ಸಿದ್ದರಾಮಯ್ಯ ವಿರುದ್ಧ ಅಪಪ್ರಚಾರ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಿ: ಎಸ್.ಪಿ. ಶ್ರೀನಿವಾಸ್
ಸಿದ್ದರಾಮಯ್ಯ ಅವರು ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ಬಡವರು, ರೈತರು, ಹಿಂದು ಳಿದ ವರ್ಗಗಳು, ದಲಿತರು, ಅಲ್ಪಸಂಖ್ಯಾತರು ಹಾಗೂ ಶೋಷಿತ ಸಮುದಾಯಗಳ ಕಲ್ಯಾಣಕ್ಕೆ ಆದ್ಯತೆ ನೀಡಿದ್ದಾರೆ. ಅನ್ನಭಾಗ್ಯ, ಕ್ಷೀರಭಾಗ್ಯ ಸೇರಿದಂತೆ ವಿವಿಧ ಜನಕಲ್ಯಾಣ ಕಾರ್ಯಕ್ರಮಗಳ ಮೂಲಕ ಜನಸಾಮಾನ್ಯರ ಬದುಕಿಗೆ ನೆರವಾಗಲು ಪ್ರಯತ್ನಿಸಿದ್ದಾರೆ ಎಂದು ತಿಳಿಸಿದ್ದಾರೆ.
-
ಚಿಕ್ಕಬಳ್ಳಾಪುರ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರ ವಿರುದ್ಧ ಸ್ಟಿಂಗ್ ಆಪರೇಷನ್(Sting Operation) ಹೆಸರಿನಲ್ಲಿ ಸುಳ್ಳು ಸುದ್ದಿ ಹರಡಿಸಿ, ಆಧಾರರಹಿತ ಆರೋಪಗಳ ಮೂಲಕ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಪ್ರಯತ್ನ ನಡೆದಿದ್ದರೆ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಯುವ ಮುಖಂಡ ಎಸ್.ಪಿ. ಶ್ರೀನಿವಾಸ್ ಆಗ್ರಹಿಸಿದ್ದಾರೆ.
ಸಿದ್ದರಾಮಯ್ಯ ಅವರು ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ಬಡವರು, ರೈತರು, ಹಿಂದು ಳಿದ ವರ್ಗಗಳು, ದಲಿತರು, ಅಲ್ಪಸಂಖ್ಯಾತರು ಹಾಗೂ ಶೋಷಿತ ಸಮುದಾಯಗಳ ಕಲ್ಯಾಣಕ್ಕೆ ಆದ್ಯತೆ ನೀಡಿದ್ದಾರೆ. ಅನ್ನಭಾಗ್ಯ, ಕ್ಷೀರಭಾಗ್ಯ ಸೇರಿದಂತೆ ವಿವಿಧ ಜನಕಲ್ಯಾಣ ಕಾರ್ಯಕ್ರಮಗಳ ಮೂಲಕ ಜನಸಾಮಾನ್ಯರ ಬದುಕಿಗೆ ನೆರವಾಗಲು ಪ್ರಯತ್ನಿಸಿದ್ದಾರೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: Chikkaballapur News: ಬೂದುಗುಂಬಳ, ಹೂವು, ಹಣ್ಣು, ಸಿಹಿ ಖರೀದಿಗೆ ಮುಗಿಬಿದ್ದ ಜನತೆ; ಪ್ರಮುಖ ರಸ್ತೆಗಳಲ್ಲಿ ಹಬ್ಬದ ಕಳೆ
ಪ್ರಜಾಪ್ರಭುತ್ವದಲ್ಲಿ ರಾಜಕೀಯ ನಾಯಕರನ್ನು ಪ್ರಶ್ನಿಸುವುದು, ಸರ್ಕಾರದ ನೀತಿಗಳನ್ನು ಟೀಕಿಸುವುದು ಪ್ರತಿಯೊಬ್ಬರ ಹಕ್ಕು. ಆದರೆ ಪರಿಶೀಲಿಸದ ಮಾಹಿತಿ, ತಿರುಚಿದ ದೃಶ್ಯಗಳು ಅಥವಾ ದೃಢೀಕರಿಸದ ಆರೋಪಗಳ ಮೂಲಕ ಜನರಲ್ಲಿ ಗೊಂದಲ ಸೃಷ್ಟಿಸುವುದು ಸರಿಯಲ್ಲ. ಸ್ಟಿಂಗ್ ಆಪರೇಷನ್ಗೆ ಸಂಬಂಧಿಸಿದ ದೃಶ್ಯಗಳು ಮತ್ತು ಮಾಹಿತಿಯ ಸತ್ಯಾಸತ್ಯತೆಯನ್ನು ಸಂಬಂಧಪಟ್ಟ ತನಿಖಾ ಸಂಸ್ಥೆಗಳು ಪರಿಶೀಲಿಸಬೇಕು ಎಂದು ಒತ್ತಾಯಿಸಿದ್ದಾರೆ.
ರಾಜಕೀಯ ಭಿನ್ನಾಭಿಪ್ರಾಯಗಳ ಹಿನ್ನೆಲೆಯಲ್ಲಿ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಪ್ರಯತ್ನಗಳನ್ನು ಮಾಡಬಾರದು. ಆರೋಪಗಳ ಕುರಿತು ವಾಸ್ತವಾಂಶಗಳನ್ನು ಪರಿಶೀಲಿಸಿ, ಉದ್ದೇಶಪೂರ್ವಕವಾಗಿ ಸುಳ್ಳು ಮಾಹಿತಿ ಹರಡಿರುವುದು ಸಾಬೀತಾದರೆ ಸಂಬಂಧಪಟ್ಟವರ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.
ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡದೆ, ಯಾವುದೇ ಆರೋಪದ ಬಗ್ಗೆ ಅಧಿಕೃತ ಮಾಹಿತಿ ಹಾಗೂ ವಿಶ್ವಾಸಾರ್ಹ ಸಾಕ್ಷ್ಯಗಳ ಆಧಾರದ ಮೇಲೆ ನಿರ್ಧಾರ ಕೈಗೊಳ್ಳಬೇಕು. ಸಾರ್ವಜನಿಕ ಜೀವನದಲ್ಲಿ ಸತ್ಯ ಮತ್ತು ಜವಾಬ್ದಾರಿಯುತ ನಡವಳಿಕೆಗೆ ಆದ್ಯತೆ ನೀಡಬೇಕು ಎಂದು ಎಸ್.ಪಿ. ಶ್ರೀನಿವಾಸ್ ಮನವಿ ಮಾಡಿದ್ದಾರೆ.