾಮದ ಮಂಜುನಾಥ್ ಅವರಿಗೆ ಸೇರಿದ ಜಮೀನಿನ ಪಕ್ಕದಲ್ಲಿದ್ದ ನೀರಿಲ್ಲದ, ಮೆಟ್ಟಿಲುಗಳಿಲ್ಲದ ಬಾವಿಗೆ ನಾಯಿ ಆಕಸ್ಮಿಕವಾಗಿ ಬಿದ್ದಿತ್ತು. ಮೇಲಕ್ಕೆ ಬರಲಾಗದೆ ಒದ್ದಾಡುತ್ತಿದ್ದ ನಾಯಿಯ ರಕ್ಷಣೆಗೆ ಗ್ರಾಮಸ್ಥರು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದರು.

ಇದನ್ನೂ ಓದಿ: Chikkaballapur News: ಹಿರಿಯ ನಾಗರಿಕರಿಗೆ ಇಳಿ ವಯಸ್ಸಿನಲ್ಲಿ ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಅಗತ್ಯ: ಡಾ. ಮೇಘಶ್ರೀ

ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಹಗ್ಗ ಮತ್ತು ಬುಟ್ಟಿಯ ನೆರವಿನಿಂದ ಬಾವಿಗಿಳಿದು, ಹರಸಾಹಸಪಟ್ಟು ನಾಯಿಯನ್ನು ಸುರಕ್ಷಿತವಾಗಿ ಮೇಲಕ್ಕೆತ್ತಿದರು. ಪ್ರಭಾರ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ವಸಂತ್ ಮೇತ್ರಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಸಿಬ್ಬಂದಿ ರವೀಂದ್ರ ಸಂಗಮ, ಚಾಲಕರಾದ ಬಸವರಾಜ್, ನಾಗಪ್ಪ ಶಿವಾಪುರ, ಮಲ್ಲಿಕಾರ್ಜುನ ಕಾಡಪ್ಪನವರ, ದತ್ತಾತ್ರೇಯ ಹಾಗೂ ಬೋರಗಾವಿ ಪಾಲ್ಗೊಂಡಿದ್ದರು. ಸಿಬ್ಬಂದಿಯ ಸಮಯಪ್ರಜ್ಞೆ ಮತ್ತು ಸಾಹಸಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.