ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಮಾ.8 ರಂದು ಬಲಿಜ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

ಬಾಗೇಪಲ್ಲಿ, ಗುಡಿಬಂಡೆ ಹಾಗೂ ಚೇಳೂರು ತಾಲ್ಲೂಕಿನ ಬಲಿಜ ಸಮುದಾಯದ ಎಸ್.ಎಸ್.ಎಲ್.ಸಿ.ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು 2024-25ನೇ ಸಾಲಿನಲ್ಲಿ ಶೇಕಡಾ 60% ರಷ್ಟು ಅಂಕಗಳನ್ನು ಗಳಿಸಿದವರಿಗೆ ಪ್ರತಿಭಾ ಪುರಸ್ಕಾರ ಏರ್ಪಡಿಸಲಾಗಿದೆ. ನಮ್ಮ ಸಮುದಾಯದ ಮಕ್ಕಳು ಹಾಗೂ ಪೋಷಕರು ದಿನಾಂಕ ಮಾ.7ರ ಶನಿವಾರದ ಒಳಗೆ ಬಲಿಜ ಸಮುದಾಯದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಏರ್ಪಡಿಸಲಾಗಿದೆ

ಮಾ.8 ರಂದು ಬಲಿಜ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

-

Ashok Nayak
Ashok Nayak Mar 4, 2026 12:09 AM

ಬಾಗೇಪಲ್ಲಿ: ಶ್ರೀ ಕ್ಷೇತ್ರ ಕೈವಾರ ಸದ್ಗುರು ಶ್ರೀ ಯೋಗಿ ನಾರೇಯಣ ಯತೀಂದ್ರ ತಾತಯ್ಯ ನವರ 300ನೇ ಜಯಂತೋತ್ಸವ ಹಾಗೂ ಗುರುವಂದನಾ ಕಾರ್ಯಕ್ರಮ ಅಂಗವಾಗಿ  ಮಾ.೮ರಂದು ಬಲಿಜ ಸಮುದಾಯದ ಸರಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಏರ್ಪಡಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಎ ವಿಜಯಕುಮಾರ್ ತಿಳಿಸಿದರು.

ಪಟ್ಟಣದ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು.

ಬಾಗೇಪಲ್ಲಿ ತಾಲ್ಲೂಕು ಬಲಿಜ ಸರ್ಕಾರಿ ನೌಕರರ ಸಂಘದ ವತಿಯಿಂದ ಮಾ.8ರ ಭಾನುವಾರ ಪಟ್ಟಣದ ಹೊರವಲಯದ ಕೊಂಡಂವಾರಿಪಲ್ಲಿಯ ಎಸ್.ಎಲ್.ಎನ್. ಕಲ್ಯಾಣ ಮಂಟಪದಲ್ಲಿ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿ  ಬಲಿಜ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಏರ್ಪಡಿಸಲಾಗಿದೆ. ಇದರ ಪ್ರಯೋಜನವನ್ನು ಬಲಿಜ ಸಮುದಾಯದ ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕೆಂದು ಬಾಗೇಪಲ್ಲಿ ತಾಲ್ಲೂಕು ಬಲಿಜ ಸಮಯದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎ.ವಿಜಯ್ ಕುಮಾರ್ ತಿಳಿಸಿದರು.

ಇದನ್ನೂ ಓದಿ: Bagepally News: ಎಸ್.ಎನ್.ಸುಬ್ಬಾರೆಡ್ಡಿ ಬಗ್ಗೆ ಹಗುರ ಮಾತು ಅಪಪ್ರಚಾರ ನಿಲ್ಲಿಸಿ; ದಾಖಲೆಗಳೊಂದಿಗೆ ಚರ್ಚೆಗೆ ಬನ್ನಿ: ದಲಿತ ಸಂಘರ್ಷ ಸಮಿತಿ ಆಗ್ರಹ

ಬಾಗೇಪಲ್ಲಿ, ಗುಡಿಬಂಡೆ ಹಾಗೂ ಚೇಳೂರು ತಾಲ್ಲೂಕಿನ ಬಲಿಜ ಸಮುದಾಯದ ಎಸ್.ಎಸ್.ಎಲ್.ಸಿ.ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು 2024-25ನೇ ಸಾಲಿನಲ್ಲಿ ಶೇಕಡಾ 60% ರಷ್ಟು ಅಂಕಗಳನ್ನು ಗಳಿಸಿದವರಿಗೆ ಪ್ರತಿಭಾ ಪುರಸ್ಕಾರ ಏರ್ಪಡಿಸಲಾಗಿದೆ. ನಮ್ಮ ಸಮುದಾಯದ ಮಕ್ಕಳು ಹಾಗೂ ಪೋಷಕರು ದಿನಾಂಕ ಮಾ.7ರ ಶನಿವಾರದ ಒಳಗೆ ಬಲಿಜ ಸಮುದಾಯದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಏರ್ಪಡಿಸಲಾಗಿದೆ ಇದರ ಪ್ರಯೋಜನವನ್ನು ಬಲಿಜ ಸಮುದಾಯದ ವಿದ್ಯಾರ್ಥಿಗಳು ಹಾಗೂ ಪೋಷಕರು ಪ್ರಯೋ ಜನ ಪಡೆದು ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಬಲಿಜ ಸಮುದಾಯದ ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಸಿ.ಎನ್. ವಿಜಯ್ ಕುಮಾರ್, ಪದಾಧಿಕಾರಿಗಳಾದ ಮುನೇಂದ್ರ, ಎಂ.ವೆಂಕಟಾಚಲಪತಿ, ಜೆ.ಎ.ಶ್ರೀನಿವಾಸ್ ಹಾಗೂ ಇತರರು ಹಾಜರಿದ್ದರು.