ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Chikkaballapur News: ಅಧಿಕಾರಿಗಳನ್ನು ಹೀಯಾಳಿಸುವ ಶಾಸಕರ ಪ್ರವೃತ್ತಿ ಖಂಡನೀಯ: ರಾಜ್ಯ ಉಪಾಧ್ಯಕ್ಷ ವೆಂಕಟರಮಣಪ್ಪ

ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಹಾಗೂ ಪತ್ರಿಕಾ ರಂಗಗಳು ಪ್ರಜಾಪ್ರಭುತ್ವದ ಪ್ರಮುಖ ಆಧಾರ ಸ್ತಂಭಗಳಾಗಿವೆ. ಸಂವಿಧಾನದ ಆಶಯದಂತೆ ಪ್ರತಿಯೊಬ್ಬ ಪ್ರಜೆಯನ್ನೂ ಗೌರವದಿಂದ ಕಾಣುವ ಜವಾಬ್ದಾರಿ ಎಲ್ಲರ ಮೇಲಿದೆ. ಜನರ ಆಶಯ ಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ಜಿಲ್ಲಾಧಿಕಾರಿಗಳು ಸೇರಿದಂತೆ ವಿವಿಧ ಹಂತದ ಅಧಿಕಾರಿಗಳು ಪ್ರಮುಖ ಪಾತ್ರ ವಹಿಸುತ್ತಾರೆ

ಅಧಿಕಾರಿಗಳನ್ನು ಹೀಯಾಳಿಸುವ ಶಾಸಕರ ಪ್ರವೃತ್ತಿ ಖಂಡನೀಯ

-

Profile
Ashok Nayak Aug 30, 2026 9:19 PM

ಚಿಕ್ಕಬಳ್ಳಾಪುರ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಪ್ರತಿನಿಧಿಗಳು ಸರ್ಕಾರಿ ಅಧಿಕಾರಿಗಳನ್ನು ಗೌರವದಿಂದ ಕಾಣಬೇಕು. ಆದರೆ ಇತ್ತೀಚೆಗೆ ಕೆಲ ಶಾಸಕರು ಅಧಿಕಾರಿಗಳನ್ನು ಸಾರ್ವಜನಿಕವಾಗಿ ಹೀಯಾಳಿಸಿ ಮಾತನಾಡುವ ಪ್ರವೃತ್ತಿ ಹೆಚ್ಚಾಗುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಕರ್ನಾಟಕ ರಾಜ್ಯ ಹಳ್ಳಿ ಮಕ್ಕಳ ಸಂಘದ ರಾಜ್ಯ ಉಪಾಧ್ಯಕ್ಷ ವೆಂಕಟರಮಣಪ್ಪ ಆರೋಪಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಹಾಗೂ ಪತ್ರಿಕಾ ರಂಗಗಳು ಪ್ರಜಾಪ್ರಭುತ್ವದ ಪ್ರಮುಖ ಆಧಾರ ಸ್ತಂಭಗಳಾಗಿವೆ. ಸಂವಿಧಾನದ ಆಶಯದಂತೆ ಪ್ರತಿಯೊಬ್ಬ ಪ್ರಜೆಯನ್ನೂ ಗೌರವದಿಂದ ಕಾಣುವ ಜವಾಬ್ದಾರಿ ಎಲ್ಲರ ಮೇಲಿದೆ. ಜನರ ಆಶಯ ಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ಜಿಲ್ಲಾಧಿಕಾರಿಗಳು ಸೇರಿದಂತೆ ವಿವಿಧ ಹಂತದ ಅಧಿಕಾರಿಗಳು ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ತಿಳಿಸಿದ್ದಾರೆ.

ಜನರಿಂದ ಆಯ್ಕೆಯಾಗಿರುವ ಶಾಸಕರು ಅಧಿಕಾರಿಗಳ ಮೂಲಕ ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು. ಆದರೆ ಅಧಿಕಾರಿಗಳಿಗೆ ಒತ್ತಡ ಹೇರುವುದು, ಸಾರ್ವಜನಿಕವಾಗಿ ಕೀಳು ಭಾಷೆ ಬಳಸುವುದು ಹಾಗೂ ಅವಮಾನಿಸುವುದು ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Chikkaballapur News: ರಕ್ಷಾ ಬಂಧನ ಸಹೋದರತ್ವ, ಪ್ರೀತಿ–ವಿಶ್ವಾಸದ ಪ್ರತೀಕ: ನ್ಯಾಯಾಧೀಶ ಟಿ.ಪಿ.ರಾಮಲಿಂಗೇಗೌಡ

ಹಾಸನ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಕೆ. ಲತಾ ಕುಮಾರಿ ಅವರ ವಿಚಾರವನ್ನು ಪ್ರಸ್ತಾಪಿಸಿರುವ ಅವರು, ಜಿಲ್ಲಾಧಿಕಾರಿ ಸರ್ಕಾರದ ನೀತಿ, ನಿಯಮ ಹಾಗೂ ಕಾನೂನಿನ ಚೌಕಟ್ಟಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರು ಏಕವಚನದಲ್ಲಿ ಮಾತನಾಡಿರುವುದು ಖಂಡನೀಯ. ಜಿಲ್ಲಾಧಿಕಾರಿ ಪ್ರಬುದ್ಧವಾಗಿ ಪ್ರತಿಕ್ರಿಯಿಸಿರುವುದು ಸ್ವಾಗತಾರ್ಹ ಎಂದು ತಿಳಿಸಿದ್ದಾರೆ.

ಕೆ. ಲತಾ ಕುಮಾರಿ ಅವರು ಶೋಷಿತ ಸಮುದಾಯದಿಂದ ಬಂದವರಾಗಿದ್ದು, ಜನಸಾಮಾನ್ಯರ ಸಮಸ್ಯೆಗಳನ್ನು ಅರಿತಿದ್ದಾರೆ. ಅಧಿಕಾರಿಗಳನ್ನು ಅವಮಾನಿಸುವ ಪ್ರವೃತ್ತಿ ಮುಂದುವರಿದರೆ ಹಳ್ಳಿಗಾಡಿನ ಜನರು, ಪ್ರಗತಿಪರರು, ರೈತಪರ ಹಾಗೂ ದಲಿತ ಸಂಘಟನೆಗಳು ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ ಎಂದು ವೆಂಕಟರಮಣಪ್ಪ ಎಚ್ಚರಿಸಿದ್ದಾರೆ.