ಅಧಿಕಾರಿಗಳ ಮೌನ, ಪೊಲೀಸ್ ಇಲಾಖೆಯ ನಿರ್ಲಕ್ಷ್ಯ: ಗ್ಯಾಸ್ ವಿತರಣೆ ಗೊಂದಲಕ್ಕೆ ಉತ್ತರವೇ ಇಲ್ಲ
ಗ್ಯಾಸ್ ಸಮರ್ಪಕವಾಗಿ ವಿತರಣೆ ಆಗುತ್ತಿಲ್ಲ ಎಂಬ ಆರೋಪವನ್ನು ಸಾರ್ವಜನಿಕರು ವ್ಯಕ್ತ ಪಡಿಸುತ್ತಿದ್ದರೂ, ಸಂಬಂಧಿಸಿದ ಅಧಿಕಾರಿಗಳು ಯಾವುದೇ ಸ್ಪಷ್ಟನೆ ನೀಡದೇ ಮೌನವಾಗಿರು ವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಏಕೆ ಸಿಲಿಂಡರ್ ಪೂರೈಕೆ ತಡವಾಗುತ್ತಿದೆ? ಎಷ್ಟು ದಿನಗಳಲ್ಲಿ ಸಮಸ್ಯೆ ಪರಿಹಾರವಾಗಲಿದೆ? ಎಂಬ ಪ್ರಶ್ನೆಗಳಿಗೆ ಅಧಿಕಾರಿಗಳಿಂದ ಇನ್ನೂ ಉತ್ತರ ಸಿಕ್ಕಿಲ್ಲ.
-
ಶಿಡ್ಲಘಟ್ಟ: ನಗರದ ಹೊರವಲಯದಲ್ಲಿರುವ ಗ್ಯಾಸ್ ಗೋಡೌನ್ ಮುಂದೆ ಕಳೆದ ಕೆಲವು ದಿನಗಳಿಂದ ಗ್ಯಾಸ್ ಸಿಲಿಂಡರ್ ವಿತರಣೆ ಸಮಸ್ಯೆ ಮುಂದುವರಿದಿದ್ದು, ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ಸಿಲಿಂಡರ್ ಪಡೆಯಲು ಜನರು ಬೆಳಗ್ಗಿನಿಂದಲೇ ಸಾಲಿನಲ್ಲಿ ನಿಂತಿದ್ದು, ರಸ್ತೆ ಮಧ್ಯಭಾಗದವರೆಗೂ ಜನರ ಸಾಲು ವಿಸ್ತರಿಸಿರುವುದು ಗಮನಾರ್ಹವಾಗಿದೆ.
ಗ್ಯಾಸ್ ಸಮರ್ಪಕವಾಗಿ ವಿತರಣೆ ಆಗುತ್ತಿಲ್ಲ ಎಂಬ ಆರೋಪವನ್ನು ಸಾರ್ವಜನಿಕರು ವ್ಯಕ್ತ ಪಡಿಸುತ್ತಿದ್ದರೂ, ಸಂಬಂಧಿಸಿದ ಅಧಿಕಾರಿಗಳು ಯಾವುದೇ ಸ್ಪಷ್ಟನೆ ನೀಡದೇ ಮೌನ ವಾಗಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಏಕೆ ಸಿಲಿಂಡರ್ ಪೂರೈಕೆ ತಡವಾಗು ತ್ತಿದೆ? ಎಷ್ಟು ದಿನಗಳಲ್ಲಿ ಸಮಸ್ಯೆ ಪರಿಹಾರವಾಗಲಿದೆ? ಎಂಬ ಪ್ರಶ್ನೆಗಳಿಗೆ ಅಧಿಕಾರಿಗಳಿಂದ ಇನ್ನೂ ಉತ್ತರ ಸಿಕ್ಕಿಲ್ಲ.
