ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

SIR: ಮತದಾರರ ಹಕ್ಕು–ಆಕ್ಷೇಪಣೆಗಳ ವಿಲೇವಾರಿಯಲ್ಲಿ ಪಾರದರ್ಶಕತೆ ಕಡ್ಡಾಯ: ಜಿಲ್ಲಾಧಿಕಾರಿ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಹಿನ್ನೆಲೆಯಲ್ಲಿ ಕರಡು ಮತದಾರರ ಪಟ್ಟಿಗೆ ಸಲ್ಲಿಕೆ ಯಾಗುವ ಹಕ್ಕು ಮತ್ತು ಆಕ್ಷೇಪಣೆಗಳನ್ನು ನಿಯಮಾನುಸಾರ, ನಿಷ್ಪಕ್ಷಪಾತವಾಗಿ ಹಾಗೂ ಸಮರ್ಪಕ ವಾಗಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಜಿ.ಪ್ರಭು ಅವರು ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ (ಬಿಎಲ್‌ಒ) ಸೂಚಿಸಿದರು.

ಮತದಾರರ ಹಕ್ಕು–ಆಕ್ಷೇಪಣೆಗಳ ವಿಲೇವಾರಿಯಲ್ಲಿ ಪಾರದರ್ಶಕತೆ ಕಡ್ಡಾಯ

-

Profile
Ashok Nayak Aug 21, 2026 11:31 AM

ಚಿಕ್ಕಬಳ್ಳಾಪುರ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಹಿನ್ನೆಲೆಯಲ್ಲಿ ಕರಡು ಮತದಾರರ ಪಟ್ಟಿಗೆ ಸಲ್ಲಿಕೆಯಾಗುವ ಹಕ್ಕು ಮತ್ತು ಆಕ್ಷೇಪಣೆಗಳನ್ನು ನಿಯಮಾನುಸಾರ, ನಿಷ್ಪಕ್ಷಪಾತವಾಗಿ ಹಾಗೂ ಸಮರ್ಪಕವಾಗಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಜಿ.ಪ್ರಭು ಅವರು ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ (ಬಿಎಲ್‌ಒ) ಸೂಚಿಸಿದರು.

ನಗರದ ಕನ್ನಡ ಭವನದಲ್ಲಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಬಿಎಲ್‌ಒಗಳು ಹಾಗೂ ಮೇಲ್ವಿಚಾರಕರಿಗಾಗಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದರು.

ಇದನ್ನೂ ಓದಿ: Chikkaballapur News: ಬರದ ಹೊಡೆತಕ್ಕೆ ರೈತ ಸಂಘ ಆಕ್ರೋಶ; ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಎಕೆಆರ್‌ಎಸ್ ಆಗ್ರಹ

ಯಾವುದೇ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಎಚ್ಚರಿಕೆ ವಹಿಸ ಬೇಕು. ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ, ಅರ್ಜಿಗಳ ಪರಿಶೀಲನೆ, ನೋಟಿಸ್ ಜಾರಿ, ವಿಚಾರಣೆ ಹಾಗೂ ಅಂತಿಮ ವಿಲೇವಾರಿ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ನಡೆಸಬೇಕು. ಪ್ರತಿಯೊಂದು ಹಂತದ ದಾಖಲಾತಿಗಳನ್ನು ವ್ಯವಸ್ಥಿತವಾಗಿ ಸಂಗ್ರಹಿಸಿಡಬೇಕು ಎಂದು ಸೂಚಿಸಿದರು.

ಕರಡು ಮತದಾರರ ಪಟ್ಟಿ ಪ್ರಕಟಣೆ ಬಳಿಕ ಸ್ವೀಕರಿಸುವ ಹಕ್ಕು ಮತ್ತು ಆಕ್ಷೇಪಣೆಗಳ ಕುರಿತು ನೋಟಿಸ್ ಜಾರಿ, ಅಗತ್ಯವಿದ್ದಲ್ಲಿ ವಿಚಾರಣೆ ನಡೆಸುವ ವಿಧಾನಗಳ ಬಗ್ಗೆ ತರಬೇತಿ ನೀಡಲಾಯಿತು. ಮತದಾರರ ಪಟ್ಟಿಯಲ್ಲಿನ ದೋಷ, ವೈಪರೀತ್ಯ ಹಾಗೂ ಮ್ಯಾಪಿಂಗ್ ಆಗದ ಪ್ರಕರಣಗಳ ಗುರುತಿಸು ವಿಕೆ ಮತ್ತು ಪರಿಹಾರ ಕ್ರಮಗಳ ಕುರಿತು ಅಧಿಕಾರಿಗಳಿಗೆ ಮಾಹಿತಿ ನೀಡಲಾಯಿತು.

ಕಾರ್ಯಾಗಾರದಲ್ಲಿ ಉಪವಿಭಾಗಾಧಿಕಾರಿ ಡಿ.ಹೆಚ್.ಅಶ್ವಿನ್, ಜಿಲ್ಲಾ ಪಂಚಾಯತ್ ಉಪಕಾರ್ಯ ದರ್ಶಿ ಅತಿಕ್ ಪಾಷಾ, ಸಹಾಯಕ ಚುನಾವಣಾಧಿಕಾರಿಗಳು, ನೋಡಲ್ ಅಧಿಕಾರಿಗಳು, ಬಿಎಲ್‌ಒ ಮೇಲ್ವಿಚಾರಕರು ಹಾಗೂ ಮತಗಟ್ಟೆ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.