ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Chikkaballapur News: ಜಿಲ್ಲೆಯಲ್ಲಿ ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಇಲ್ಲ: ಜಿಲ್ಲಾಧಿಕಾರಿ ಜಿ.ಪ್ರಭು ಅಭಯ

ಇರಾನ್ ಅಮೇರಿಕಾ ಯುದ್ಧದ ಸಂದರ್ಭವನ್ನು ಬಳಸಿಕೊಂಡು ಕೆಲವರು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳ ಪೂರೈಕೆಯಲ್ಲಿ ಬಾರೀ ವ್ಯತ್ಯಯವಾಗುತ್ತಿದೆ. ಒಂದು ಸಿಲಿಂಡರ್‌ಗೆ 1500-1700 ನೀಡಿದರು ದೊರೆಯುತ್ತಿಲ್ಲ ಎಂಬAತಹ ವದಂತಿಗಳು ಹರಿದಾಡುತ್ತಿರುತ್ತಾರೆ.

ಜಿಲ್ಲೆಯಲ್ಲಿ ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಇಲ್ಲ

ಜಿಲ್ಲಾಧಿಕಾರಿಗಳ ಪೋಟೋ.. -

Ashok Nayak
Ashok Nayak Mar 13, 2026 10:26 PM

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳ ಪೂರೈಕೆಯು ಗ್ರಾಹಕರ ಬೇಡಿಕೆಯಂತೆ ಸರಬರಾಜು ಆಗುತ್ತಿದ್ದು ಯಾವುದೇ ವ್ಯತ್ಯಯವಾಗಿಲ್ಲ. ಸಾಮಾ ಜಿಕ ಜಾಲತಾಣಗಳ ಸುಳ್ಳು ಸುಳ್ಳು ಮಾಹಿತಿ ನಂಬಿ ಅಧೈರ್ಯ ಅಥವಾ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಜಿ.ಪ್ರಭು ಅಭಯ ನೀಡಿದರು.

ನಗರ ಹೊರವಲಯ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಎಂಬ ಸಾಮಾಜಿಕ ಜಾಲತಾಣಗಳ ಸುದ್ದಿಗಳ ಬಗ್ಗೆ ನಾಗರೀಕರಿಗೆ ಅರಿವು ಮೂಡಿಸುವ ಸಂಬಂಧ ಏರ್ಪಡಿಸಿದ್ದ ಸುದ್ದಿಗೋಷ್ಟಿ ಯಲ್ಲಿ ಮಾತನಾಡಿದರು.

ಇದನ್ನೂ ಓದಿ: Chikkaballapur News: ಚಿಕ್ಕಬಳ್ಳಾಪುರದಲ್ಲಿ ಸುಡು ಬಿಸಿಲಿನಲ್ಲೂ ಸಿಲಿಂಡರ್‌ಗಾಗಿ ಕ್ಯೂ ನಿಂತ ಜನತೆ

ಇರಾನ್ ಅಮೇರಿಕಾ ಯುದ್ಧದ ಸಂದರ್ಭವನ್ನು ಬಳಸಿಕೊಂಡು ಕೆಲವರು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳ ಪೂರೈಕೆಯಲ್ಲಿ ಬಾರೀ ವ್ಯತ್ಯಯವಾಗುತ್ತಿದೆ. ಒಂದು ಸಿಲಿಂಡರ್‌ಗೆ 1500-1700 ನೀಡಿದರು ದೊರೆಯುತ್ತಿಲ್ಲ ಎಂಬAತಹ ವದಂತಿಗಳು ಹರಿದಾಡುತ್ತಿರುತ್ತಾರೆ. ಇವುಗಳನ್ನು ನೋಡಿದಾಗ ಸಹಜವಾಗಿ ನಾಗರೀಕರು ಚಿಂತೆಗೀಡಾಗುತ್ತಾರೆ. ಹೀಗೆ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಜಿಲ್ಲೆಯಲ್ಲಿ ಈ ಹಿಂದಿನಂತೆಯೇ ಗ್ರಾಹಕರಿಗೆ ಅಗತ್ಯವಿರುವ ಪ್ರಮಾಣದಲ್ಲಿ ಅಡುಗೆ ಅನಿಲ ಸಿಲಿಂಡರ್‌ ಗಳು ಅವರ ಮನೆಬಾಗಿಲಿಗೆ ಸರಬರಾಜಾಗುತ್ತಿವೆ. ಮಾ.12.ರಂತೆ 11355 ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳ ದಾಸ್ತಾನು ಜಿಲ್ಲೆಯಲ್ಲಿ ಲಭ್ಯವಿರುತ್ತದೆ ಎಂದು ತಿಳಿಸಿದರು.

ಗ್ರಾಹಕರು-ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಬರುವ ಇಂತಹ ವದಂತಿಗಳಿಗೆ ಸಹ ಕಿವಿಗೊಟ್ಟು ಅನಗತ್ಯ ಆತಂಕಕ್ಕೆ ಒಳಗಾಗಬಾರದು. ಅಲ್ಲದೆ ಈ ಸಂದರ್ಭವನ್ನು ಬಳಸಿಕೊಂಡು ಗೃಹಬಳಕೆ ಸಿಲಿಂಡರ್‌ಗಳನ್ನು ಅಕ್ರಮವಾಗಿ ಮತ್ತು ಹೆಚ್ಚುವರಿಯಾಗಿ ದಾಸ್ತಾನು ಮಾಡಿಕೊಳ್ಳುವುದು ಕೂಡ ಸರಿಯಲ್ಲ. ಗೃಹಬಳಕೆ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಕೆ ಮಾಡುವುದು ಮತ್ತು ಗೃಹಬಳಕೆ ಸಿಲಿಂಡರ್‌ಗಳನ್ನು ಡೈವರ್ಷನ್ ಮಾಡುವುದು ಕಾನೂನು ಬಾಹಿರ ಕೃತ್ಯವಾಗಿದೆ. ಇಂತಹ ಪ್ರಕರಣಗಳನ್ನು ಪತ್ತೆಹಚ್ಚಲು ತಾಲ್ಲೂಕು ಮಟ್ಟದಲ್ಲಿ ವಿಶೇಷ ತಂಡಗಳನ್ನು ರಚನೆ ಮಾಡಲಾಗಿದೆ. ಯಾರೂ ಕೂಡ ಭಯಪಡಬೇಡಿ ಎಂದು ಮನವಿ ಮಾಡಿದ್ದಾರೆ.

ಅಕ್ರಮವಾಗಿ ಅನಿಲ ಸಿಲಿಂಡರ್‌ಗಳನ್ನು ದಾಸ್ತಾನು ಮಾಡುವ ಕೃತ್ಯಗಳು ಕಂಡುಬಂದಲ್ಲಿ ಅಂತಹವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ-1955ರನ್ವಯ ಪ್ರಕರಣ ದಾಖಲಿಸಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದೆಂದು ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು.