ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Chikkaballapur News: ಕಲಿಕಾ ಕೇಂದ್ರದಲ್ಲಿ ಮಕ್ಕಳಿಗೆ ಉಚಿತ ಶಿಕ್ಷಣದ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ

ಶಿಕ್ಷಣದಿಂದ ವಂಚಿತರಾಗುವ ಮಕ್ಕಳಿಗೆ ಗುಣಮಟ್ಟದ ಕಲಿಕಾ ವಾತಾವರಣ ಕಲ್ಪಿಸುವ ಉದ್ದೇಶದಿಂದ ವಿವೇಕಾನಂದ ಸಾಮಾಜಿಕ ಸಂಸ್ಥೆ ಹಾಗೂ ತರಬೇತಿ ಸಂಸ್ಥೆಯ ವತಿಯಿಂದ ಆರಂಭಿಸಿರುವ ಡಾ.ಬಿ.ಆರ್.ಅಂಬೇಡ್ಕರ್ ಮಕ್ಕಳ ಸ್ನೇಹಿ ಗೃಹಾಲಯ ಮತ್ತು ಕಲಿಕಾ ಕೇಂದ್ರದಲ್ಲಿ ‘ಕಲಿಕಾ ಸಂಭ್ರಮ’ ಕಾರ್ಯಕ್ರಮ ನಡೆಯಿತು.

ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಪೂರಕವಾದ ಕಾರ್ಯಕ್ರಮ: ಶಿಕ್ಷಣ ತಜ್ಞರ ಕರೆ

-

Profile
Ashok Nayak Oct 7, 2026 12:52 PM

ಚಿಕ್ಕಬಳ್ಳಾಪುರ: ಶಿಕ್ಷಣದಿಂದ ವಂಚಿತರಾಗುವ ಮಕ್ಕಳಿಗೆ ಗುಣಮಟ್ಟದ ಕಲಿಕಾ ವಾತಾವರಣ ಕಲ್ಪಿಸುವ ಉದ್ದೇಶದಿಂದ ವಿವೇಕಾನಂದ ಸಾಮಾಜಿಕ ಸಂಸ್ಥೆ ಹಾಗೂ ತರಬೇತಿ ಸಂಸ್ಥೆಯ ವತಿಯಿಂದ ಆರಂಭಿಸಿರುವ ಡಾ.ಬಿ.ಆರ್.ಅಂಬೇಡ್ಕರ್ ಮಕ್ಕಳ ಸ್ನೇಹಿ ಗೃಹಾಲಯ ಮತ್ತು ಕಲಿಕಾ ಕೇಂದ್ರದಲ್ಲಿ ‘ಕಲಿಕಾ ಸಂಭ್ರಮ’ ಕಾರ್ಯಕ್ರಮ ನಡೆಯಿತು.

ಮಂಚನಬೆಲೆ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಗಂಗರಾಜು ಮಾತನಾಡಿ, ಕೇಂದ್ರದಲ್ಲಿ ಸುಮಾರು 45 ವಿದ್ಯಾರ್ಥಿಗಳಿಗೆ ನುರಿತ ಶಿಕ್ಷಕರಿಂದ ವಿವಿಧ ಶೈಕ್ಷಣಿಕ ಹಾಗೂ ಪಠ್ಯೇತರ ಚಟುವಟಿಕೆಗಳ ಮೂಲಕ ತರಬೇತಿ ನೀಡಲಾಗುತ್ತಿದೆ. 

ಇದನ್ನೂ ಓದಿ: Chikkaballapur News: ಸಾಹಿತಿ–ಹೋರಾಟಗಾರರ ಸೇವೆ ಪರಿಗಣಿಸಿ ಆಯ್ಕೆ ಮಾಡುವಂತೆ ಸಿ.ಕೆ.ರಾಮೇಗೌಡ ಮನವಿ

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಅಗತ್ಯವಿರುವ ಹೆಚ್ಚಿನ ಕಲಿಕಾ ಸಾಮಗ್ರಿಗಳನ್ನು ಒದಗಿಸುವುದರ ಜೊತೆಗೆ ಸ್ಮಾರ್ಟ್ ಕ್ಲಾಸ್ ವ್ಯವಸ್ಥೆ ಕಲ್ಪಿಸಲಾಗುವುದು. ಎಸ್‌ಎಸ್‌ಎಲ್‌ಸಿ, ಪಿಯುಸಿ ಸೇರಿದಂತೆ ವಿವಿಧ ಪರೀಕ್ಷೆಗಳಿಗೆ ಮಕ್ಕಳಿಗೆ ಉಚಿತ ತರಬೇತಿ ನೀಡುವ ಉದ್ದೇಶ ಹೊಂದಲಾಗಿದೆ ಎಂದು ತಿಳಿಸಿದರು.

1290719 ok

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸರ್ಕಾರಿ ಶಿಕ್ಷಕರ ತರಬೇತಿ ಸಂಸ್ಥೆಯ ಮನೋವಿಜ್ಞಾನ ಉಪನ್ಯಾಸಕ ಶಂಕರ್ ಮಾತನಾಡಿ, ಮಕ್ಕಳಲ್ಲಿ ಶಿಕ್ಷಣದ ಜೊತೆಗೆ ಆತ್ಮವಿಶ್ವಾಸ, ನೈತಿಕ ಮೌಲ್ಯಗಳು ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವ ಅಗತ್ಯವಿದೆ ಎಂದು ಹೇಳಿದರು. 

ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನ, ಸಾಧನೆ ಹಾಗೂ ಸಂವಿಧಾನದ ಆಶಯಗಳನ್ನು ಮಕ್ಕಳಿಗೆ ಪರಿಚಯಿಸುವ ಮೂಲಕ ಉತ್ತಮ ನಾಗರಿಕರನ್ನಾಗಿ ರೂಪಿಸಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಿ ಮಕ್ಕಳಿಗೆ ಮಾರ್ಗದರ್ಶನ ನೀಡಿದರು. ಶಿಕ್ಷಣದ ಮೂಲಕ ಮಕ್ಕಳ ಬದುಕಿನಲ್ಲಿ ಬದಲಾವಣೆ ತರಲು ಕಲಿಕಾ ಕೇಂದ್ರದ ಪ್ರಯತ್ನ ಶ್ಲಾಘನೀಯವಾಗಿದೆ ಎಂದು ಸಂಸ್ಥೆಯ ಕಾರ್ಯಕ್ರಮವನ್ನು ಶ್ಲಾಘಿಸಿದರು.