ಇದನ್ನೂ ಓದಿ: LPG Gas Cylinder Shortage: ಎಲ್‌ಪಿಜಿ ಸಿಲಿಂಡರ್ ಸಮಸ್ಯೆ ಬಗ್ಗೆ ದೂರು ಸಲ್ಲಿಕೆಗೆ ಆಹಾರ ಇಲಾಖೆಯಿಂದ ಸಹಾಯವಾಣಿ ಆರಂಭ
ಇನ್ನೊಂದೆಡೆ, ಗೋಡೌನ್ ಮುಂದೆ ಜನರು ರಸ್ತೆ ಮಧ್ಯದಲ್ಲೇ ನಿಂತಿದ್ದರೂ ಪೊಲೀಸ್ ಇಲಾಖೆ ಕೂಡ ಇದಕ್ಕೂ ನಮಗೂ ಸಂಬಂಧ ಇಲ್ಲ ಎಂಬಂತೆ ನಿರ್ಲಕ್ಷ್ಯವಾಗಿ ವರ್ತಿಸುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಜನರ ಸುರಕ್ಷತೆ ಕುರಿತು ಯಾವುದೇ ಕ್ರಮ ಕೈಗೊಳ್ಳದಿರು ವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.
ಗ್ಯಾಸ್ ಪಡೆಯಲು ಮಹಿಳೆಯರು, ಹಿರಿಯರು ಹಾಗೂ ಕಾರ್ಮಿಕರು ಗಂಟೆಗಟ್ಟಲೆ ಕಾಯು ತ್ತಿದ್ದು, ದ್ವಿಚಕ್ರ ವಾಹನಗಳ ಅಸ್ತವ್ಯಸ್ತ ಪಾರ್ಕಿಂಗ್ ಕೂಡ ಜನರಿಗೆ ಮತ್ತಷ್ಟು ತೊಂದರೆ ಉಂಟುಮಾಡುತ್ತಿದೆ. ರಸ್ತೆ ಮಧ್ಯಭಾಗದಲ್ಲಿ ಜನರು ನಿಂತಿರುವುದರಿಂದ ಯಾವುದೇ ಅನಾಹುತ ಸಂಭವಿಸಿದರೆ ಯಾರು ಹೊಣೆ ಹೊರುತ್ತಾರೆ ಎಂಬ ಪ್ರಶ್ನೆ ಕೇಳಿ ಬರುತ್ತಿದೆ.
ಪರಿಸ್ಥಿತಿ ಗಂಭೀರವಾಗಿದ್ದರೂ ಅಧಿಕಾರಿಗಳ ಮೌನ ಮತ್ತು ಪೊಲೀಸ್ ಇಲಾಖೆಯ ನಿರ್ಲಕ್ಷ್ಯ ಜನರಲ್ಲಿ ಅಸಮಾಧಾನ ಹೆಚ್ಚಿಸಿದೆ. ತಕ್ಷಣವೇ ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸ್ಪಷ್ಟನೆ ನೀಡಬೇಕು ಹಾಗೂ ಗ್ಯಾಸ್ ವಿತರಣೆ ಸಮಸ್ಯೆ ಸರಿಪಡಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
*
“ಸರಿಯಾದ ಸಮಯದಲ್ಲಿ ಗ್ಯಾಸ್ ಕೊಟ್ಟರೆ ನಾವು ಇಲ್ಲಿ ಇಷ್ಟು ಹೊತ್ತು ನಿಲ್ಲ ಬೇಕಾಗುವುದಿಲ್ಲ. ಟೋಕನ್ ವ್ಯವಸ್ಥೆ ಇಲ್ಲ, ಸರಿಯಾದ ಮಾಹಿತಿ ಕೊಡಲ್ಲ. ಯಾವಾಗ ಸಿಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ. ಗ್ಯಾಸ್ ಟೈಮಲ್ಲಿ ಸಿಗದೇ ಜನರು ಸಂಕಷ್ಟ ಅನುಭವಿಸುತ್ತಿರುವುದರಿಂದ ಸಂಬಂಧಿಸಿದ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು ಹಾಗೂ ಗ್ಯಾಸ್ ವಿತರಣೆ ಸರಿಯಾಗಿ ನಡೆಯುವಂತೆ ವ್ಯವಸ್ಥೆ ಮಾಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ."