ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

World Environment Day: ಕಾಂಗ್ರೆಸ್ ಸರ್ಕಾರದ ವಿರುದ್ಧ ಸೀಕಲ್ ರಾಮಚಂದ್ರಗೌಡ ವಾಗ್ದಾಳಿ; ಜಂಗಮಕೋಟೆ ರೈತರ ಹೋರಾಟಕ್ಕೆ ಬಿಜೆಪಿ ಬೆಂಬಲ

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದ್ದು, ಪ್ರತಿಯೊಂದು ಮನೆಯಲ್ಲೂ ಕನಿಷ್ಠ ಒಂದು ಗಿಡವನ್ನು ನೆಟ್ಟು ಬೆಳೆಸುವ ಮೂಲಕ ಪರಿಸರ ಉಳಿವಿಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು. ಇದೇ ಸಂದರ್ಭದಲ್ಲಿ ಬಿಜೆಪಿ ಬೂತ್ ಮಟ್ಟದ ಅಧ್ಯಕ್ಷರ ತಾಯಂದಿರ ಹೆಸರಿನಲ್ಲಿ ಗಿಡಗಳನ್ನು ನೆಡುವ ಮೂಲಕ ಪರಿಸರ ಜಾಗೃತಿ ಮೂಡಿಸಲಾಯಿತು.

ಕಾಂಗ್ರೆಸ್ ಸರ್ಕಾರದ ವಿರುದ್ಧ ಸೀಕಲ್ ರಾಮಚಂದ್ರಗೌಡ ವಾಗ್ದಾಳಿ

-

Profile
Ashok Nayak Jun 6, 2026 11:31 PM

ಶಿಡ್ಲಘಟ್ಟ: ರಾಜ್ಯ ಸರ್ಕಾರದ ಆಡಳಿತ ವೈಫಲ್ಯದಿಂದ ಜನರಲ್ಲಿ ಅಸಮಾಧಾನ ಹೆಚ್ಚುತ್ತಿದ್ದು, ಕಾಂಗ್ರೆಸ್ ಸರ್ಕಾರ ಜನರ ನಿರೀಕ್ಷೆಗಳನ್ನು ಈಡೇರಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ಆರೋಪಿಸಿದರು.

ನಗರದ ಸೇವಾ ಸೌಧದಲ್ಲಿರುವ ಬಿಜೆಪಿ ಕಚೇರಿಯಲ್ಲಿ ವಿಶ್ವ ಪರಿಸರ ದಿನಾಚರಣೆ(World Environment Day) ಅಂಗವಾಗಿ ಆಯೋಜಿಸಿದ್ದ "ತಾಯಿಯ ಹೆಸರಲ್ಲಿ ಗಿಡ ನೆಡುವ" ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿದ್ದು, ರೈತರು, ಕಾರ್ಮಿಕರು, ಯುವಕರು ಹಾಗೂ ಸಾಮಾನ್ಯ ಜನರು ವಿವಿಧ ಸಮಸ್ಯೆಗಳಿಂದ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಟೀಕಿಸಿದರು. ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನೀಡಿದ್ದ ಭರವಸೆಗಳು ಕೇವಲ ಘೋಷಣೆಗಳಾಗಿಯೇ ಉಳಿದಿದ್ದು, ಜನರಿಗೆ ಯಾವುದೇ ಸ್ಪಷ್ಟ ಪರಿಹಾರ ದೊರಕಿಲ್ಲ ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: Shidlaghatta News: ಜೂ.10ರಂದು ಕಾಂಗ್ರೆಸ್ ಭವನದಲ್ಲಿ ಕೇಕ್ ಕಟಿಂಗ್, ಬಿರಿಯಾನಿ ಊಟ; ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಜ್ಜು|

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದ್ದು, ಪ್ರತಿಯೊಂದು ಮನೆಯಲ್ಲೂ ಕನಿಷ್ಠ ಒಂದು ಗಿಡವನ್ನು ನೆಟ್ಟು ಬೆಳೆಸುವ ಮೂಲಕ ಪರಿಸರ ಉಳಿವಿಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು. ಇದೇ ಸಂದರ್ಭದಲ್ಲಿ ಬಿಜೆಪಿ ಬೂತ್ ಮಟ್ಟದ ಅಧ್ಯಕ್ಷರ ತಾಯಂದಿರ ಹೆಸರಿನಲ್ಲಿ ಗಿಡಗಳನ್ನು ನೆಡುವ ಮೂಲಕ ಪರಿಸರ ಜಾಗೃತಿ ಮೂಡಿಸಲಾಯಿತು.

