ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gauribidanur News: ಶಾಲಾ ಸಂಸತ್ ಚುನಾವಣೆ

ಹಣ ತೆಗೆದುಕೊಂಡು ಮತದಾನ ಮಾಡುವುದಲ್ಲ, ಅದು ನಮ್ಮ ಹಕ್ಕಾಗಿದೆ. ಭ್ರಷ್ಟಾಚಾರ ಮುಕ್ತ ವಾಗಿ ಚುನಾವಣೆಯಾಗಬೇಕು. ಈ ನಿಟ್ಟಿನಲ್ಲಿ ನಮಗೆ ಚುನಾವಣೆ ಹೇಗೆ ನಡೆಯುತ್ತದೆ, ನಾವು ಹೇಗೆ ಮತದಾನ ಮಾಡಬೇಕು, ಎಂದೆಲ್ಲಾ ಕಲಿಸಿದ್ದಾರೆ. ನಾವು ಚುನಾವಣೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಸಂವಿಧಾನದ ಘನತೆಯನ್ನು ಎತ್ತಿ ಹಿಡಿಯುತ್ತೇವೆ

Gauribidanur News: ಶಾಲಾ ಸಂಸತ್ ಚುನಾವಣೆ

-

Profile
Ashok Nayak Jul 2, 2026 9:38 PM

ಗೌರಿಬಿದನೂರು: ನಗರದ ಕೋಟೆ ಸರ್ಕಾರಿ ಬಾಲಕಿಯರ ಪ್ರೌಢಶಾಲಾ ಆವರಣದಲ್ಲಿ ಶಾಲಾ ಸಂಸತ್ ರಚನಾ ಪ್ರಕ್ರಿಯೆಯು ವ್ಯವಸ್ಥಿತವಾಗಿ ನಡೆಯಿತು.

ಶಾಲೆಯ ವಿದ್ಯಾರ್ಥಿನಿಯರು ಚುನಾವಣಾ ಪ್ರಕ್ರಿಯೆಯಲ್ಲಿ ಉತ್ಸಾಹದಿಂದ ಭಾಗವಹಿಸಿದ್ದರು. ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ಮತಗಟ್ಟೆ ಅಧಿಕಾರಿಗಳ ಮೊಬೈಲ್‌ನಲ್ಲಿದ್ದ ಇವಿಎಂ ಮತಯಂತ್ರ ಮಾದರಿಯ ಮೂಲಕ ಮತದಾನ ಮಾಡಿ ತಮ್ಮ ಸ್ನೇಹಿತರು ಕೂಡ ಮತದಾನ ಮಾಡುವಂತೆ ಪ್ರೇರೇಪಿ ಸಿದರು. ಕಳೆದ ಎರಡು ದಿನಗಳಿಂದ ಶಾಲಾ ಸಂಸತ್ ರಚನೆ ಮಾಡಿ ಕೊಳ್ಳಲು ಚುನಾವಣಾ ಪ್ರಕ್ರಿಯೆಗೆ ಸಮಾಜ ವಿಜ್ಞಾನ ಶಿಕ್ಷಕರಾದ ಜಿ.ಸಿ.ರಾಮಚಂದ್ರಯ್ಯ ರವರ ಮಾರ್ಗದರ್ಶನದಲ್ಲಿ ಸಕಲ ಸಿದ್ದತೆ ಮಾಡಿ ಕೊಳ್ಳಲಾಗಿತ್ತು.

ಶಾಲೆಯ ಅಭಿವೃದ್ಧಿ, ನಾಯಕತ್ವದ ಬೆಳವಣಿಗೆ, ಸಮುದಾಯದಲ್ಲಿ ತೊಡಗಿಸಿಕೊಳ್ಳುವಿಕೆ, ಸಾಮೂಹಿಕ ಶಿಸ್ತು ಹಾಗೂ ಶೈಕ್ಷಣಿಕ ಬೆಳವಣಿಗೆ ಸೇರಿದಂತೆ ತಾವು ಸಿದ್ದಪಡಿಸಿಕೊಂಡಿರುವ ಅಜೆಂಡಾವನ್ನು ಇತರ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟು ಮತ ನೀಡುವಂತೆ ಮತ ಯಾಚಿಸಿದರು.

