ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

MLA K.H. Puttaswamy Gowda: ಭಾರತೀಯರಿಗೆ ಸರ್ವಪಲ್ಲಿ ರಾಧಾಕೃಷ್ಣನ್ ಎಂದೆಂದಿಗೂ ಸ್ಪೂರ್ತಿಯ ಧೃವತಾರೆ : ಶಾಸಕ ಕೆ.ಹೆಚ್.ಪುಟ್ಟಸ್ವಾಮಿಗೌಡ

ದೇಶದಲ್ಲಿ ಅನೇಕ ಮಂದಿ ರಾಷ್ಟ್ರಪತಿಗಳಾಗಿ ಸೇವೆ ಸಲ್ಲಿಸಿದ್ದಾರೆ. ಆದರೆ ಕೆಲವೇ ಕೆಲವು ವ್ಯಕ್ತಿಗಳು ಧ್ರುವ ನಕ್ಷತ್ರಗಳಂತೆ ಮೆರುಗುತ್ತಿದ್ದಾರೆ. ಆ ಸಾಲಿನಲ್ಲಿ ರಾಧಾಕೃಷ್ಣನ್, ರಾಜೇಂದ್ರ ಪ್ರಸಾದ್, ಅಬ್ದುಲ್ ಕಲಾಂ ಅವರು ಅಗ್ರಗಣ್ಯರಾಗಿದ್ದಾರೆ. ಶಿಕ್ಷಕರಾಗಿದ್ದ ರಾಧಾಕೃಷ್ಣನ್ ಅವರು ಮಹಾನ್ ಜ್ಞಾನಿ. ಶಿಕ್ಷಣದ ಬೆಲೆ ಅವರಿಗೆ ಗೊತ್ತಿತ್ತು.

ಸರ್ವಪಲ್ಲಿ ರಾಧಾಕೃಷ್ಣನ್ ಭಾರತೀಯರಿಗೆ ಎಂದೆಂದಿಗೂ ಸ್ಪೂರ್ತಿಯ ಧೃವತಾರೆ

-

Ashok Nayak Ashok Nayak Oct 12, 2025 10:04 AM

ಗೌರಿಬಿದನೂರು : ಮಾಜಿ ರಾಷ್ಟ್ರಪತಿ ದಿ.ಸರ್ವಪಲ್ಲಿ ರಾಧಾಕೃಷ್ಣನ್ ಅವರು ಭಾರತೀಯರಿಗೆ ಎಂದೆಂದಿಗೂ ಸ್ಪೂರ್ತಿಯಾಗುವ ಧೃವತಾರೆ ಎಂದು ಶಾಸಕ ಕೆ.ಹೆಚ್.ಪುಟ್ಟಸ್ವಾಮಿಗೌಡ (MLA K.H. Puttaswamy Gowda) ಹೇಳಿದರು.

ನಗರದ ಡಾ.ಎಚ್.ಎನ್ ಕಲಾಭವನದಲ್ಲಿ ತಾಲೂಕು ಖಾಸಗಿ ಶಾಲಾ ಆಡಳಿತ ಮಂಡಳಿ ಒಕ್ಕೂಟದ ವತಿಯಿಂದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ದೇಶದಲ್ಲಿ ಅನೇಕ ಮಂದಿ ರಾಷ್ಟ್ರಪತಿಗಳಾಗಿ ಸೇವೆ ಸಲ್ಲಿಸಿದ್ದಾರೆ. ಆದರೆ ಕೆಲವೇ ಕೆಲವು ವ್ಯಕ್ತಿಗಳು ಧ್ರುವ ನಕ್ಷತ್ರಗಳಂತೆ ಮೆರುಗುತ್ತಿದ್ದಾರೆ. ಆ ಸಾಲಿನಲ್ಲಿ ರಾಧಾಕೃಷ್ಣನ್, ರಾಜೇಂದ್ರ ಪ್ರಸಾದ್, ಅಬ್ದುಲ್ ಕಲಾಂ ಅವರು ಅಗ್ರಗಣ್ಯರಾಗಿದ್ದಾರೆ. ಶಿಕ್ಷಕರಾಗಿದ್ದ ರಾಧಾಕೃಷ್ಣನ್ ಅವರು ಮಹಾನ್ ಜ್ಞಾನಿ. ಶಿಕ್ಷಣದ ಬೆಲೆ ಅವರಿಗೆ ಗೊತ್ತಿತ್ತು. ರಾಷ್ಟ್ರಪತಿಯಾಗಿದ್ದ ಸಂದರ್ಭದಲ್ಲಿ ದೇಶ ಶಿಕ್ಷಣ ಕ್ಷೇತ್ರದಲ್ಲಿ ಬಹಳ ಹಿಂದುಳಿದಿತ್ತು. ಶೇ.೨೫%ರಷ್ಟು ಮಂದಿ ಮಾತ್ರ ಅಕ್ಷರಸ್ಥರಿದ್ದರು.

