ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Chikkaballapur News: ಮಳೆ ಕೊರತೆಯಿಂದ ಬಿತ್ತನೆ ವೈಫಲ್ಯ: ಬೆಳೆ ವಿಮೆಗೆ ರೈತರ ನೋಂದಣಿ ಹೆಚ್ಚಳ: ಜಿ.ಪ್ರಭು

ಜಿಲ್ಲೆಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಕಾರಣ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜೂನ್‌ ನಿಂದ ಆ.12ರವರೆಗೆ ಜಿಲ್ಲೆಯಲ್ಲಿ ವಾಡಿಕೆಯಂತೆ 186.9 ಮಿ.ಮೀ. ಮಳೆಯಾಗಬೇಕಾಗಿದ್ದರೂ ಕೇವಲ 114 ಮಿ.ಮೀ. ಮಳೆಯಾಗಿದೆ. ಇದರಿಂದ ಒಟ್ಟಾರೆ ಶೇ.39.21ರಷ್ಟು ಮಳೆ ಕೊರತೆ ದಾಖಲಾಗಿದೆ. ಜುಲೈ ತಿಂಗಳಲ್ಲಿ ವಾಡಿಕೆಯ 86 ಮಿ.ಮೀ. ಮಳೆಗೆ ಬದಲಾಗಿ ಕೇವಲ 13 ಮಿ.ಮೀ. ಮಳೆಯಾಗಿದ್ದು, ಶೇ.85ರಷ್ಟು ಮಳೆ ಕೊರತೆ ಉಂಟಾಗಿದೆ.

ಮಳೆ ಕೊರತೆಯಿಂದ ಬಿತ್ತನೆ ವೈಫಲ್ಯ: ಬೆಳೆ ವಿಮೆಗೆ ರೈತರ ನೋಂದಣಿ ಹೆಚ್ಚಳ

ಜಿಲ್ಲೆಯಲ್ಲಿ ಮುಂಗಾರು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ತೀವ್ರ ಹಿನ್ನಡೆ ಕಂಡಿದ್ದು,ಜಿಲ್ಲೆಯಲ್ಲಿ 1,48,341 ರೈತರಿಂದ ಬೆಳೆ ವಿಮೆ ಪ್ರಸ್ತಾವನೆಗಳು ಸ್ವೀಕೃತವಾಗಿವೆ ಎಂದು ಜಿಲ್ಲಾಧಿಕಾರಿ ಜಿ.ಪ್ರಭು ತಿಳಿಸಿದರು. -

Profile
Ashok Nayak Aug 14, 2026 8:27 PM

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಮುಂಗಾರು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ತೀವ್ರ ಹಿನ್ನಡೆ ಕಂಡಿದ್ದು, ಜಿಲ್ಲೆಯಲ್ಲಿ 1,48,341 ರೈತರಿಂದ ಬೆಳೆ ವಿಮೆ ಪ್ರಸ್ತಾವನೆಗಳು ಸ್ವೀಕೃತವಾಗಿವೆ ಎಂದು ಜಿಲ್ಲಾಧಿಕಾರಿ ಜಿ.ಪ್ರಭು ತಿಳಿಸಿದರು.

ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ನಡೆದ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬಿತ್ತನೆ ವೈಫಲ್ಯ ಕುರಿತು ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದ ಬಳಿಕ ಮಾತನಾಡಿದರು.

ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಬಿತ್ತನೆ ಪ್ರಮಾಣದಲ್ಲೂ ಭಾರಿ ಕುಸಿತ ಉಂಟಾಗಿದೆ. ಈಗಾಗಲೇ ಬಿತ್ತನೆ ಮಾಡಿರುವ ಬೆಳೆಗಳು ಸಮರ್ಪಕವಾಗಿ ಮೊಳಕೆಯೊಡೆಯದೆ ಒಣಗುವ ಆತಂಕ ಎದುರಾ ಗಿರುವ ಹಿನ್ನೆಲೆಯಲ್ಲಿ ರೈತರು ಬೆಳೆ ವಿಮೆಯತ್ತ ಹೆಚ್ಚಿನ ಆಸಕ್ತಿ ತೋರಿದ್ದಾರೆ ಎಂದರು.