ಇದೇ ವೇಳೆ, ಜಂಗಮಕೋಟೆ ವ್ಯಾಪ್ತಿಯ 13 ಹಳ್ಳಿಗಳ ರೈತರು ಕೆಐಎಡಿಬಿ ವಿರುದ್ಧ ನಡೆಸುತ್ತಿರುವ ಹೋರಾಟಕ್ಕೆ ಬಿಜೆಪಿ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿತು. ಚಿಕ್ಕಬಳ್ಳಾಪುರದಿಂದ ವಿಧಾನಸೌಧ ದವರೆಗೆ ಹಮ್ಮಿಕೊಂಡಿದ್ದ ಬೈಕ್ ರ‍್ಯಾಲಿಗೆ ಬೆಂಬಲ ಸೂಚಿಸಿದ ಸೀಕಲ್ ರಾಮಚಂದ್ರಗೌಡ, ರೈತರ ಹೋರಾಟ ನ್ಯಾಯಯುತವಾಗಿದ್ದು, ರೈತರ ಹಕ್ಕುಗಳಿಗೆ ಯಾವುದೇ ಧಕ್ಕೆಯಾಗಲು ಬಿಜೆಪಿ ಅವಕಾಶ ನೀಡುವುದಿಲ್ಲ ಎಂದು ಹೇಳಿದರು. ಜಂಗಮಕೋಟೆ ರೈತರ ಬೇಡಿಕೆಗಳ ಪರವಾಗಿ ಬಿಜೆಪಿ ಸದಾ ನಿಲ್ಲಲಿದ್ದು, ಹೋರಾಟಕ್ಕೆ ಸಂಪೂರ್ಣ ಬೆಂಬಲ ಮುಂದುವರಿಯಲಿದೆ ಎಂದು ಭರವಸೆ ನೀಡಿದರು.

seekal

ಬಳಿಕ ಸೀಕಲ್ ರಾಮಚಂದ್ರಗೌಡ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಬೈಕ್ ರ‍್ಯಾಲಿ ನಡೆಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿವರೆಗೆ ತೆರಳಿ, ಕೆಐಎಡಿಬಿ ವಿರುದ್ಧ ಜಂಗಮಕೋಟೆ ರೈತರು ನಡೆಸುತ್ತಿರುವ ಹೋರಾಟಕ್ಕೆ ಐಕ್ಯತೆ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರು ಹಾಗೂ ಪತ್ರಕರ್ತರಿಗೆ ಬ್ಲೂಟೂತ್ ಸೌಲಭ್ಯ ಹೊಂದಿರುವ ಹೆಲ್ಮೆಟ್‌ಗಳನ್ನು ವಿತರಿಸಲಾಯಿತು. ಅಲ್ಲದೆ, ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ರಸ್ತೆ ಸುರಕ್ಷತೆ ಹಾಗೂ ಹೆಲ್ಮೆಟ್ ಬಳಕೆಯ ಮಹತ್ವದ ಕುರಿತು ಜಾಗೃತಿ ಮೂಡಿಸಲಾಯಿತು.

ಕಾರ್ಯಕ್ರಮದಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ಸೀಕಲ್ ಆನಂದ್ ಗೌಡ, ಸುರೇಂದ್ರ ಗೌಡ, ಎನ್. ನಾರಾಯಣಸ್ವಾಮಿ, ಚೆಲುವರಾಜ್, ಬಾಲು ಸೇರಿದಂತೆ ಪಕ್ಷದ ಮುಖಂಡರು, ಪದಾಧಿಕಾರಿಗಳು, ಬೂತ್ ಅಧ್ಯಕ್ಷರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.