ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Chikkaballapur News: ಫೆ.18 ರಂದು ಶ್ರೀ ಮಡಿವಾಳ ಮಾಚಿದೇವರ ಜಯಂತ್ಯೋತ್ಸವ

ಕಾರ್ಯಕ್ರಮದ ಉದ್ಘಾಟನೆಯನ್ನು ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಸಿ. ಸುಧಾಕರ್ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಉಪಸ್ಥಿತಿಯನ್ನು ಹಿಂದು ಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ಎಸ್ ತಂಗಡಗಿ ನೆರವೇರಿಸಲಿದ್ದಾರೆ.

ಫೆ.18 ರಂದು ಶ್ರೀ ಮಡಿವಾಳ ಮಾಚಿದೇವರ ಜಯಂತ್ಯೋತ್ಸವ

-

Ashok Nayak
Ashok Nayak Feb 16, 2026 9:57 PM

ಚಿಕ್ಕಬಳ್ಳಾಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶ್ರೀ ಮಡಿವಾಳ ಮಾಚಿದೇವರ ಜಯಂತ್ಯೋತ್ಸವವನ್ನು ಫೆ.18ರಂದು ಮಧ್ಯಾಹ್ನ 12 ಗಂಟೆಗೆ ನಗರದ ಕನ್ನಡ ಭವನದಲ್ಲಿ ಆಯೋಜಿಸಲಾಗಿದೆ.

ಮೆರವಣಿಗೆ ಕಾರ್ಯಕ್ರಮವು ಬೆಳಿಗ್ಗೆ 10 ಗಂಟೆಗೆ ಶ್ರೀ ಮಡಿವಾಳ ಮಾಚಿದೇವರ ಹೂವಿನ ಪಲ್ಲಕ್ಕಿ ಹಾಗೂ ಜನಪದ ಕಲಾತಂಡಗಳೊಂದಿಗೆ ಡಾ.ಬಿ.ಆರ್.ಅಂಬೇಡ್ಕರ್ ಭವನದ ಮುಂಭಾಗದಿಂದ ಕನ್ನಡ ಭವನದ ವರೆಗೆ ಜರುಗಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಸಿ. ಸುಧಾಕರ್ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಉಪಸ್ಥಿತಿಯನ್ನು ಹಿಂದು ಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ಎಸ್ ತಂಗಡಗಿ ನೆರವೇರಿಸಲಿದ್ದಾರೆ.

ಇದನ್ನೂ ಓದಿ: Chikkaballapur News: ಅರೂರು ಟಿಎಪಿಸಿಎಂಎಸ್ ಅಧ್ಯಕ್ಷರಾಗಿ ಜಿ.ವಿ.ಜಗದೀಶ್, ಉಪಾಧ್ಯಕ್ಷರಾಗಿ ಆದಿನಾರಾಯಣಪ್ಪ (ಕೊಂಡಪ್ಪ) ಅವಿರೋಧ ಆಯ್ಕೆ

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಪಿ.ಇ. ಪ್ರದೀಪ್ ಈಶ್ವರ್ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಡಾ. ಕೆ.ಸುಧಾಕರ್, ಕೋಲಾರ ಲೋಕಸಭಾ ಕ್ಷೇತ್ರದ ಸಂಸದ ಎಂ.ಮಲ್ಲೇಶ್ ಬಾಬು, ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ನಿಯಮಿತದ ಅಧ್ಯಕ್ಷ ಡಾ. ಬಿ.ಸಿ. ಮುದ್ದು ಗಂಗಾಧರ್, ಶಾಸಕರುಗಳಾದ ಎಸ್.ಎನ್. ಸುಬ್ಬಾರೆಡ್ಡಿ, ಬಿ.ಎನ್. ರವಿಕುಮಾರ್, ಕೆ.ಹೆಚ್. ಪುಟ್ಟಸ್ವಾಮಿಗೌಡ, ವಿಧಾನ ಪರಿಷತ್ತು ಶಾಸಕರಾದ ಚಿದಾನಂದ ಎಂ. ಗೌಡ, ಎಂ.ಎಲ್. ಅನಿಲ್ ಕುಮಾರ್, ಡಿ.ಟಿ. ಶ್ರೀನಿವಾಸ, ಡಾ. ಹೆಚ್.ನರಸಿಂಹಯ್ಯ ವಿಜ್ಞಾನ ಶೈಕ್ಷಣಿಕ ಸಾಂಸ್ಕೃತಿಕ ಮತ್ತು ಪ್ರವಾಸೋದ್ಯಮ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎನ್.ಹೆಚ್ ಶಿವಶಂಕರರೆಡ್ಡಿ, ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎನ್.ಸಂಪಂಗಿ, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್, ಚಿಕ್ಕಬಳ್ಳಾಪುರ ನಗರಾಭಿ ವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎನ್. ಕೇಶವರೆಡ್ಡಿ, ಕರ್ನಾಟಕ ರಾಜ್ಯ ಬೀಜ ನಿಗಮದ ಅಧ್ಯಕ್ಷ ಆಂಜಿನಪ್ಪ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಯಲುವಹಳ್ಳಿ ಎನ್. ರಮೇಶ್, ಕರ್ನಾಟಕ ರಾಜ್ಯ ಸಹಕಾರ ಕೈಮಗ್ಗ ನೇಕಾರರ ಮಹಾ ಮಂಡಳಿ ನಿಗಮದ ಅಧ್ಯಕ್ಷ ಬಿ.ಜಿ. ಗಣೇಶ್, ಮಡಿವಾಳ ಮಾಚಿದೇವರ ನಿಗಮ ಮಂಡಳಿ ಹಾಗೂ ಕರ್ನಾಟಕ ರಾಜ್ಯ ಮಡಿವಾಳ ಮಾಚಿದೇವರ ಸಂಘದ ಅಧ್ಯಕ್ಷ ಸಿ.ನಂಜಪ್ಪ ಭಾಗವಹಿಸಲಿದ್ದಾರೆ.

ಅತಿಥಿಗಳಾಗಿ ಸರ್ಕಾರದ ಕಾರ್ಯದರ್ಶಿಗಳು, ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತು ವಾರಿ ಕಾರ್ಯದರ್ಶಿಗಳು ಮತ್ತು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಡಾ.ಎನ್. ಮಂಜುಳ ಭಾಗವಹಿಸಲಿದ್ದಾರೆ.

ವಿಶೇಷ ಆಹ್ವಾನಿತರಾಗಿ ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳಿ ನಿ., ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಒಕ್ಕೂಟ ನಿಗಮದ ನಿರ್ದೇಶಕರಾದ ಹೆಚ್.ವಿ. ನಾಗರಾಜ್, ಮಡಿವಾಳ ಮಾಚಿದೇವ ಸಂಘದ ಜಿಲ್ಲಾಧ್ಯಕ್ಷ ದಿನೇಶ್, ಚಿಕ್ಕಬಳ್ಳಾಪುರ ತಾಲ್ಲೂಕು ಮಡಿವಾಳ ಮಾಚಿದೇವ ಸಂಘದ ಅಧ್ಯಕ್ಷ ಜಿ. ರಾಘವೇಂದ್ರ ರವರು ಭಾಗವಹಿಸಲಿದ್ದಾರೆ. ಉಪನ್ಯಾಸ ವನ್ನು ಶಿಡ್ಲಘಟ್ಟ ತಾಲ್ಲೂಕಿನ ಗೌಡನಹಳ್ಳಿ ಮುಖ್ಯೋಪಾಧ್ಯಾಯ ದೇವರಾಜು ನೀಡಲಿದ್ದಾರೆ.

ಜಿಲ್ಲಾ ಮತ್ತು ತಾಲ್ಲೂಕು ಮಡಿವಾಳ ಮಾಚಿದೇವರ ಸಂಘದ ಎಲ್ಲಾ ಪದಾಧಿಕಾರಿಗಳು ಮತ್ತು ಎಲ್ಲಾ ಸಮುದಾಯಗಳ, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು ಹಾಗೂ ಸಮಸ್ತ ನಾಗರಿಕರು ಭಾಗವಹಿಸುವರು.