ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Free Tobacco Campaign: ಡಿ.೯ ರವರೆಗೆ ಜಿಲ್ಲೆಯಲ್ಲಿ ತಂಬಾಕು ಮುಕ್ತ ಯುವ ಅಭಿಯಾನ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವತಿಯಿಂದ ಗ್ರಾಮೀಣ ಭಾಗದ ಸಾರ್ವ ಜನಿಕರಿಗೆ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಹಾಗೂ ವ್ಯಸನದಿಂದ ಹೊರ ಬರಲು ತಂಬಾಕು ವ್ಯಸನ ಮುಕ್ತ ಕೇಂದ್ರಗಳಲ್ಲಿ ದೊರೆಯುವ  ಸೌಲಭ್ಯಗಳ ಬಗ್ಗೆ ತಿಳಿಸಿ ಹಳ್ಳಿಗಳನ್ನು ತಂಬಾಕು ಮುಕ್ತ ಗ್ರಾಮಗಳನ್ನಾಗಿಸಲು ಪ್ರೇರೆಪಿಸುವುದು.

ಡಿ.೯ ರವರೆಗೆ ಜಿಲ್ಲೆಯಲ್ಲಿ ತಂಬಾಕು ಮುಕ್ತ ಯುವ ಅಭಿಯಾನ

-

Ashok Nayak Ashok Nayak Oct 14, 2025 12:37 AM

ಚಿಕ್ಕಬಳ್ಳಾಪುರ: ಭಾರತದಲ್ಲಿ ಸಾವಿಗೆ ತಂಬಾಕು ಸೇವನೆ ಪ್ರಮುಖ ಕಾರಣಗಳಲ್ಲಿ ಒಂದಾಗಿದ್ದು, ಇದರ ಪರಿಣಾಮವಾಗಿ ವಾರ್ಷಿಕವಾಗಿ ೧೩.೫ ಲಕ್ಷ ಸಾವುಗಳು ಸಂಭವಿಸುತ್ತವೆ. ಮಕ್ಕಳು ಹದಿ ಹರೆಯದಲ್ಲಿ ತಂಬಾಕು ಸೇವನೆ ಮಾಡುವ ಪ್ರಮಾಣ ಹೆಚ್ಚುತ್ತಿರುವುದು ಆತಂಕಕಾರಿ ವಿಷಯ ವಾಗಿದೆ. ತಂಬಾಕು ಸೇವನೆಯಿಂದ ಆಗುವ ಅನಾರೋಗ್ಯಗಳ ಬಗ್ಗೆ ಜನರಿಗೆ ತಿಳಿಸಿ ಕೊಡುವ ನಿಟ್ಟಿನಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ತಂಬಾಕು ಮುಕ್ತ ಯುವ ಅಭಿಯಾನ ೩.೦ ಎನ್ನುವ ವಿಶೇಷ ಅಭಿಯಾನವನ್ನು ೯ನೇ ಅಕ್ಟೋಬರ್ ೨೦೨೫ ರಂದು ಮಾನ್ಯ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಚಾಲನೆ ನೀಡಿದೆ.

ಅದರಂತೆ ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ೬೦ ದಿನಗಳ ಕಾಲ ತಂಬಾಕು ಮುಕ್ತ ಯುವ ಅಭಿಯಾನ ೩.೦ ಅಭಿಯಾನವನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಇದರ ಮುಖ್ಯ ಉದ್ದೇಶ ಸಾರ್ವಜನಿಕರಿಗೆ ಮತ್ತು ಯುವಪೀಳಿಗೆಗೆ ತಂಬಾಕು ಸೇವೆನಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಹಾಗೂ ಪರೋಕ್ಷ ದೂಮಪಾನದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವು ದಾಗಿರುತ್ತದೆ.