ಇದನ್ನೂ ಓದಿ: Chikkaballapur News: ವಿದ್ಯಾರ್ಥಿ ಪರಿಷತ್ತು ಅಕಾಡೆಮಿಕ್ ಹಾಗೂ ಸೇವಾ ಪರಂಪರೆಯನ್ನು ಎತ್ತಿಹಿಡಿಯಲಿ: ಡಾ.ಕೋಡಿ ರಂಗಪ್ಪ

ಜಿಲ್ಲೆಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಕಾರಣ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜೂನ್‌ನಿಂದ ಆ.12ರವರೆಗೆ ಜಿಲ್ಲೆಯಲ್ಲಿ ವಾಡಿಕೆಯಂತೆ 186.9 ಮಿ.ಮೀ. ಮಳೆಯಾಗಬೇಕಾಗಿದ್ದರೂ ಕೇವಲ 114 ಮಿ.ಮೀ. ಮಳೆಯಾಗಿದೆ. ಇದರಿಂದ ಒಟ್ಟಾರೆ ಶೇ.39.21ರಷ್ಟು ಮಳೆ ಕೊರತೆ ದಾಖಲಾ ಗಿದೆ.

ಜುಲೈ ತಿಂಗಳಲ್ಲಿ ವಾಡಿಕೆಯ 86 ಮಿ.ಮೀ. ಮಳೆಗೆ ಬದಲಾಗಿ ಕೇವಲ 13 ಮಿ.ಮೀ. ಮಳೆಯಾಗಿದ್ದು, ಶೇ.85ರಷ್ಟು ಮಳೆ ಕೊರತೆ ಉಂಟಾಗಿದೆ. ಆ.12ರವರೆಗೆ ವಾಡಿಕೆಯ 37.3 ಮಿ.ಮೀ. ಮಳೆಯಾಗ ಬೇಕಾಗಿದ್ದರೆ ಕೇವಲ 19.2 ಮಿ.ಮೀ. ಮಳೆಯಾಗಿದೆ. ಇದರಿಂದ ಶೇ.49ರಷ್ಟು ಮಳೆ ಕೊರತೆ ದಾಖಲಾಗಿದೆ.

14cbpm10ಕೃಷಿ ಇಲಾಖೆ ಬರ ಪರಿಸ್ಥಿತಿ ಸಭೆ- (4) ok

ಬಿತ್ತನೆ ಕಾರ್ಯಕ್ಕೂ ಹಿನ್ನಡೆ

ಮಳೆ ಕೊರತೆಯ ಪರಿಣಾಮ ಜಿಲ್ಲೆಯಲ್ಲಿ ಕೃಷಿ ಬಿತ್ತನೆ ಕಾರ್ಯಕ್ಕೂ ಭಾರಿ ಹಿನ್ನಡೆಯಾಗಿದೆ. ಪ್ರಸಕ್ತ ಸಾಲಿನಲ್ಲಿ ಒಟ್ಟು 1,26,854 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡುವ ಗುರಿ ಹೊಂದಲಾಗಿದ್ದು, ಈವರೆಗೆ ಕೇವಲ 15283 ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬಿತ್ತನೆ** ಮಾಡಲಾಗಿದೆ. ಇದು ಶೇ.12.05 ರಷ್ಟು ಸಾಧನೆಯಾಗಿದೆ.

ಬಿತ್ತನೆಯಾದ ಪ್ರದೇಶದಲ್ಲಿ ಮೆಕ್ಕೆಜೋಳ 8109 ಹೆಕ್ಟೇರ್, ರಾಗಿ 3252 ಹೆಕ್ಟೇರ್, ನೆಲಗಡಲೆ 2282 ಹೆಕ್ಟೇರ್ ಹಾಗೂ ಇತರೆ ಬೆಳೆಗಳು 1640 ಹೆಕ್ಟೇರ್ ಪ್ರದೇಶದಲ್ಲಿವೆ. ಆದರೆ ಮಳೆ ಕೊರತೆಯಿಂದ ಹಲವು ಪ್ರದೇಶಗಳಲ್ಲಿ ಬಿತ್ತನೆ ಮಾಡಿರುವ ಬೆಳೆಗಳು ಸಮರ್ಪಕವಾಗಿ ಮೊಳಕೆಯೊಡೆಯದೆ ಒಣಗುತ್ತಿರುವ ಆತಂಕ ರೈತರನ್ನು ಕಾಡುತ್ತಿದೆ.

ಕೆಲವು ತಾಲೂಕುಗಳಲ್ಲಿ ಸಾಧಾರಣ ಮಳೆಯಾಗಿದ್ದರೂ, ಇನ್ನೂ ಕೆಲವು ತಾಲೂಕುಗಳಲ್ಲಿ ತುಂತುರು ಮಳೆಗೆ ಮಾತ್ರ ಸೀಮಿತವಾಗಿರುವುದರಿಂದ ರೈತರು ಮುಂದಿನ ಬಿತ್ತನೆ ಕೈಗೊಳ್ಳಬೇಕೇ ಅಥವಾ ಬೇಡವೇ ಎಂಬ ಗೊಂದಲದಲ್ಲಿದ್ದಾರೆ.

ಬೆಳೆ ವಿಮೆಯತ್ತ ರೈತರ ಒಲವು

ಮಳೆ ಕೊರತೆಯಿಂದ ಬಿತ್ತನೆ ಮಾಡಿರುವ ಬೆಳೆಗಳು ಕೈಕೊಡುವ ಆತಂಕದ ಹಿನ್ನೆಲೆಯಲ್ಲಿ ರೈತರು ಬೆಳೆ ವಿಮೆಯನ್ನು ಆರ್ಥಿಕ ಭದ್ರತೆಯ ಮಾರ್ಗವಾಗಿ ಪರಿಗಣಿಸುತ್ತಿದ್ದಾರೆ. ಈ ಬಾರಿ ಜಿಲ್ಲೆಯಲ್ಲಿ 1,48,341 ಬೆಳೆ ವಿಮೆ ಪ್ರಸ್ತಾವನೆಗಳು ಸ್ವೀಕೃತವಾಗಿವೆ. ಕಳೆದ ವರ್ಷ ಸುಮಾರು 80 ಸಾವಿರ ಪ್ರಸ್ತಾವನೆಗಳು ಬಂದಿದ್ದವು. ಹೀಗಾಗಿ ಕಳೆದ ವರ್ಷಕ್ಕೆ ಹೋಲಿಸಿದರೆ ಪ್ರಸಕ್ತ ಸಾಲಿನಲ್ಲಿ ಬೆಳೆ ವಿಮೆ ನೋಂದಣಿಯಲ್ಲಿ ಗಣನೀಯ ಏರಿಕೆ ಕಂಡುಬಂದಿದೆ.

ಬಿತ್ತನೆ ಮಾಡಿದ ಬೆಳೆ ಉಳಿಯದಿದ್ದರೆ ತಾವು ಮಾಡಿರುವ ಹೂಡಿಕೆ ಹಾಗೂ ಶ್ರಮ ವ್ಯರ್ಥವಾಗುವ ಆತಂಕ ರೈತರಲ್ಲಿದೆ. ಮುಂದಿನ ಬಿತ್ತನೆಗೂ ಮಳೆಯ ಭರವಸೆ ಇಲ್ಲದ ಪರಿಸ್ಥಿತಿಯಲ್ಲಿ ರೈತರು ಆಕಾಶದತ್ತ ಮುಖ ಮಾಡಿ ಉತ್ತಮ ಮಳೆಯ ನಿರೀಕ್ಷೆಯಲ್ಲಿದ್ದಾರೆ.

ಸಭೆಯಲ್ಲಿ ಜಂಟಿ ಕೃಷಿ ನಿರ್ದೇಶಕ ಅಬಿದ್, ಜಂಟಿ ತೋಟಗಾರಿಕೆ ನಿರ್ದೇಶಕ ದೇವರಾಜ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.