ಇದನ್ನೂ ಓದಿ: Gauribidanur News: ಪತ್ರಕರ್ತರು ಸ್ವಾಸ್ಥ್ಯ ಸಮಾಜದ ಪ್ರತಿಬಿಂಬ: ಎಂ.ಎಸ್.ಜಗನ್ನಾಥ್

ಪ್ರತಿಜ್ಞಾವಿಧಿ ಬೋಧನೆ: ಕೇಂದ್ರ ಚುನಾವಣಾ ಆಯೋಗದ ಅಧಿಕಾರಿಯಾಗಿ ಎಸ್ ಎಸ್ ಇ ಎ ಸರ್ಕಾರಿ ಪ್ರೌಢಶಾಲೆಯ ಸಮಾಜ ವಿಜ್ಞಾನ ಶಿಕ್ಷಕರಾದ ಸನತ್ ಕುಮಾ‌ರ್ ಭಾಗವಹಿಸಿ ವಿದ್ಯಾರ್ಥಿ ಗಳಿಗೆ ಸಂಸತ್ ಚುನಾವಣೆಯ ಮಹತ್ವ ಮತ್ತು ಅವರಲ್ಲಿ

ಭಾಗವಹಿಸುವಿಕೆಯ ಪ್ರಕ್ರಿಯೆಗಳ ಬಗ್ಗೆ ವಿವರವಾಗಿ ತಿಳಿಸಿದರು. ನಂತರ ಎಲ್ಲಾ ವಿದ್ಯಾರ್ಥಿನಿಯ ರಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿನ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.

ಶಾಲಾ ಆವರಣದಲ್ಲಿ ಸೇರಿದ್ದ ವಿದ್ಯಾರ್ಥಿನಿಯರು ಸಾಲುಗಟ್ಟಿ ತಮ್ಮ ನೆಚ್ಚಿನ ಅಭ್ಯರ್ಥಿಗಳಿಗೆ ಮತ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತಮ್ಮ ಜವಾಬ್ದಾರಿ ಮತ್ತು ಹಕ್ಕುಗಳನ್ನು ಪಡೆಯುವ ಬಗ್ಗೆ ಅರಿತರು.

ನೋಟಾ ಬಳಕೆ ಬಗ್ಗೆ ಜಾಗೃತಿ: ಒಂದು ವೇಳೆ ಸ್ಪರ್ಧಿಗಳಲ್ಲಿ ಯಾರೂ ಇಷ್ಟವಿಲ್ಲದೇ ಹೋದರೆ, ಕೊನೆಯಲ್ಲಿನ ನೋಟಾ ಬಟನ್ ಒತ್ತುವ ಮೂಲಕ ಮತ ಚಲಾಯಿಸಿ ಸಂವಿಧಾನದಲ್ಲಿ ಕೊಟ್ಟಿರುವ ಹಕ್ಕುಗಳನ್ನು ಚಲಾಯಿಸಬೇಕು. ಮತದಾನವೆಂದರೆ

ಹಣ ತೆಗೆದುಕೊಂಡು ಮತದಾನ ಮಾಡುವುದಲ್ಲ, ಅದು ನಮ್ಮ ಹಕ್ಕಾಗಿದೆ. ಭ್ರಷ್ಟಾಚಾರ ಮುಕ್ತ ವಾಗಿ ಚುನಾವಣೆಯಾಗಬೇಕು. ಈ ನಿಟ್ಟಿನಲ್ಲಿ ನಮಗೆ ಚುನಾವಣೆ ಹೇಗೆ ನಡೆಯುತ್ತದೆ, ನಾವು ಹೇಗೆ ಮತದಾನ ಮಾಡಬೇಕು, ಎಂದೆಲ್ಲಾ ಕಲಿಸಿದ್ದಾರೆ. ನಾವು ಚುನಾವಣೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಸಂವಿಧಾನದ ಘನತೆಯನ್ನು ಎತ್ತಿ ಹಿಡಿಯುತ್ತೇವೆ ಎಂದು ಘೋಷಿಸಿದರು.