ಇದನ್ನೂ ಓದಿ: Anti Tobacco Campaign: ತಂಬಾಕು ವಿರೋಧಿ ಅಭಿಯಾನ ಆರಂಭಿಸಿದ ಉಜ್ಜೀವನ್‌ ಸ್ಮಾಲ್‌ ಫೈನಾನ್ಸ್‌ ಬ್ಯಾಂಕ್‌

ತಂಬಾಕು ಮುಕ್ತ ಯುವ ಅಭಿಯಾನ ೩.೦ರ ೬೦ ದಿನಗಳಲ್ಲಿ (೦೯.೧೦.೨೦೨೫ ರಿಂದ ೦೯.೧೨.೨೦೨೫) ಜಿಲ್ಲೆಯಾದ್ಯಂತ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುವುದು.

ತಂಬಾಕಿನ ಹಾನಿಕಾರಕ ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವತಿಯಿಂದ ಗ್ರಾಮೀಣ ಭಾಗದ ಸಾರ್ವಜನಿಕರಿಗೆ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಹಾಗೂ ವ್ಯಸನದಿಂದ ಹೊರಬರಲು ತಂಬಾಕು ವ್ಯಸನ ಮುಕ್ತ ಕೇಂದ್ರಗಳಲ್ಲಿ ದೊರೆಯುವ  ಸೌಲಭ್ಯಗಳ ಬಗ್ಗೆ ತಿಳಿಸಿ ಹಳ್ಳಿಗಳನ್ನು ತಂಬಾಕು ಮುಕ್ತ ಗ್ರಾಮಗಳನ್ನಾಗಿಸಲು ಪ್ರೇರೇಪಿಸುವುದು.

ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಕೋಟ್ಪಾ ದಾಳಿಗಳನ್ನು ಹಮ್ಮಿಕೊಳ್ಳುವುದು ಮತ್ತು ಇ-ಸಿಗರೇಟ್ ಕಾಯ್ದೆ-೨೦೧೯ಅನ್ನು  ಅನುಷ್ಠಾನಗೊಳಿಸುವುದು. ಯುವಕರನ್ನು ತಂಬಾಕಿನ ಹಸ್ತಕ್ಷೇಪ ದಿಂದ ರಕ್ಷಿಸಲು ಸಾಮಾಜಿಕ ಮಾಧ್ಯಮದ ಮೂಲಕ ಅರಿವು ಮೂಡಿಸುವುದು.

ತಂಬಾಕು ನಿಯಂತ್ರಣ ಕಾರ್ಯಕ್ರಮದ ಬಗ್ಗೆ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಅರಿವು ಮೂಡಿಸುವುದು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ  ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮೂಲಕ ವಿವಿಧ ಐ.ಇ.ಸಿ ಅಭಿಯಾನವನ್ನು ಹಮ್ಮಿಕೊಳ್ಳುವುದು.

ಶಾಲಾ/ಕಾಲೇಜುಗಳನ್ನು ತಂಬಾಕು ಮುಕ್ತ ಶೈಕ್ಷಣಿಕ ಸಂಸ್ಥೆಗಳನ್ನಾಗಿಸಲು ಕ್ರಮ ವಹಿಸುವುದು. ಶಾಲಾ/ಕಾಲೇಜುಗಳಿಗೆ ಭೇಟಿ  ನೀಡಿ ವಿದ್ಯಾರ್ಥಿಗಳಿಗೆ ತಂಬಾಕು ಸೇವೆನ ಯಿಂದಾಗುವ ದುಷ್ಪರಿ ಣಾಮಗಳ ಕುರಿತು ಅರಿವು ಮೂಡಿಸುವುದು.

ಹೀಗೆ ೬೦ ದಿನಗಳ ಕಾಲ ಜಿಲ್ಲೆಯಾದ್ಯಂತ ತಂಬಾಕು ಮುಕ್ತ ಯುವ ಅಭಿಯಾನ ೩.೦ ಅಭಿಯಾನ ವನ್ನು ಜಿಲ್ಲಾ ತಂಬಾಕು ನಿಯಂತ್ರಣ ಕೋಶವು ಹಮ್ಮಿಕೊಂಡಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.