ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Bagepally News: ಯುವಜನತೆ ದೇಶದ ಬಹುದೊಡ್ಡ ಉತ್ಪಾದನಾ ಶಕ್ತಿ: ಎ.ಎ.ರಹೀಮ್

ಕರ್ನಾಟಕದಲ್ಲಿ ಯುವಜನತೆ ನಿರುದ್ಯೋಗದ ಸಮಸ್ಯೆಯಿಂದ ಸಂಕಷ್ಟ ಎದುರಿಸುತ್ತಿದೆ. ಶಿಕ್ಷಣಕ್ಕೆ ತಕ್ಕ ಉದ್ಯೋಗ ದೊರೆಯದೆ ಇಂಜಿನಿಯರಿಂಗ್ ಸೇರಿದಂತೆ ಉನ್ನತ ಶಿಕ್ಷಣ ಪಡೆದ ಪದವೀಧರರು ತಮ್ಮ ವಿದ್ಯಾರ್ಹತೆಗೆ ಸಂಬಂಧವಿಲ್ಲದ ಕೆಲಸಗಳಲ್ಲಿ ತೊಡಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೌಶಲ್ಯಕ್ಕೆ ತಕ್ಕ ಅವಕಾಶಗಳು ದೊರೆಯುತ್ತಿಲ್ಲ. ಕಾರ್ಮಿಕರು ಹಾಗೂ ದುಡಿಯುವ ವರ್ಗದ ಜನರಿಗೆ ಆತ್ಮಗೌರವ, ಸಾಮಾಜಿಕ ಭದ್ರತೆ ಮತ್ತು ಸಂಘಟಿತ ಹಕ್ಕುಗಳು ದೊರೆಯಬೇಕು

ಯುವಜನತೆ ದೇಶದ ಬಹುದೊಡ್ಡ ಉತ್ಪಾದನಾ ಶಕ್ತಿ: ಎ.ಎ.ರಹೀಮ್

-

Profile
Ashok Nayak Sep 27, 2026 11:12 PM

ಬಾಗೇಪಲ್ಲಿ: ಯುವಜನತೆ ದೇಶದ ಬಹುದೊಡ್ಡ ಉತ್ಪಾದನಾ ಶಕ್ತಿಯಾಗಿದ್ದು, ಅವರಿಗೆ ಶಿಕ್ಷಣ, ಕೌಶಲ್ಯಕ್ಕೆ ತಕ್ಕ ಉದ್ಯೋಗ, ಉದ್ಯೋಗ ಭದ್ರತೆ ಹಾಗೂ ಸಾಮಾಜಿಕ ರಕ್ಷಣೆ ದೊರೆಯಬೇಕು ಎಂದು ರಾಜ್ಯಸಭಾ ಸದಸ್ಯ ಹಾಗೂ ಡಿವೈಎಫ್‌ಐ ಅಖಿಲ ಭಾರತ ಅಧ್ಯಕ್ಷ ಎ.ಎ.ರಹೀಮ್ ಹೇಳಿದರು.

ಪಟ್ಟಣದಲ್ಲಿ ಸೆ.26ರಿಂದ 28ರವರೆಗೆ ನಡೆಯುತ್ತಿರುವ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್‌ (ಡಿವೈಎಫ್‌ಐ) ಕರ್ನಾಟಕ ರಾಜ್ಯ ಸಮಿತಿಯ 13ನೇ ರಾಜ್ಯ ಸಮ್ಮೇಳನವನ್ನು ಡೊಳ್ಳು ಬಾರಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಕರ್ನಾಟಕದಲ್ಲಿ ಯುವಜನತೆ ನಿರುದ್ಯೋಗದ ಸಮಸ್ಯೆಯಿಂದ ಸಂಕಷ್ಟ ಎದುರಿಸುತ್ತಿದೆ. ಶಿಕ್ಷಣಕ್ಕೆ ತಕ್ಕ ಉದ್ಯೋಗ ದೊರೆಯದೆ ಇಂಜಿನಿಯರಿಂಗ್ ಸೇರಿದಂತೆ ಉನ್ನತ ಶಿಕ್ಷಣ ಪಡೆದ ಪದವೀಧರರು ತಮ್ಮ ವಿದ್ಯಾರ್ಹತೆಗೆ ಸಂಬಂಧವಿಲ್ಲದ ಕೆಲಸಗಳಲ್ಲಿ ತೊಡಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೌಶಲ್ಯಕ್ಕೆ ತಕ್ಕ ಅವಕಾಶಗಳು ದೊರೆಯುತ್ತಿಲ್ಲ. ಕಾರ್ಮಿಕರು ಹಾಗೂ ದುಡಿಯುವ ವರ್ಗದ ಜನರಿಗೆ ಆತ್ಮಗೌರವ, ಸಾಮಾಜಿಕ ಭದ್ರತೆ ಮತ್ತು ಸಂಘಟಿತ ಹಕ್ಕುಗಳು ದೊರೆಯಬೇಕು ಎಂದರು.

