ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

'Say No to Drugs, Bro' campaign: ಚಿಂತಾಮಣಿಯಲ್ಲಿ 'ಡ್ರಗ್ಸ್ ಬೇಡ ಬ್ರೋ' ಸೌಂಡ್:ಪೊಲೀಸ್ ಇಲಾಖೆಯಿಂದ ಬೃಹತ್ ಜಾಗೃತಿ ಮೆರವಣಿಗೆ

ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಶಿವರಾಜ್ ಮಾತನಾಡಿ, ಕರ್ನಾಟಕ ಸರ್ಕಾರದ ಮಹತ್ವಾ ಕಾಂಕ್ಷೆಯ RISE ಯೋಜನೆ ಕುರಿತು ವಿವರಿಸಿದರು. ಮಾದಕ ವಸ್ತುಗಳನ್ನು ತಿರಸ್ಕರಿಸಿ ಎಲ್ಲಾದರೂ ಮಾದಕ ವಸ್ತುಗಳ ಮಾರಾಟ ಕಂಡುಬಂದರೆ ಪೊಲೀಸರಿಗೆ ಮಾಹಿತಿ ನೀಡಿ, ಜಾಗೃತಿ ಅಭಿಯಾನಕ್ಕೆ ಬೆಂಬಲ ನೀಡಿ, ಆರೋಗ್ಯವಂತ ಸಮಾಜದ ಸಬಲೀಕರಣಕ್ಕೆ ಕೈಜೋಡಿಸಿ

ನಶೆ ಮುಕ್ತ ಚಿಂತಾಮಣಿ': ಪೊಲೀಸ್ ಇಲಾಖೆಯಿಂದ ಜಾಗೃತಿ ಕರೆ

-

Profile
Ashok Nayak Jul 24, 2026 11:58 PM

ಚಿಂತಾಮಣಿ: ಚಿಂತಾಮಣಿಯನ್ನು ನಶೆ ಮತ್ತು ಮಾದಕ ವಸ್ತು ಮುಕ್ತ ನಗರವನ್ನಾಗಿ ಮಾಡಲು ಸಾರ್ವಜನಿಕರು ಹಾಗೂ ಆಟೋ ಚಾಲಕರ ಸಹಕಾರ ಅತ್ಯಂತ ಮುಖ್ಯ ಎಂದು ತಹಸೀಲ್ದಾರ್ ಸುದರ್ಶನ ಯಾದವ್ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಮನವಿ ಮಾಡಿದ್ದಾರೆ.

ನಗರದ ಸರ್ಕಾರಿ ಪಾಲಿಟೆಕ್ನಿಕ್ ಮೈದಾನದಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಆಯೋಜಿಸ ಲಾಗಿದ್ದ ಮಾದಕ ವಸ್ತುಗಳ ವಿರೋಧಿ ಜಾಗೃತಿ ಅಭಿಯಾನ ಹಾಗೂ ಮೆರವಣಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅಧಿಕಾರಿಗಳು ಮಾತನಾಡಿದರು. ವ್ಯಸನಿಗಳು ತೆಗೆದುಕೊಳ್ಳುವ ದುರಭ್ಯಾಸದ ವಸ್ತುಗಳಲ್ಲಿ ನಶೆ ಇಲ್ಲ, ನಾವು ಬದುಕುವ ರೀತಿಯಲ್ಲಿ ಮತ್ತು ಸಾಧಿಸುವ ಯಶಸ್ಸಿನಲ್ಲಿ ನಿಜವಾದ ನಶೆ ಇದೆ.ಪ್ರತಿಯೊಬ್ಬರೂ ತಮ್ಮ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಕೊಡಿಸಿ, ಒಳ್ಳೆಯ ಭವಿಷ್ಯ ರೂಪಿಸಲು ಶ್ರಮಿಸಬೇಕು ಎಂದು ಹೇಳಿದರು.

ಇದನ್ನೂ ಓದಿ: Chinthamani News:ಹಾದಿಗೆರೆ ಶಾಲಾ ಮಕ್ಕಳಿಗೆ ನೋಟ್ ಬುಕ್ ಹಾಗೂ ಲೇಖನ ಸಾಮಗ್ರಿಗಳ ವಿತರಣೆ

ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಶಿವರಾಜ್ ಮಾತನಾಡಿ, ಕರ್ನಾಟಕ ಸರ್ಕಾರದ ಮಹತ್ವಾ ಕಾಂಕ್ಷೆಯ RISE ಯೋಜನೆ ಕುರಿತು ವಿವರಿಸಿದರು. ಮಾದಕ ವಸ್ತುಗಳನ್ನು ತಿರಸ್ಕರಿಸಿ ಎಲ್ಲಾದರೂ ಮಾದಕ ವಸ್ತುಗಳ ಮಾರಾಟ ಕಂಡುಬಂದರೆ ಪೊಲೀಸರಿಗೆ ಮಾಹಿತಿ ನೀಡಿ, ಜಾಗೃತಿ ಅಭಿಯಾನಕ್ಕೆ ಬೆಂಬಲ ನೀಡಿ, ಆರೋಗ್ಯವಂತ ಸಮಾಜದ ಸಬಲೀಕರಣಕ್ಕೆ ಕೈಜೋಡಿಸಿ ಎಂದು ಹೇಳಿದರು.

ನಗರಠಾಣೆ ಇನ್ಸ್ಪೆಕ್ಟರ್ ವಿಜಯ ಕುಮಾರ್ ಮಾತನಾಡಿ ಯುವಜನತೆ ಮತ್ತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು 'ಡ್ರಗ್ಸ್ ಬೇಡ ಬ್ರೋ' ಅಭಿಯಾನವನ್ನು ಕೈಗೊಳ್ಳಲಾಗಿದ್ದು, ಸಮಾಜದಲ್ಲಿ ಗೌರವಯುತ ಜೀವನ ನಡೆಸುವುದು ಪ್ರತಿಯೊಬ್ಬರ ಕರ್ತವ್ಯ ಎಂದರು.

ಕಾರ್ಯಕ್ರಮದ ನಂತರ ಆಟೋ ಚಾಲಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ, ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಿದರು