ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Chikkaballapur News: ಜಿಲ್ಲೆಯಲ್ಲಿ ಸೆ.22ರಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ: ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಸೂಚನೆ

ಸಮೀಕ್ಷಾ ಕಾರ್ಯವು ರಾಜ್ಯಾದ್ಯಂತ ಏಕಕಾಲಕ್ಕೆ ನಡೆಯಲಿದೆ. ಅದರಂತೆ ಜಿಲ್ಲೆಯಲ್ಲಿಯೂ ಸಹ ನಡೆಯಬೇಕು. ಪ್ರತಿ ೧೫೦ ಮನೆಗಳಿಗೆ ಒಬ್ಬ ಗಣಿತಿದಾರರನ್ನು ಹಾಗೂ ಪ್ರತಿ ೨೦ ಗಣತಿದಾರರಿಗೆ ಒಬ್ಬರು ಮೇಲ್ವಿಚಾರಕರನ್ನು ನೇಮಿಸಬೇಕಾಗಿದ್ದು, ಈ ಕಾರ್ಯಕ್ಕೆ ಶಿಕ್ಷಕರು ಹಾಗೂ ಇತರೆ ಇಲಾಖೆ ಅಧಿಕಾರಿ ಗಳು ಮತ್ತು ಸಿಬ್ಬಂದಿಗಳ ಪಟ್ಟಿಯನ್ನು ಸಿದ್ಧಪಡಿಸಬೇಕು.

ಜಿಲ್ಲೆಯಲ್ಲಿ ಸೆ. ೨೨ ರಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ

ಸೆಪ್ಟೆಂಬರ್ ೨೨ ರಿಂದ ಜಿಲ್ಲೆಯಲ್ಲಿ  ಸಾಮಾಜಿಕ ಮತ್ತು ಶೈಕ್ಷಣಿಕ ಸಿದ್ಧತೆಗಳ ಬಗ್ಗೆ ಸಮೀಕ್ಷಾ ಕಾರ್ಯವನ್ನು ಸರ್ಕಾರದ ನಿರ್ದೇಶನದಂತೆ ಕೈಗೊಳ್ಳಲು ಅಗತ್ಯ ಪೂರ್ವ ಸಿದ್ಧತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಅವರು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದರು. -

Ashok Nayak Ashok Nayak Aug 29, 2025 10:41 PM

ಚಿಕ್ಕಬಳ್ಳಾಪುರ : ಸೆಪ್ಟೆಂಬರ್ ೨೨ ರಿಂದ ಜಿಲ್ಲೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಿದ್ಧತೆಗಳ ಬಗ್ಗೆ ಸಮೀಕ್ಷಾ ಕಾರ್ಯವನ್ನು ಸರ್ಕಾರದ ನಿರ್ದೇಶನದಂತೆ ಕೈಗೊಳ್ಳಲು ಅಗತ್ಯ ಪೂರ್ವ ಸಿದ್ಧತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಅವರು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರ ಹೊರವಲಯ ಜಿಲ್ಲಾಡಳಿತ ಭವನದಲ್ಲಿ ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣ ದಲ್ಲಿ ನಡೆದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಯುವ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಕುರಿತ ಸಮೀಕ್ಷಾ ಕಾರ್ಯವನ್ನು ಕೈಗೊಳ್ಳುತ್ತಿರುವ ಸಂಬಂಧ ಮಾಸ್ಟರ್ ಟ್ರೈನರ್ಸ್, ಮೇಲ್ವಿಚಾರಕರು ಹಾಗೂ ಗಣತಿದಾರರನ್ನು ನೇಮಿಸಲು ಹಾಗೂ ಇನ್ನಿತರೆ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳುವ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಮೀಕ್ಷಾ ಕಾರ್ಯವು ರಾಜ್ಯಾದ್ಯಂತ ಏಕಕಾಲಕ್ಕೆ ನಡೆಯಲಿದೆ. ಅದರಂತೆ ಜಿಲ್ಲೆಯಲ್ಲಿಯೂ ಸಹ ನಡೆಯಬೇಕು. ಪ್ರತಿ ೧೫೦ ಮನೆಗಳಿಗೆ ಒಬ್ಬ ಗಣಿತಿದಾರರನ್ನು ಹಾಗೂ ಪ್ರತಿ ೨೦ ಗಣತಿದಾರರಿಗೆ ಒಬ್ಬರು ಮೇಲ್ವಿಚಾರಕರನ್ನು ನೇಮಿಸಬೇಕಾಗಿದ್ದು, ಈ ಕಾರ್ಯಕ್ಕೆ ಶಿಕ್ಷಕರು ಹಾಗೂ ಇತರೆ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಪಟ್ಟಿಯನ್ನು ಸಿದ್ಧಪಡಿಸಬೇಕು.

ಇದನ್ನೂ ಓದಿ: Chikkaballapur News: ಅಂಗನವಾಡಿ ಕೇಂದ್ರಗಳಿಗೆ ನಳ ಸಂಪರ್ಕ ಕಡ್ಡಾಯ : ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ವೈ.ಗಣಪತಿಭಟ್ ಸೂಚನೆ

ಈ ಗಣತಿದಾರರಿಗೆ ಹಾಗೂ ಮೇಲ್ವಿಚಾರಕರಿಗೆ ತರಬೇತಿಯನ್ನು ನೀಡಲು ಸಕಲಸಿದ್ಧತೆ ಮಾಡಿಕೊಳ್ಳ ಬೇಕು. ತರಬೇತಿ ನೀಡುವ ಮಾಸ್ಟರ್ ಟ್ರೈನರ್ ಗಳನ್ನು ಸರ್ಕಾರ ನಿರ್ದೇಶನದಂತೆ ಆಯ್ಕೆ ಮಾಡಿ ಕೊಳ್ಳಬೇಕು. ಬೆಸ್ಕಾಂ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಜಿಲ್ಲೆಯ ಎಲ್ಲ ಕುಟುಂಬಗಳ ಮನೆಗಳಿಗೆ ಶೈಕ್ಷಣಿಕ ಸಮೀಕ್ಷಾ ಸ್ಪೀಕರ್  ಅಂಟಿಸುತ್ತಿರುವ ಕಾರ್ಯದ ಬಗ್ಗೆ ಕಾಲೋಚಿತವಾಗಿ ಖಾತರಿಪಡಿಸಿಕೊಳ್ಳಬೇಕು.

ಜಿಲ್ಲೆಯ ಸು.೩,೭೦೦೦೦ ಕುಟುಂಬಗಳ ಮನೆಗಳಿಗೆ ಸ್ಟಿಕ್ಕರ್ ಅಂಟಿಸುವ ಕಾರ್ಯವನ್ನು ಸೆಪ್ಟೆಂಬರ್ ೫ ರೊಳಗೆ ಬೆಸ್ಕಾಂನವರು ಮುಗಿಸಬೇಕು.ಈ ಸ್ಟಿಕ್ಕರ್‌ಗಳನ್ನು ಯಾವುದೇ ಸಾರ್ವಜನಿಕರು ತೆಗೆದು ಹಾಕುವುದು, ಮುಚ್ಚುವುದು  ಅಥವಾ ನಾಶಪಡಿಸುವುದು ಮಾಡಬಾರದು. ಗಣತಿದಾರರು  ಕೇಳುವ ಮಾಹಿತಿಯನ್ನು ನೀಡುವ ಮೂಲಕ ಜಿಲ್ಲಾಡಳಿತದ ಈ ಕಾರ್ಯ ಕ್ಕೆ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿಗಳು ಈ ವೇಳೆ ಮನವಿ ಮಾಡಿದರು.

ತಾಲ್ಲೂಕು ಮಟ್ಟದಲ್ಲಿ ನಗರ ವ್ಯಾಪ್ತಿಗೆ ತಹಶೀಲ್ದಾರ್‌ರರು ಹಾಗೂ ಗ್ರಾಮೀಣ ಭಾಗದಲ್ಲಿ ಕಾರ್ಯ ನಿರ್ವಾಹಕ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಬೇಕು. ಒಟ್ಟಾರೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಿಂದ ಯಾವುದೇ ಕುಟುಂಬ, ಯಾವುದೇ ವ್ಯಕ್ತಿ ಜಿಲ್ಲೆಯಲ್ಲಿ ಕೈಬಿಟ್ಟು ಹೋಗದಂತೆ ನಿಗಾವಹಿಸಬೇಕು,ಆ ನಿಟ್ಟಿನಲ್ಲಿ ಸಕಲ ಪೂರ್ವ ಸಿದ್ಧತೆಗಳನ್ನು ಈಗಿನಿಂದಲೆ ಕೈಗೊಳ್ಳಲು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ಜಿಲ್ಲಾಧಿ ಕಾರಿಗಳು ನೀಡಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಎನ್. ಭಾಸ್ಕರ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಅತಿಕ್ ಪಾಷಾ, ಹಿಂದುಳಿದ ವರ್ಗಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಮುನಿರತ್ನಮ್ಮ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಂಜುನಾಥ್ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.