ಈ ವೇಳೆ 10ನೇ ತರಗತಿ ವಿದ್ಯಾರ್ಥಿನಿ ಗಗನ ಮಾತ ನಾಡಿ, ಚುನಾವಣೆ ಎಂಬುದು ಪ್ರಜಾಪ್ರಭುತ್ವ ದಲ್ಲಿ ಸರ್ಕಾರವನ್ನು ರಚನೆ ಮಾಡಿಕೊಳ್ಳಲು ನಡೆಯುವಂತಹ ಪ್ರಕ್ರಿಯೆ, ಇದರಲ್ಲಿ 18 ವರ್ಷ ತುಂಬಿದ ಪ್ರತಿಯೊಬ್ಬ ನಾಗರಿಕರು ಪಾಲ್ಗೊಂಡು, ಪ್ರಜಾಪ್ರಭುತ್ವದ ಮೇಲೆ ವಿಶ್ವಾಸವಿಟ್ಟು ಸಮಾಜದಲ್ಲಿನ ಎಲ್ಲಾ ಜಾತಿ ವರ್ಗದ ಜನರನ್ನು ಸಮಾನವಾಗಿ ಕಾಣುವಂತಹ ವ್ಯಕ್ತಿಗೆ ಮತ ಚಲಾಯಿಸಬೇಕು'' ಎಂದರು.

9ನೇ ತರಗತಿ ವಿದ್ಯಾರ್ಥಿನಿ ನವ್ಯ ಮಾತನಾಡಿ, ದೇಶದ ಅಭಿವೃದ್ಧಿಗಾಗಿ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಜನರು ಮತ ಚಲಾಯಿಸುತ್ತಾರೆ. ಅದೇ ರೀತಿ ನಮ್ಮಲ್ಲಿ ಯಾರು ಗೆಲುವು ಸಾಧಿಸುತ್ತಾರೋ ಅವರೊಂದಿಗೆ ಸೇರಿಕೊಂಡು ನಮ್ಮ ಶಾಲೆಯ ಅಭಿವೃದ್ಧಿಗಾಗಿ ಶ್ರಮಿಸು ತ್ತೇವೆ" ಎಂದು ಹೇಳಿದರು.

ಸಂಸತ್ ರಚನೆ ಬಗ್ಗೆ ಅರಿವು: ಮುಖ್ಯಶಿಕ್ಷಕರಾದ ಪಿ.ಹನುಮಂತಪ್ಪ ರವರು ಚುನಾವಣಾ ಫಲಿತಾಂಶ ಘೋಷಣೆ ಮಾಡಿ ವಿಜೇತರನ್ನು ಅಭಿನಂದಿಸಿ ಮಾತನಾಡಿ, ಇಲಾಖೆಯ ನಿಯಮದಂತೆ ಶಾಲೆಯಲ್ಲಿ ಶಾಲಾ ಸಂಸತ್ ರಚನೆ ಮಾಡಬೇಕಾಗಿದೆ. ಚುನಾವಣೆಗಳನ್ನು ಮಾಡುತ್ತಾರೆ, ಹೇಗೆ ನಡೆಯುತ್ತವೆ, ಚುನಾವಣೆಯಲ್ಲಿ ಆಯ್ಕೆಯಾಗಿ ಬರುವವರು ಮಾಡಬೇಕಾಗಿರುವ ಕೆಲಸಗಳೇನು ಎನ್ನುವ ಕುರಿತು ಅಗತ್ಯ ತರಬೇತಿ ಮತ್ತು ಪ್ರಾತ್ಯಕ್ಷಿಕೆ ಮೂಲಕ ಜಾಗೃತಿ ಮೂಡಿಸಲಾಗಿದೆ. ಜತೆಗೆ ಪ್ರತಿಯೊಬ್ಬರಲ್ಲಿ ಸ್ಪರ್ಧಾತ್ಮಕ ಹಾಗೂ ಕ್ರೀಡಾ ಮನೋಭಾವ ಬೆಳೆಸಿಕೊಳ್ಳುವ ಮೂಲಕ ಶಾಲಾ ಹಂತದಲ್ಲಿಯೇ ಸ್ವಾಸ್ತ್ರ ಮತ್ತು ಸಾಮರಸ್ಯದ ಸಮಾಜಕ್ಕೆ ಸತ್ಪಜೆಗಳಾಗಿ ರೂಪುಗೊಳ್ಳಬೇಕಾಗಿದೆ ತಿಳಿಸಿದರು. ಎಂದು

