ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Chikkaballapur News: ಅರ್ಹ ಮತದಾರರು ಕೈಬಿಡದಂತೆ ವಿಶೇಷ ಸಮಗ್ರ ಪರಿಷ್ಕರಣೆ: ಜೂ.30ರಿಂದ ಮನೆ ಮನೆಗೆ ಗಣತಿ ನಮೂನೆ ವಿತರಣೆ : ತಹಶೀಲ್ದಾರ್ ರಶ್ಮಿ

ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ 2025ರ ಮತದಾರರ ಪಟ್ಟಿಯ ಪ್ರಕಾರ ಒಟ್ಟು 2,09,268 ಮತದಾರ ರಿದ್ದು, ಈ ಪೈಕಿ, 1,99,825 ಮತದಾರರ ಮ್ಯಾಪಿಂಗ್ ಕಾರ್ಯ ಪೂರ್ಣಗೊಂಡು ಶೇ. 95.49ರಷ್ಟು ಪ್ರಗತಿ ಸಾಧಿಸಲಾಗಿದೆ. ಮತದಾರರ ಪಟ್ಟಿಯಲ್ಲಿ ಅರ್ಹರ ಸೇರ್ಪಡೆ ಹಾಗೂ ಅನರ್ಹರ ಹೆಸರುಗಳ ತೆರವುಗಾಗಿ ಅಗತ್ಯ ಸಿದ್ಧತೆಗಳು ಪೂರ್ಣಗೊಂಡಿದ್ದು, ಸಿಬ್ಬಂದಿಗೆ ತರಬೇತಿ, ದಾಖಲೆಗಳ ಮುದ್ರಣ, ಮತಗಟ್ಟೆಗಳ ಪುನರ್‌ವಿಂಗಡಣೆ ಸೇರಿದಂತೆ ವಿವಿಧ ಹಂತದ ಕಾರ್ಯಗಳು ನಡೆಯುತ್ತಿವೆ

ಅರ್ಹ ಮತದಾರರು ಕೈಬಿಡದಂತೆ ವಿಶೇಷ ಸಮಗ್ರ ಪರಿಷ್ಕರಣೆ

-

Profile
Ashok Nayak Jun 24, 2026 10:23 PM

ಚಿಕ್ಕಬಳ್ಳಾಪುರ: ತಾಲ್ಲೂಕಿನ ಯಾವುದೇ ಅರ್ಹ ನಾಗರಿಕ ಮತದಾರರ ಪಟ್ಟಿಯಿಂದ ಹೊರ ಗುಳಿಯದಂತೆ ಹಾಗೂ ಅನರ್ಹ ಅಥವಾ ನಕಲಿ ಹೆಸರುಗಳು ಪಟ್ಟಿಯಲ್ಲಿ ಸೇರ್ಪಡೆಯಾಗದಂತೆ ಚುನಾವಣಾ ಆಯೋಗದ ನಿರ್ದೇಶನದಂತೆ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್-2026) ಕಾರ್ಯವನ್ನು ಪಾರದರ್ಶಕವಾಗಿ ಕೈಗೊಳ್ಳಲಾಗುತ್ತಿದೆ ಎಂದು ತಹಸೀಲ್ದಾರ್ ರಶ್ಮಿ ತಿಳಿಸಿದರು.

ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂ.30ರಿಂದ ಜುಲೈ 29ರವರೆಗೆ ಬೂತ್'ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆ ಮನೆಗೆ ಭೇಟಿ ನೀಡಿ ಪ್ರತಿಯೊಬ್ಬ ಮತದಾರರಿಗೂ ಗಣತಿ ನಮೂನೆಗಳನ್ನು ವಿತರಿಸಿ, ಭರ್ತಿ ಮಾಡಿದ ನಮೂನೆಗಳನ್ನು ಮರಳಿ ಸ್ವೀಕರಿಸಲಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: Chinthamani News: ಜುಲೈ 27ರಿಂದ 29ರ ತನಕ ಕೈವಾರದಲ್ಲಿ ಗುರುಪೂಜಾ-ಸಂಗೀತೋತ್ಸವದ ಆಹ್ವಾನ ಪತ್ರಿಕೆ ಬಿಡುಗಡೆ

ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ 2025ರ ಮತದಾರರ ಪಟ್ಟಿಯ ಪ್ರಕಾರ ಒಟ್ಟು 2,09,268 ಮತದಾರ ರಿದ್ದು, ಈ ಪೈಕಿ, 1,99,825 ಮತದಾರರ ಮ್ಯಾಪಿಂಗ್ ಕಾರ್ಯ ಪೂರ್ಣಗೊಂಡು ಶೇ. 95.49ರಷ್ಟು ಪ್ರಗತಿ ಸಾಧಿಸಲಾಗಿದೆ. ಮತದಾರರ ಪಟ್ಟಿಯಲ್ಲಿ ಅರ್ಹರ ಸೇರ್ಪಡೆ ಹಾಗೂ ಅನರ್ಹರ ಹೆಸರುಗಳ ತೆರವುಗಾಗಿ ಅಗತ್ಯ ಸಿದ್ಧತೆಗಳು ಪೂರ್ಣಗೊಂಡಿದ್ದು, ಸಿಬ್ಬಂದಿಗೆ ತರಬೇತಿ, ದಾಖಲೆಗಳ ಮುದ್ರಣ, ಮತಗಟ್ಟೆಗಳ ಪುನರ್‌ವಿಂಗಡಣೆ ಸೇರಿದಂತೆ ವಿವಿಧ ಹಂತದ ಕಾರ್ಯಗಳು ನಡೆಯುತ್ತಿವೆ ಎಂದು ವಿವರಿಸಿದರು.

ಮತದಾರರು ಗಣತಿ ನಮೂನೆಗಳನ್ನು ಸರಿಯಾಗಿ ಭರ್ತಿ ಮಾಡಿ ನಿಗದಿತ ಅವಧಿಯೊಳಗೆ ಸಲ್ಲಿಸು ಅತ್ಯಂತ ಮುಖ್ಯವಾಗಿದ್ದು, ನಮೂನೆ ಸಲ್ಲಿಸದಿದ್ದಲ್ಲಿ ಸಂಬಂಧಿತ ವ್ಯಕ್ತಿಯ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಸೇರದೇ ಇರುವ ಸಾಧ್ಯತೆ ಇದೆ. ಆದ್ದರಿಂದ ಎಲ್ಲ ನಾಗರಿಕರು ಜಾಗರೂಕ ರಾಗಿ ಸಹಕರಿಸಬೇಕು ಎಂದು ಮನವಿ ಮಾಡಿದರು.

ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ 7ರಂದು ಪ್ರಕಟಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ನಗರಸಭೆ ಪೌರಾಯುಕ್ತ ಮನ್ಸೂರ್ ಅಲಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.