Gauribidanur News: ಕೆ.ಎನ್.ರಾಜಣ್ಣ ವಜಾ ಖಂಡಿಸಿ ಆ.30ರಂದು ಸಂಗೊಳ್ಳಿ ರಾಯಣ್ಣ ಸಂಘಟನೆ ಪ್ರತಿಭಟನೆ
ಸಹಕಾರ ಸಚಿವರಾದ ಕೆ.ಎನ್. ರಾಜಣ್ಣ, ಸಹಕಾರ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ರಾಷ್ಟ್ರಮಟ್ಟದ ಧುರೀಣರಾಗಿದ್ದಾರೆ. ತಮ್ಮ ಆಡಳಿತಾವಧಿಯಲ್ಲಿ ಪರಿಶಿಷ್ಟ ಜಾತಿ, ವರ್ಗ ಹಾಗೂ ಹಿಂದುಳಿದ ವರ್ಗಗಳಿಗೆ ತಮ್ಮದೇ ಆದ ರೀತಿಯಲ್ಲಿ ಕೊಡುಗೆ ನೀಡುತ್ತಾ ಬಂದಿದ್ದಾರೆ. ಆದರೆ ಕೆಲವು ಪಟ್ಟ ಭದ್ರ ಹಿತಾಸಕ್ತಿಗಳು ಪರಿಶಿಷ್ಟ ಪಂಗಡದ ನಾಯಕನ ಏಳ್ಗೆಯನ್ನು ಸಹಿಸದೆ, ಷಡ್ಯಂತ್ರ ಮಾಡಿ ಸಚಿವ ಸಂಪುಟದಿಂದ ವಜಾ ಗೊಳಿಸುವಂತೆ ಮಾಡಿದ್ದಾರೆ.

ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರನ್ನು ಸಂಪುಟದಿಂದ ವಜಾಗೊಳಿಸಿರುವುದನ್ನು ವಿರೋಧಿಸಿ, ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಸಂಘದ ವತಿಯಿಂದ ಶನಿವಾರ ಪ್ರತಿಭಟನೆಗೆ ನಡೆಸಲಾಗುವುದು ಎಂದು ಸಂಘದ ಕಾರ್ಯದರ್ಶಿ ಮಹದೇವು ತಿಳಿಸಿದರು. -

ಗೌರಿಬಿದನೂರು : ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರನ್ನು ಸಂಪುಟದಿಂದ ವಜಾ ಗೊಳಿಸಿರುವುದನ್ನು ವಿರೋಧಿಸಿ, ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಸಂಘದ ವತಿಯಿಂದ ಶನಿವಾರ ಪ್ರತಿಭಟನೆಗೆ ನಡೆಸಲಾಗುವುದು ಎಂದು ಸಂಘದ ಕಾರ್ಯದರ್ಶಿ ಮಹದೇವು ತಿಳಿಸಿದರು.
ನಗರದಲ್ಲಿ ಮಾಧ್ಯಮಕ್ಕೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ ಮಾತನಾಡಿದರು.
ಇದನ್ನೂ ಓದಿ: KN Rajanna: ಕೆ.ಎನ್. ರಾಜಣ್ಣ ರಾಜೀನಾಮೆ ಅಂಗೀಕಾರ; ಸಂಪುಟದಿಂದ ಕೈಬಿಡಲು ರಾಜಭವನದಿಂದ ಪತ್ರ
ಸಹಕಾರ ಸಚಿವರಾದ ಕೆ.ಎನ್. ರಾಜಣ್ಣ, ಸಹಕಾರ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ರಾಷ್ಟ್ರಮಟ್ಟದ ಧುರೀಣರಾಗಿದ್ದಾರೆ. ತಮ್ಮ ಆಡಳಿತಾವಧಿಯಲ್ಲಿ ಪರಿಶಿಷ್ಟ ಜಾತಿ, ವರ್ಗ ಹಾಗೂ ಹಿಂದುಳಿದ ವರ್ಗಗಳಿಗೆ ತಮ್ಮದೇ ಆದ ರೀತಿಯಲ್ಲಿ ಕೊಡುಗೆ ನೀಡುತ್ತಾ ಬಂದಿದ್ದಾರೆ. ಆದರೆ ಕೆಲವು ಪಟ್ಟ ಭದ್ರ ಹಿತಾಸಕ್ತಿಗಳು ಪರಿಶಿಷ್ಟ ಪಂಗಡದ ನಾಯಕನ ಏಳ್ಗೆಯನ್ನು ಸಹಿಸದೆ, ಷಡ್ಯಂತ್ರ ಮಾಡಿ ಸಚಿವ ಸಂಪುಟದಿಂದ ವಜಾ ಗೊಳಿಸುವಂತೆ ಮಾಡಿದ್ದಾರೆ. ಇದನ್ನು ಖಂಡಿಸಿ ನಗರದಲ್ಲಿ ಶನಿವಾರ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.
ಸರ್ಕಾರ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸದಿದ್ದರೆ, ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಇದೇ ಸಂದರ್ಭದಲ್ಲಿ, ಅಧ್ಯಕ್ಷ ನಾಗರಾಜ್, ಪ್ರಧಾನ ಕಾರ್ಯದರ್ಶಿ ರಾಮು, ಸೇರಿದಂತೆ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.