''ಸಂಸತ್ ರಚನೆ ಸಂಬಂಧವಾಗಿ ಚುನಾವಣಾ ಅಧಿಸೂಚನೆಯಂತೆ ಸಚಿವ ಸಂಪುಟವನ್ನು ರಚಿಸಿ ಶಾಲಾ ಅಭಿವೃದ್ಧಿ ಕಾರ್ಯಗಳಿಗಾಗಿ ವಿಜೇತರಲ್ಲಿ ಸೇವಾ ಮನೋಭಾವನೆಯನ್ನು ಮೂಡಿಸಿ ಸಾಂಘಿಕ ನಾಯಕತ್ವದಲ್ಲಿ ಜವಾಬ್ದಾರಿಗಳನ್ನು ನಿರ್ವಹಿಸುವಂತೆ ಸಂಸತ್'ನ್ನು ರಚಿಸಲಾಗುವುದು. ನಿರ್ದಿಷ್ಟ ಆಜೆಂಡಾದೊಂದಿಗೆ ಮಾಹೆಯಾನ ಕಲಾಪ ನಡೆಸಿ ಚರ್ಚಿಸಿ ಶಾಲೆಯ ಶ್ರೇಯೋ ಭಿವೃದ್ಧಿಗೆ ಶ್ರಮಿಸುವಂತೆ ಮಾರ್ಗದರ್ಶಿಸಲಾಗುತ್ತದೆ ಎಂದು ಶಿಕ್ಷಕರು ಹಾಗೂ ಜಿಲ್ಲಾ ಚುನಾವಣಾ ತರಬೇತಿದಾರರಾದ ಜಿ.ಸಿ.ರಾಮಚಂದ್ರಯ್ಯ ತಿಳಿಸಿದರು.

ಇದೇ ವೇಳೆ, ಮತಗಟ್ಟೆಯ ಅಧಿಕಾರಿಗಳಾಗಿ ಶಿಕ್ಷಕಿಯರಾದ ಎಸ್.ಮಂಜುಳಾ, ಪಿ.ಅಂಬುಜಾ, ಬಿ.ಎನ್.ಸುಮಾ, ಆಯಿಷಾ ಜಬೀನ್, ಎಚ್. ವಾಣಿಶ್ರೀ ಶಬ್ಲಿನ್ ತಾಜ್, ಎಚ್.ರ್ಆ.ಲಕ್ಷ್ಮಿ ದೇವಿ, ಎನ್.ಜಯಮ್ಮ, ಜಗದೀಶ್ವರಿ, ಸುಮಂಗಲ, ಎಸ್ ಪದ್ಮಾವತಿ, ರೂಪ, ಅನಿತ ಕಾರ್ಯನಿರ್ವಹಿಸಿದರು.