ಇದನ್ನೂ ಓದಿ: Chikkaballapur News: ಸಮುದಾಯದ ಆರ್ಥಿಕ ಬಲವರ್ಧನೆಗೆ ಸಹಕಾರ ಸಂಘಗಳು ಅಗತ್ಯ: ಡಾ. ಸಿದ್ದಲಿಂಗಪ್ಪ

ಯುವಜನರ ದೊಡ್ಡ ವರ್ಗ ಶಿಕ್ಷಣದಿಂದ ವಂಚಿತವಾಗಿದ್ದು, ಅಸಂಘಟಿತ ವಲಯದಲ್ಲಿ ಯಾವುದೇ ಭದ್ರತೆಯಿಲ್ಲದೆ ದುಡಿಯುತ್ತಿದೆ. ಉದ್ಯೋಗಕ್ಕಾಗಿ ಬೆಂಗಳೂರು, ಮಂಗಳೂರು, ಗೋವಾ ಸೇರಿದಂತೆ ವಿವಿಧ ಪ್ರದೇಶಗಳಿಗೆ ವಲಸೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ವಲಸೆ ಕಾರ್ಮಿಕರ ಸಮಸ್ಯೆ ಗಳತ್ತ ಸರ್ಕಾರ ಗಮನ ಹರಿಸಬೇಕು. ಒಂದೆಡೆ ಕೋಟ್ಯಧಿಪತಿಗಳ ಸಂಖ್ಯೆ ಹೆಚ್ಚುತ್ತಿದ್ದರೆ, ಮತ್ತೊಂದೆಡೆ ಬಡವರು ಸಂಕಷ್ಟ ಅನುಭವಿಸುತ್ತಿದ್ದಾರೆ. ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುವ ನೀತಿಗಳು ಅಗತ್ಯ ಎಂದು ಹೇಳಿದರು.

ಯುವಜನರ ಸಮಸ್ಯೆಗಳ ಕುರಿತು ಚರ್ಚೆ

ಡಿವೈಎಫ್‌ಐ ರಾಜ್ಯ ಸಮ್ಮೇಳನದ ಅಂಗವಾಗಿ ಯುವಜನರು ಎದುರಿಸುತ್ತಿರುವ ಸಮಸ್ಯೆಗಳು, ಉದ್ಯೋಗ ಹಾಗೂ ದೇಶದ ಸಾಮಾಜಿಕ ಮತ್ತು ಆರ್ಥಿಕ ವಿದ್ಯಮಾನಗಳ ಕುರಿತು ವಿವಿಧ ವಿಚಾರ ಸಂಕಿರಣಗಳನ್ನು ಆಯೋಜಿಸಲಾಗಿತ್ತು. ದೇಶದ ಆರ್ಥಿಕತೆ ಮತ್ತು ಯುವಜನತೆ, ಕೋಮುವಾದ ಹಾಗೂ ಹುಸಿ ರಾಷ್ಟ್ರೀಯತೆಯ ಸವಾಲುಗಳು ಸೇರಿದಂತೆ ಹಲವು ಸಮಕಾಲೀನ ವಿಷಯಗಳ ಕುರಿತು ಗಂಭೀರ ಚರ್ಚೆಗಳು ನಡೆದವು.