ಇದನ್ನೂ ಓದಿ: Gauribadinur News: ಕಾದಲವೇಣಿ ಗ್ರಾ.ಪಂ:ಉಪಾಧ್ಯಕ್ಷರಾಗಿ ಗೋಪಾಲ್ ಆಯ್ಕೆ

ದೇಶ ಅಭಿವೃದ್ಧಿಯಾಗದಬೇಕಾದರೆ ಶಿಕ್ಷಣದಿಂದ ಮಾತ್ರ ಸಾಧ್ಯ. ಜ್ಞಾನವೇ ಸಂಪತ್ತು ಎಂಬುದನ್ನು ಮನಗಂಡಿದ್ದ ರಾಧಾಕೃಷ್ಣನ್ ಅವರು ವಿದ್ಯೆಯ ಮಹತ್ವವವನ್ನು ಸಾರಿದರು. ಅವರ ಮಾರ್ಗ ದರ್ಶನದಲ್ಲಿ ಸರಕಾರಗಳು ಶಿಕ್ಷಣಕ್ಕೆ ಒತ್ತು ನೀಡಿದವು. ಕಡ್ಡಾಯ ಶಿಕ್ಷಣ ಜಾರಿಗೊಳಿಸಿದವು. ಅದರ ಫಲವಾಗಿ ಇಂದು ದೇಶ ಸಾಕ್ಷರತೆಯಲ್ಲಿ ಸಾಧನೆಯ ಹಾದಿಯಲ್ಲಿ ಸಾಗುತ್ತಿದೆ ಎಂದರು.

