ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Shidlaghatta News: ಸಲ್ಲಾಪುರಮ್ಮ ದೇವಾಲಯದಲ್ಲಿ ವಿಶೇಷ ಪೂಜೆ; ಸಾರ್ವಜನಿಕರಿಗೆ ಬಿರಿಯಾನಿ ವಿತರಣೆ

ಸಲ್ಲಾಪುರಮ್ಮ ದೇವಿಯ ಕೃಪೆಯಿಂದ ತಾವು ಹೊತ್ತಿದ್ದ ಹರಿಕೆ ಈಡೇರಿದ್ದು, ಅದರ ಅಂಗ ವಾಗಿ ವಿಶೇಷ ಪೂಜೆ ನೆರವೇರಿಸಿ ಸಾರ್ವಜನಿಕರಿಗೆ ಅನ್ನಸಂತರ್ಪಣೆ ಮಾಡಲಾಗಿದೆ ಎಂದು ತಿಳಿಸಿ ದರು. ರಾಜ್ಯದಲ್ಲಿ ಸುಶಾಸನ, ರೈತರ ಕಲ್ಯಾಣ, ಯುವಕರಿಗೆ ಉದ್ಯೋಗಾವಕಾಶಗಳು ಹಾಗೂ ಅಭಿವೃದ್ಧಿ ಕಾರ್ಯಗಳು ಮತ್ತಷ್ಟು ವೇಗ ಪಡೆಯಲಿ ಎಂದು ದೇವಿಯಲ್ಲಿ ಪ್ರಾರ್ಥಿಸಲಾಗಿದೆ

ಸಾರ್ವಜನಿಕರಿಗೆ ಬಿರಿಯಾನಿ ವಿತರಣೆ

ಸಲ್ಲಾಪುರಮ್ಮ ದೇವಾಲಯದ ಆವರಣದಲ್ಲಿ ಸಾರ್ವಜನಿಕರಿಗೆ ಬಿರಿಯಾನಿ ವಿತರಿಸುತ್ತಿರುವ ಕಾಂಗ್ರೆಸ್ ಯುವ ಮುಖಂಡ ವಿಜಯಕುಮಾರ್ -

Profile
Ashok Nayak Jun 3, 2026 7:52 PM

ಶಿಡ್ಲಘಟ್ಟ: ನಾಲ್ಕು ವರ್ಷಗಳ ಹಿಂದೆ ಡಿ.ಕೆ.ಶಿವಕುಮಾರ್(D K Shivkumar) ಅವರು ಕರ್ನಾಟಕದ ಮುಖ್ಯಮಂತ್ರಿಯಾಗಬೇಕೆಂದು ನಗರದ ಸಲ್ಲಾಪುರಮ್ಮ ದೇವಿಗೆ ಹರಿಕೆ ಹೊತ್ತಿದ್ದೆ. ಇಂದು ಆ ಹರಿಕೆ ಫಲಿಸಿರುವುದು ಅಪಾರ ಸಂತೋಷ ತಂದಿದೆ" ಎಂದು ಕಾಂಗ್ರೆಸ್ ಯುವ ಮುಖಂಡ ವಿಜಯ್ ಕುಮಾರ್ ಹೇಳಿದರು.

ನಗರದ ಬಸ್ ನಿಲ್ದಾಣದಲ್ಲಿರುವ ಸಲ್ಲಾಪುರಮ್ಮ ದೇವಾಲಯದಲ್ಲಿ ಡಿ.ಕೆ.ಶಿವಕುಮಾರ್ ಅವರ ಮುಖ್ಯಮಂತ್ರಿ ಪದಗ್ರಹಣದ ಅಂಗವಾಗಿ ವಿಶೇಷ ಪೂಜೆ ಹಾಗೂ ಸಾರ್ವಜನಿಕರಿಗೆ ಬಿರಿಯಾನಿ ವಿತರಣೆ ಕಾರ್ಯಕ್ರಮವನ್ನು ಬುಧವಾರ  ಹಮ್ಮಿಕೊಳ್ಳಲಾಗಿತ್ತು.

ಇದನ್ನೂ ಓದಿ: Shidlaghatta News: ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದನೆ: ಪುಟ್ಟು ಅಂಜಿನಪ್ಪ

ಈ ಸಂದರ್ಭದಲ್ಲಿ ಮಾತನಾಡಿದ ವಿಜಯ್ ಕುಮಾರ್, ಕಾಂಗ್ರೆಸ್ ಪಕ್ಷದ ಸಂಘಟನೆಯನ್ನು ಬಲಪಡಿಸಲು ಡಿ.ಕೆ.ಶಿವಕುಮಾರ್ ಅವರು ಸಲ್ಲಿಸಿರುವ ಸೇವೆ ಅಪಾರವಾಗಿದೆ. ಅವರ ನಾಯಕತ್ವದಲ್ಲಿ ರಾಜ್ಯವು ಅಭಿವೃದ್ಧಿಯ ಹೊಸ ದಿಕ್ಕಿನತ್ತ ಸಾಗಲಿದ್ದು, ಜನರ ನಿರೀಕ್ಷೆ ಗಳಿಗೆ ತಕ್ಕ ಆಡಳಿತ ನೀಡಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಸಲ್ಲಾಪುರಮ್ಮ ದೇವಿಯ ಕೃಪೆಯಿಂದ ತಾವು ಹೊತ್ತಿದ್ದ ಹರಿಕೆ ಈಡೇರಿದ್ದು, ಅದರ ಅಂಗ ವಾಗಿ ವಿಶೇಷ ಪೂಜೆ ನೆರವೇರಿಸಿ ಸಾರ್ವಜನಿಕರಿಗೆ ಅನ್ನಸಂತರ್ಪಣೆ ಮಾಡಲಾಗಿದೆ ಎಂದು ತಿಳಿಸಿದರು. ರಾಜ್ಯದಲ್ಲಿ ಸುಶಾಸನ, ರೈತರ ಕಲ್ಯಾಣ, ಯುವಕರಿಗೆ ಉದ್ಯೋಗಾವಕಾಶಗಳು ಹಾಗೂ ಅಭಿವೃದ್ಧಿ ಕಾರ್ಯಗಳು ಮತ್ತಷ್ಟು ವೇಗ ಪಡೆಯಲಿ ಎಂದು ದೇವಿಯಲ್ಲಿ ಪ್ರಾರ್ಥಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ದೇವರಮಾಳೂರು ರಾಕೇಶ್, ಡಾಲ್ಫಿನ್ ಸ್ಕೂಲ್ ನಾಗರಾಜ್, ಮಧು ಸೇರಿದಂತೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಸಾರ್ವ ಜನಿಕರು ಭಾಗವಹಿಸಿ ಡಿ.ಕೆ. ಶಿವಕುಮಾರ್ ಅವರಿಗೆ ಶುಭಾಶಯ ಕೋರಿದರು.