27cbpm1s bage

ಪ್ರಗತಿಪರ ಚಿಂತಕ ಹಾಗೂ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಡಾ.ಅನಿಲ್ ಕುಮಾರ್ ಮಾತನಾಡಿ, ಈ ಭಾಗದಲ್ಲಿ ಕೈಗಾರಿಕೆಗಳ ಕೊರತೆ, ಉದ್ಯೋಗದ ಅಭಾವ ಹಾಗೂ ರೈತರ ಬೆಳೆಗಳಿಗೆ ಸೂಕ್ತ ಬೆಲೆ ದೊರೆಯದಿರುವುದರಿಂದ ಯುವಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಯೋಜನೆ ಜಾರಿಗೊಳಿಸುವುದು, ಕೃಷ್ಣಾ ನದಿ ನೀರನ್ನು ಬರಡು ಪ್ರದೇಶಗಳಿಗೆ ಹರಿಸುವುದು ಹಾಗೂ ಡಾ. ಪರಮಶಿವಯ್ಯ ವರದಿ ಅನುಷ್ಠಾನ ಕ್ಕಾಗಿ ನಡೆದ ಹೋರಾಟಗಳಲ್ಲಿ ಡಿವೈಎಫ್‌ಐ ಸಾಥ್ ನೀಡಿದೆ ಎಂದರು.

27cbpm1rahim bage

ಮೆರವಣಿಗೆ

ಸಮ್ಮೇಳನದ ಅಂಗವಾಗಿ ಪಟ್ಟಣದ ಟಿ.ಬಿ. ಕ್ರಾಸ್‌ನಿಂದ ನ್ಯಾಷನಲ್ ಕಾಲೇಜುವರೆಗೆ ಮುಖ್ಯರಸ್ತೆಯಲ್ಲಿ ಬಾವುಟಗಳನ್ನು ಕಟ್ಟಲಾಗಿತ್ತು. ಚಿತ್ರಾವತಿ ಸೇತುವೆ ಮಾರ್ಗವಾಗಿ ಮೆರವಣಿಗೆ ನಡೆಯಿತು.

ಸಮ್ಮೇಳನದಲ್ಲಿ ಖ್ಯಾತ ಬಹುಭಾಷಾ ಚಲನಚಿತ್ರ ನಟ ಹಾಗೂ ಚಿಂತಕ ಕಿಶೋರ್ ಕುಮಾರ್, ಡಿವೈಎಫ್‌ಐ ರಾಜ್ಯ ಅಧ್ಯಕ್ಷ ಲವಿತ್ರ ವಸ್ತ್ರದ, ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ, ಎಂ.ಪಿ. ಮುನಿ ವೆಂಕಟಪ್ಪ, ರಾಜಶೇಖರ, ಹರೀಶ್, ಇಮ್ರಾನ್, ಜಿ. ಕೃಷ್ಣಪ್ಪ, ವಾಲ್ಮೀಕಿ ಅಶ್ವತ್ಥಪ್ಪ, ದೇವಿಕುಂಟೆ ಶ್ರೀನಿವಾಸ್ ಸೇರಿದಂತೆ ಪ್ರಮುಖ ಪ್ರಗತಿಪರ ಚಿಂತಕರು ಹಾಗೂ ಸಂಘಟನೆಯ ಮುಖಂಡರು ಭಾಗವಹಿಸಿದ್ದರು.

ಜಿಲ್ಲಾಧ್ಯಕ್ಷ ರಾಜಶೇಖರ ಎಸ್., ಜಿಲ್ಲಾ ಕಾರ್ಯದರ್ಶಿ ಹರೀಶ್ ವೈ.ಎನ್., ಚನ್ನರಾಯಪ್ಪ, ಡಿ.ಟಿ. ಮುನಿಸ್ವಾಮಿ ಸೇರಿದಂತೆ ಮುಖಂಡರು ಉಪಸ್ಥಿತರಿದ್ದರು.