ಕೇವಲ ಸರಕಾರದಿಂದ ಮಾತ್ರ  ಶಿಕ್ಷಣ ಕ್ಷೇತ್ರವನ್ನು ಮುನ್ನಡೆಸಲು ಸಾಧ್ಯವಿಲ್ಲ. ಖಾಸಗಿ ಶಿಕ್ಷಣ ಸಂಸ್ಥೆಗಳ ಪಾತ್ರ ಕೂಡ ಪ್ರಮುಖವಾಗಿದೆ. ಕ್ಷೇತ್ರದಲ್ಲಿನ ಕುಂದು ಕೊರತೆಗಳನ್ನು  ನೀಗಿಸುವ ಕೆಲಸವನ್ನು ಖಾಸಗಿ ಶಿಕ್ಷಣ ಸಂಸ್ಥೆಗಳು ಮಾಡುತ್ತಿವೆ. ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುತ್ತಿವೆ. ಖಾಸಗಿ ಶಾಲಾ   ಶಿಕ್ಷಕರಿಗೆ ಸಂಬಳ ಕಡಿಮೆಯಿದ್ದರೂ ಸಹ ,ಶಿಕ್ಷಕರು ಪ್ರಾಮಾಣಿಕತೆ ಮತ್ತು ಬದ್ಧತೆಯಿಂದ ತಮಗೆ ನೀಡಿರುವ ಕರ್ತವ್ಯವನ್ನು ನಿರ್ವಹಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಶಿಕ್ಷಕರು ಎಲ್ಲ ಮಕ್ಕಳನ್ನು ಸಮಾನ ದೃಷ್ಠಿಯಿಂದ ಕಾಣಬೇಕು. ಜ್ಞಾನಾರ್ಜನೆ ಶಕ್ತಿ ಕಡಿಮೆಯಿರುವ ಮಕ್ಕಳಿಗೆ ಆತ್ಮವಿಶ್ವಾಸ, ಧೈರ್ಯ ತುಂಬುವ ಕೆಲಸ ಮಾಡಬೇಕು. ಮುಂದೆ ಅವರು ಸಾಧಕರ ಸಾಲಿನಲ್ಲಿ ನಿಲ್ಲುತ್ತಾರೆ ಎಂದ ಶಾಸಕರು, ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ತಾಲೂಕು ಜಿಲ್ಲೆಗೆ ಪ್ರಥಮ ಸ್ಥಾನ ಬರಬೇಕು. ಈ ನಿಟ್ಟಿನಲ್ಲಿ ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಶಿಕ್ಷಕರು ತಮ್ಮ ಶಕ್ತಿ ಮೀರಿ ಶಿಕ್ಷಣವನ್ನು ದಾರೆಯೆರೆಯಬೇಕು. ಈ ನಿಟ್ಟಿನಲ್ಲಿ ಈಗಾಗಲೆ ಕ್ಷೇತ್ರ ಶಿಕ್ಷಣಾಧಿಕಾರಿ ಜೊತೆ ಚರ್ಚಿಸಿ ದ್ದೇನೆ. ಫಲಿತಾಂಶ ಹೆಚ್ಚಳಕ್ಕೆ ಅಗತ್ಯ ಕ್ರಮಗಳನ್ನು ಜರುಗಿಸಬೇಕು ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಗಂಗರೆಡ್ಡಿ ಮಾತನಾಡಿ  ಮನುಷ್ಯನ ಬದುಕಿನಲ್ಲಿ ವಿದ್ಯೆ ಅತಿ ಮುಖ್ಯ. ಸದೃಢ ಸಮಾಜ ನಿರ್ಮಾಣ ಮಾಡುವುದರ ಜತೆಗೆ ಒಬ್ಬ ವ್ಯಕ್ತಿಯ ಭವಿಷ್ಯವನ್ನು ರೂಪಿಸುವಲ್ಲಿಶಿಕ್ಷಕರು ನಿರಂತರವಾಗಿ ಶ್ರಮಿಸುತ್ತಿರುವುದು ಶ್ಲಾಘನೀಯ, ಮನುಷ್ಯ ಬದುಕಿನಲ್ಲಿ ಏನಾದರೂ ಸಾಧನೆ, ಯಶಸ್ಸು ಮತ್ತು ಆಡಳಿತ ನಡೆಸಲು ಶಿಕ್ಷಣ ಅತಿ ಮಹತ್ವದಾಗಿದೆ. ಮಕ್ಕಳ ಪ್ರಗತಿಗೆ ಮತ್ತು ಅವರ ಭವಿಷ್ಯವನ್ನು ರೂಪಿಸುವಲ್ಲಿ ನಿರಂತರವಾಗಿ ಶ್ರಮಿಸುತ್ತಿರುವ ಶಿಕ್ಷಕರು ದೇಶದ ಆಸ್ತಿಯಾಗಿದ್ದಾರೆ ಎಂದು ಬಣ್ಣಿಸಿದರು.

ವೃತ್ತ ನಿರೀಕ್ಷಕ ಅಂಜನ್ ಕುಮಾರ್ ಮಾತನಾಡಿ, ಒಮ್ಮೆ ಶಿಕ್ಷಕರಾದವರು ಜೀವನ ಪರ್ಯಂತ ಶಿಕ್ಷಕರಾಗಿರುತ್ತಾರೆ. ಸಮಾಜಕ್ಕೆ ಅವರು ಒಂದಲ್ಲಾ ಒಂದು ರೀತಿಯಲ್ಲಿ ಮಾರ್ಗದರ್ಶನ ಮಾಡು ತ್ತಾರೆ. ಶಿಕ್ಷಕ ವೃತ್ತಿ ಅತ್ಯಂತ ಶ್ರೇಷ್ಠವಾದದ್ದು, ಬದುಕಿನಲ್ಲಿ ನಮಗೆ ಮಾರ್ಗದರ್ಶನ ಮಾಡಿದ ಶಿಕ್ಷಕರು ಸ್ಮರಣೀಯ. ಅವರನ್ನು ಗೌರವಿಸುವುದು ಶಿಕ್ಷಣ ಸಂಸ್ಥೆಗಳು, ವಿದ್ಯಾರ್ಥಿಗಳು ಹಾಗೂ ಸಮಾಜದ ಕರ್ತವ್ಯ’ ಎಂದು ಹೇಳಿದರು.

ಸಂಘದ ಗೌರವಾಧ್ಯಕ್ಷ ಎಸ್ ಎಸ್.ರೆಡ್ಡಿ ಮಾತನಾಡಿ ವಿದ್ಯಾರ್ಥಿಗಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಶಿಕ್ಷಕರ ಕೊಡುಗೆ ದೊಡ್ಡದು. ಈ ನಿಟ್ಟಿನಲ್ಲಿ ಶಿಕ್ಷಕರ ದಿನಾಚರಣೆ ಕೇವಲ ಶಿಕ್ಷಣ ಸಂಸ್ಥೆಗಳಿಗೆ ಮಾತ್ರ ಸೀಮಿತವಾಗದೆ, ಇಡೀ ಸಮಾಜ ಶಿಕ್ಷಕರ ದಿನಾಚರಣೆಯನ್ನು ಆಚರಿಸುವ ಮೂಲಕ ಶಿಕ್ಷಕ ಸಮುದಾಯವನ್ನು ಗೌರವಿಸಬೇಕು’ ಎಂದು ಕರೆ ನೀಡಿದರು.

ಸಮಾರಂಭದಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಏರ್ಪಡಿಸಲಾಗಿದ್ದ ಕ್ರೀಡಾಕೂಟದಲ್ಲಿ ವಿಜೇತರಾದ ಶಿಕ್ಷಕರಿಗೆ ಪ್ರಶಸ್ತಿ ಹಾಗೂ ಬಹುಮಾನಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ , ತಾಲೂಕು ಖಾಸಗಿ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟದ ಕಾರ್ಯದರ್ಶಿ ರವಿ,, ಒಕ್ಕೂಟದ ಸತ್ಯನಾರಾಯಣ್, ನಾಗಭೂಷಣ್ ರಾವ್, ಚಂದ್ರಮೌಳಿ, ಶಿವರಾಮ ರೆಡ್ಡಿ, ನಂಜೇಗೌಡ, ಸ್ಯಾಮ್ಸನ್, ಡಾ ಸುದರ್ಶನ್, ತೀರ್ಥ ಪ್ರಕಾಶ್, ರಾಜಾ ಸಲೋಮನ್. ಮುಖಂಡರಾದ ಶ್ರೀನಿವಾಸಗೌಡ, ಅಬ್ದುಲ್ಲಾ ಸೇರಿದಂತೆ  ಶಿಕ್ಷಣ ಸಂಸ್ಥೆಯ ಪದಾಧಿಕಾರಿಗಳು ಮತ್ತು ಶಿಕ್ಷಕರು ಭಾಗವಹಿಸಿದ್ದರು.